ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯದಂಚಿನಲ್ಲಿ ಮೂವರು ರೈತರು ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆಗೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಅರಣ್ಯ ಇಲಾಖೆಯ ದರ್ಪಕ್ಕೆ ಸಾಕ್ಷಿ ಎಂದು ಆರೋಪಿಸಿರುವ ಪಕ್ಷ, ಘಟನೆ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಮೃತಪಟ್ಟವರು ಹಸು ಹುಡುಕಲು ತೆರಳಿದ್ದ ಅಮಾಯಕ ರೈತರು ಎಂದು ಹೇಳಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳು ಕಥೆ ಕಟ್ಟಿಕೊಂಡು ಕೊಲೆ ಮಾಡಿದ್ದರೆ, ಸಾಕ್ಷ್ಯ ನಾಶಕ್ಕೆ ಯತ್ನಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದೆ. ಮೂವರ ಸಾವನ್ನು ‘ನಕಲಿ ಎನ್‌ಕೌಂಟರ್’ ಎಂದು ಆರೋಪಿಸಿರುವ ಜೆಡಿಎಸ್, ಮೃತಪಟ್ಟವರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ…
Day: August 17, 2026
ಅಶೋಕ್‌ಧಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: 7 ಭಕ್ತರು ಸಾವು
ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್‌ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶ್ರಾವಣ ಮಾಸದ ಮೂರನೇ ಸೋಮವಾರದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಬೆಳಗ್ಗೆ ಸುಮಾರು 6.45ರ ವೇಳೆಗೆ ಜನಸಂದಣಿ ಹೆಚ್ಚಾಗಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿದ್ದು, ಇದರಿಂದ ಭಕ್ತರಲ್ಲಿ ಆತಂಕ ಉಂಟಾಗಿ ಏಕಾಏಕಿ ಓಡಲು ಆರಂಭಿಸಿದ ಪರಿಣಾಮ ನೂಕುನುಗ್ಗಲು ಉಂಟಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ದೇವಸ್ಥಾನದ ಪ್ರವೇಶದ್ವಾರದ ಬಳಿ ಸುಮಾರು 100 ಮಂದಿ ಬ್ಯಾರಿಕೇಡ್ ದಾಟಲು ಮುಂದಾದಾಗ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಇಳಿಜಾರು ಮಾರ್ಗದಲ್ಲಿ ಭಕ್ತರು ಪರಸ್ಪರ ತಳ್ಳಿಕೊಂಡ ಪರಿಣಾಮ ಬ್ಯಾರಿಕೇಡ್ ಕುಸಿದು ಹಲವರು ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ತಕ್ಷಣ ಲಖಿಸರಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಳಿಕ ಆಡಳಿತ ಹಾಗೂ ರಕ್ಷಣಾ…
ತಾರಾಪೀಠ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 7 ಮಂದಿ ಸಾವು
ಕೋಲ್ಕತ್ತ: ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಾರಾಪೀಠದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾರಾಪೀಠ ಪೊಲೀಸ್ ಠಾಣೆಯಿಂದ ಕೆಲವೇ ದೂರದಲ್ಲಿರುವ ನಾಲ್ಕು ಅಂತಸ್ತಿನ ಖಾಸಗಿ ಹೋಟೆಲ್ ‘ಬಿದೇಶಿನಿ’ಯ ನೆಲಮಹಡಿಯಲ್ಲಿ ಬೆಳಗ್ಗೆ ಸುಮಾರು 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಆ ವೇಳೆ ಬಹುತೇಕ ಅತಿಥಿಗಳು ಗಾಢ ನಿದ್ದೆಯಲ್ಲಿದ್ದರಿಂದ ದಟ್ಟ ಹೊಗೆ ಮತ್ತು ಬೆಂಕಿಯಿಂದ ಹೊರಬರಲು ಪರದಾಡುವಂತಾಯಿತು. ಬೆಂಕಿ ಕೆಲವೇ ಕ್ಷಣಗಳಲ್ಲಿ ಹೋಟೆಲ್‌ನ ಇತರ ಭಾಗಗಳಿಗೂ ವ್ಯಾಪಿಸಿದ್ದು, ಇಡೀ ಕಟ್ಟಡ ದಟ್ಟ ಹೊಗೆಯಿಂದ ಆವೃತವಾಗಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ರಕ್ಷಣಾ ಸಿಬ್ಬಂದಿ ಹೋಟೆಲ್‌ನಿಂದ ಗಾಯಾಳುಗಳನ್ನು ಹೊರತೆಗೆದು ರಾಂಪುರಹಾಟ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ರಾವಣ ಮಾಸದ ಸೋಮವಾರವಾಗಿದ್ದರಿಂದ ತಾರಾಪೀಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಹೀಗಾಗಿ…
ಮಧುಮೇಹ ತಡೆಗಟ್ಟುವಿಕೆ ರಾಷ್ಟ್ರೀಯ ಆದ್ಯತೆಯಾಗಬೇಕು: ಜಿತೇಂದ್ರ ಸಿಂಗ್
ನವದೆಹಲಿ: ಮಧುಮೇಹ ತಡೆಗಟ್ಟುವಿಕೆ ಹಾಗೂ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ರಾಷ್ಟ್ರೀಯ ಆದ್ಯತೆಯನ್ನಾಗಿ ಮಾಡಬೇಕು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಕರೆ ನೀಡಿದ್ದಾರೆ. ಗ್ರಾಮೀಣ ಸಮುದಾಯಗಳಲ್ಲೂ ಮಧುಮೇಹದ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಆರ್‌ಎಸ್‌ಎಸ್‌ಡಿಐ ಮಧುಮೇಹ ಗ್ರಾಮೀಣ ಔಟ್‌ರೀಚ್ ಡಿಜಿಟಲ್ ಪೋರ್ಟಲ್ ಹಾಗೂ ವಿಶ್ವಾಸ್ ಮಧುಮೇಹ ಜಾಗೃತಿ ವೀಡಿಯೊ ಲೈಬ್ರರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಧುಮೇಹದ ಹೆಚ್ಚುತ್ತಿರುವ ಹೊರೆಯನ್ನು ಎದುರಿಸಲು ಸಮುದಾಯ ಆಧಾರಿತ, ತಂತ್ರಜ್ಞಾನ ಸಕ್ರಿಯ ಮತ್ತು ದತ್ತಾಂಶ ಆಧಾರಿತ ವಿಧಾನ ಅಗತ್ಯವಿದೆ ಎಂದರು. ಭಾರತದ ಶೇ.70ಕ್ಕೂ ಹೆಚ್ಚು ಜನಸಂಖ್ಯೆ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಯುವಜನರ ಆರೋಗ್ಯ ನಿರ್ಣಾಯಕವಾಗಿದೆ ಎಂದು ಸಿಂಗ್ ಹೇಳಿದರು. ಗ್ರಾಮೀಣ ಭಾರತವೂ ಮಧುಮೇಹದ ಅಪಾಯದಿಂದ ಹೊರತಾಗಿಲ್ಲ. ಆರಂಭಿಕ ಪತ್ತೆ, ಸಮಯೋಚಿತ ಚಿಕಿತ್ಸೆ, ಜೀವನಶೈಲಿ…
ರೈತರಿಗೆ ಶೂನ್ಯ ಬಡ್ಡಿ ಸಾಲ; ₹667 ಕೋಟಿ ಕಿಸಾನ್ ಸಮ್ಮಾನ್ ನಿಧಿ: ಸಬಲೀಕರಣಕ್ಕೆ ಒತ್ತು
ಆಲ್ವಾರ್: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿ ಸಾಧಿಸಲು ಯುವಕರು, ಬಡವರು, ರೈತರು ಹಾಗೂ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಅತ್ಯಂತ ಅಗತ್ಯ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದ ಆಲ್ವಾರ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ರಾಜ್ಯದ 17 ಜಿಲ್ಲೆಗಳಲ್ಲಿ ₹6,453 ಕೋಟಿ ವೆಚ್ಚದ 954 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಆಲ್ವಾರ್‌ನಲ್ಲಿ ದಿನಕ್ಕೆ 3 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಶಾ, ಬಳಿಕ ಇದರ ಸಾಮರ್ಥ್ಯವನ್ನು 5 ಲಕ್ಷ ಲೀಟರ್‌ಗೆ ಹೆಚ್ಚಿಸಲಾಗುವುದು ಎಂದರು. ಡೈರಿ ಮತ್ತು ಸಹಕಾರಿ ಕ್ಷೇತ್ರಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಜೊತೆಗೆ ಜಾನುವಾರು ಸಾಕಾಣಿಕೆದಾರರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿವೆ ಎಂದು ಹೇಳಿದರು. ಭಿಲ್ವಾರ, ಜೈಪುರ, ಪಾಲಿ ಮತ್ತು ರಾಜ್‌ಸಮಂದ್‌ನ ನಾಲ್ಕು ಸರಸ್ ಡೈರಿ ಘಟಕಗಳನ್ನು…
ಹನೂರು ಅರಣ್ಯದಲ್ಲಿ ಮೂವರು ಸಾವು: ಕರ್ನಾಟಕ ಅರಣ್ಯ ಇಲಾಖೆ ವಿರುದ್ಧ ವಿಜಯ್, ಸ್ಟಾಲಿನ್ ಆಕ್ರೋಶ
ಚೆನ್ನೈ: ಕರ್ನಾಟಕದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ತಮಿಳುನಾಡು ಮೂಲದವರು ಮೃತಪಟ್ಟಿರುವ ಘಟನೆಗೆ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯ್, ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಅಗತ್ಯ ನೆರವು ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆಗಸ್ಟ್ 15ರ ಮುಂಜಾನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಮೃತಪಟ್ಟಿದ್ದರು. ನಾಲ್ಕನೇ ವ್ಯಕ್ತಿ ಮಹಿಮಾ ದಾಸ್ ಗಾಯಗೊಂಡು…
ಬೆಂಗಳೂರಿನ ಬೆಳ್ಳಂದೂರು ಬಳಿ 800 ಕೆಜಿಗೂ ಹೆಚ್ಚು ಸ್ಫೋಟಕ ವಶ
ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲುಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಬೆಳ್ಳಂದೂರು ಠಾಣೆ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಭೋಗನಹಳ್ಳಿಯಲ್ಲಿ ಖಾಸಗಿ ಕಂಪನಿಯೊಂದರಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ವೇಳೆ ಬೃಹತ್ ಕಲ್ಲುಬಂಡೆಗಳು ಪತ್ತೆಯಾಗಿವೆ. ಅವುಗಳನ್ನು ತೆರವುಗೊಳಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಜಿಲೆಟಿನ್ ಬಳಸಿ ಸ್ಫೋಟಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದ ಸಮೀಪವೇ ಶಾಲೆಯಿದ್ದು, ತಡ ರಾತ್ರಿಯೂ ಬ್ಲಾಸ್ಟಿಂಗ್ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಶಾಲೆಯ ಸಮೀಪ ಸ್ಫೋಟಕ ವಸ್ತುಗಳನ್ನು ಬಳಸುತ್ತಿರುವುದರಿಂದ ಮಕ್ಕಳ ಸುರಕ್ಷತೆ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳ್ಳಂದೂರು ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಸ್ಫೋಟಕ ವಸ್ತುಗಳನ್ನು ಹೇಗೆ…
