ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಯೋಜನೆಗಳ ಕುರಿತು ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳಲ್ಲಿ ಹೊಂದಾಣಿಕೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಕುರಿತು ಶ್ವೇತಪತ್ರ ಹೊರಡಿಸಿ ಸದನಕ್ಕೆ ನಿಖರ ಮಾಹಿತಿ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಶಕ್ತಿ ಯೋಜನೆಯಡಿ 3.5 ಕೋಟಿ ಮಹಿಳೆಯರು 796 ಕೋಟಿ ಉಚಿತ ಪ್ರಯಾಣ ಮಾಡಿದ್ದು, ಮೂರು ವರ್ಷಗಳಲ್ಲಿ ₹14,875 ಕೋಟಿ ವೆಚ್ಚವಾಗಿದೆ ಎಂದು ಹೇಳಿದ್ದಾರೆ. ಆದರೆ ಜೂನ್ 11ರಂದು ಮುಖ್ಯಮಂತ್ರಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ 753.7 ಕೋಟಿ ಉಚಿತ ಪ್ರಯಾಣಕ್ಕೆ ₹19,771 ಕೋಟಿ ಮೌಲ್ಯದ ಟಿಕೆಟ್ ನೀಡಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಮೇ 25ರ ಪೋಸ್ಟ್‌ನಲ್ಲಿ 726 ಕೋಟಿ ಪ್ರಯಾಣಕ್ಕೆ ₹18,943 ಕೋಟಿ ವೆಚ್ಚವಾಗಿದೆ ಎಂದು ತಿಳಿಸಲಾಗಿತ್ತು. ಈ ಅಂಕಿ-ಅಂಶಗಳ ನಡುವೆ ಸಾವಿರಾರು…