ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ನಾಲ್ಕು ವರ್ಷಗಳಿಂದ ಚಿತ್ರಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು ಫ್ಯಾನ್ ಶೋಗಳಿಗೆ ಮುಗಿಬಿದ್ದಿದ್ದಾರೆ. ವಿಶ್ವಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿರುವ ಸಿನಿಮಾ, ಕರ್ನಾಟಕದಲ್ಲಿ 1,500ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಮುಂಜಾನೆ ಶೋಗಳಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನವೇ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಭಾರತದಲ್ಲಿ ₹120.75 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. 24,579 ಪ್ರದರ್ಶನಗಳಲ್ಲಿ ಚಿತ್ರ ಭರ್ಜರಿ ಗಳಿಕೆ ಕಂಡಿದೆ. ಹಿಂದಿ ಆವೃತ್ತಿಗೆ ಭಾರೀ ಕ್ರೇಜ್ ವ್ಯಕ್ತವಾಗಿದ್ದು, ಮೊದಲ ದಿನ ₹55 ಕೋಟಿ ನೆಟ್ ಗಳಿಕೆ ಕಂಡಿದೆ ಎನ್ನಲಾಗಿದೆ. ಕನ್ನಡದಲ್ಲಿ ₹23.30 ಕೋಟಿ, ತೆಲುಗಿನಲ್ಲಿ ₹16 ಕೋಟಿ, ತಮಿಳಿನಲ್ಲಿ ₹5.50 ಕೋಟಿ ಹಾಗೂ ಮಲಯಾಳಂನಲ್ಲಿ ₹1.30 ಕೋಟಿ ನೆಟ್ ಕಲೆಕ್ಷನ್ ಆಗಿದೆ.…
Day: August 27, 2026
ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ
ಪಾಟ್ನಾ: ಬಿಹಾರದ ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ. ನದಿಯ ಮಧ್ಯಭಾಗದಲ್ಲಿ ದೋಣಿ ಮಗುಚಿದ್ದು, ಪ್ರತ್ಯಕ್ಷದರ್ಶಿಗಳು, ಸ್ಥಳೀಯ ಮೀನುಗಾರರು ಹಾಗೂ ಗ್ರಾಮಸ್ಥರ ನೆರವಿನಿಂದ 19 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಇಬ್ಬರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, 19 ಮಂದಿಯನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ನಾಪತ್ತೆಯಾದ ಇಬ್ಬರಿಗಾಗಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಹಾಗೂ ದೋಣಿಯ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
