ಬೆಂಗಳೂರು: ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ಸರ್ಕಾರದ ಕ್ರಮಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಪೋಸ್ಟ್ ಮಾಡಿರುವ ಅವರು, “ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಐತಿಹಾಸಿಕ ಬೆಂಗಳೂರಿನ ಭವಿಷ್ಯವನ್ನೇ ಹಾಳು ಮಾಡಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ?” ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು ‘ಗಾರ್ಡನ್ ಸಿಟಿ’ ಎಂಬ ಹೆಗ್ಗಳಿಕೆ ಸರ್ಕಾರದ ಕೊಡುಗೆಯಲ್ಲ. ಹಲವು ತಲೆಮಾರುಗಳ ಜನರ ಪರಿಶ್ರಮದಿಂದ ಉಳಿದಿರುವ ಹಸಿರಿನಿಂದ ನಗರ ಈ ಸ್ಥಾನ ಪಡೆದಿದೆ ಎಂದು ಅವರು ಹೇಳಿದ್ದಾರೆ. ‘ಪಾರ್ಕ್‌ಗಳು ರಿಯಲ್ ಎಸ್ಟೇಟ್‌ಗಾಗಿ ಖಾಲಿ ಜಾಗವಲ್ಲ’ ಪಾರ್ಕ್‌ಗಳು ರಿಯಲ್ ಎಸ್ಟೇಟ್‌ಗಾಗಿ ಮೀಸಲಿಟ್ಟ ಖಾಲಿ ಜಾಗವಲ್ಲ, ಅವು ನಗರದ “ಶ್ವಾಸಕೋಶ” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಈಗಾಗಲೇ ಕಾಂಕ್ರೀಟೀಕರಣ, ವಾಯುಮಾಲಿನ್ಯ, ಹೆಚ್ಚುತ್ತಿರುವ…
