ನವದೆಹಲಿ: ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. 2025ರ ಸೆಪ್ಟೆಂಬರ್ 27ರಂದು ಕರೂರ್‌ನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟವರ 31 ಕುಟುಂಬಸ್ಥರಿಗೆ ಜುಲೈ 10ರಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇಮಕಾತಿ ಆದೇಶಗಳನ್ನು ವಿತರಿಸಿದ್ದರು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರ ವಿಭಾಗೀಯ ಪೀಠ, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ನೀತಿಯನ್ನು ಪ್ರಶ್ನಿಸಿದ್ದ ಅರ್ಜಿದಾರರ ನಿಲುವನ್ನು ಪ್ರಶ್ನಿಸಿದ ನ್ಯಾಯಪೀಠ, ದುರಂತದಲ್ಲಿ ಕುಟುಂಬದ ಏಕೈಕ ಸದಸ್ಯ ಮೃತಪಟ್ಟಿದ್ದರೆ, ಸರ್ಕಾರ…
Month: August 2026
ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಲಭಿಸಿದೆ. ಪುರಸ್ಕೃತರಲ್ಲಿ ರೈಲ್ವೇಸ್ ಬೆಂಗಳೂರು ಎಸ್ಪಿ ಸಾರಾ ಫಾತಿಮಾ, ಕೆಎಸ್‌ಆರ್‌ಪಿ ಕಮಾಂಡೆಂಟ್ ಥಾಮಸ್ ಮ್ಯಾಥ್ಯೂ, ಆಗ್ನೇಯ ಸಂಚಾರ ವಿಭಾಗದ ಎಸಿಪಿ ಮಹಾದೇವ್, ರಾಯಚೂರು ಡಿಎಆರ್‌ನ ಡಿವೈಎಸ್ಪಿ ಪರಮಾನಂದ್ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದಾರೆ. ಪೊಲೀಸ್ ತರಬೇತಿ ಶಾಲೆ ಮೈಸೂರು, ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ, ಸಿಐಡಿ, ರಾಜಭವನ, ಕೆಪಿ ಅಗ್ರಹಾರ ಪೊಲೀಸ್ ಠಾಣೆ, ಕೆಎಸ್‌ಆರ್‌ಪಿ, ವಿಧಾನಸೌಧ ಭದ್ರತೆ, ಡಿಸಿಆರ್‌ಇ ಕೆಜಿಎಫ್, ತರೀಕೆರೆ ಹಾಗೂ ಹುಣಸೂರು ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪದಕ ಘೋಷಿಸಲಾಗಿದೆ. ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿ…
ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ
ಚಾಮರಾಜನಗರ : ಶ್ರಾವಣ ಮಾಸ ಪ್ರಾರಂಭವಾದ ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಮಹೋತ್ಸವವು ಭಕ್ತಿ, ವೈಭವದಿಂದ ನೆರವೇರಿತು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪಟ್ಟದ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ನೇತೃತ್ವದಲ್ಲಿ ಹಾಗೂ ಬೇಡಗಂಪಣ ಅರ್ಚಕರ ವತಿಯಿಂದ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿವಿಧ ಧಾರ್ಮಿಕ ಪೂಜೆಗಳು ಜರುಗಿದವು. ಶ್ರಾವಣ ಮಾಸದ ಮೊದಲ ದಿನದ ಅಂಗವಾಗಿ ಮುಂಜಾನೆ 3.30ರಿಂದ ರುದ್ರಾಭಿಷೇಕ, ಬಿಲ್ವಾರ್ಚನೆ, ಗಣಪತಿ ಪೂಜೆ, ಪುಣ್ಯಾಹ, ನವಗ್ರಹ ಪೂಜೆ, ಅಷ್ಟದಿಕ್ಪಾಲಕರ ಪೂಜೆ, ಮಹಾಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. 108 ಕುಂಭಗಳ ಮಹಾ ಕುಂಭಾಭಿಷೇಕ ನೆರವೇರಿತು. ಉಪವಾಸವಿದ್ದ ಬೇಡಗಂಪಣ ಸಮುದಾಯದ ಅರ್ಚಕರು ಶಿವ-ಪಾರ್ವತಿಯ ಉತ್ಸವ ಮೂರ್ತಿಯೊಂದಿಗೆ ಸತ್ತಿಗೆ, ಸೂರಿಪಾಸಿ, ಛತ್ರಿ, ಚಾಮರ, ನಂದಿಕಂಬ ಹಾಗೂ ಮಂಗಳವಾದ್ಯಗಳೊಂದಿಗೆ ದೇಗುಲದ ಸಮೀಪದ ಮಜ್ಜನ ಬಾವಿಗೆ…
ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು
ವಾಷಿಂಗ್ಟನ್: ಅಮೆರಿಕದಲ್ಲಿ ಹೆರಿಗೆಗಾಗಿ ಪ್ರಯಾಣಿಸುವ ‘ಜನನ ಪ್ರವಾಸೋದ್ಯಮ’ಕ್ಕೆ ಕಡಿವಾಣ ಹಾಕುವ ಹೊಸ ಕ್ರಮದ ಭಾಗವಾಗಿ 600ಕ್ಕೂ ಹೆಚ್ಚು ವಿದೇಶಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಬುಧವಾರ ತಿಳಿಸಿದೆ. ಜನನ ಪ್ರವಾಸೋದ್ಯಮದ ಮೂಲಕ ಅಮೆರಿಕಕ್ಕೆ ಆಗಮಿಸುವವರು ಹಾಗೂ ಇಂತಹ ಪ್ರಯಾಣಗಳಿಗೆ ನೆರವು ನೀಡುವವರನ್ನು ಪತ್ತೆಹಚ್ಚಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ವೀಸಾ ಹೊಂದಿರುವವರ ಪ್ರಯಾಣ ದಾಖಲೆಗಳು ಸೇರಿದಂತೆ ಗೃಹ ಭದ್ರತಾ ಇಲಾಖೆ ಮತ್ತು ಇತರ ಫೆಡರಲ್ ಸಂಸ್ಥೆಗಳಿಂದ ಲಭ್ಯವಾಗುವ ಮಾಹಿತಿಯನ್ನು ಕಾರ್ಯಪಡೆ ಪರಿಶೀಲಿಸುತ್ತಿದೆ. ಜನನ ಪ್ರವಾಸೋದ್ಯಮದ ಹೆಸರಿನಲ್ಲಿ ಕಾರ್ಯನಿರ್ವಹಿಸುವ ಜಾಲಗಳನ್ನು ಪತ್ತೆಹಚ್ಚುವುದು, ವೀಸಾಗಳನ್ನು ರದ್ದುಪಡಿಸುವುದು ಮತ್ತು ಇಂತಹ ಪ್ರಯಾಣದಿಂದ ಲಾಭ ಪಡೆಯುವ ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಕಾರ್ಯಪಡೆಯ ಪ್ರಮುಖ ಉದ್ದೇಶವಾಗಿದೆ ಎಂದು ಇಲಾಖೆ ತಿಳಿಸಿದೆ. ಟ್ರಂಪ್ ಆದೇಶದ ಬೆನ್ನಲ್ಲೇ ಕ್ರಮ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಸ್ಟ್ 6ರಂದು ಹೊರಡಿಸಿದ ಕಾರ್ಯಕಾರಿ ಆದೇಶದ ಬಳಿಕ ಈ…
ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್‌ಗೆ ಸ್ಥಳಾಂತರ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್‌ನಿಂದ ಸಾಮಾನ್ಯ ಕೈದಿಗಳ ಸೆಲ್‌ಗೆ ಸ್ಥಳಾಂತರಿಸಲಾಗಿದೆ. ಜೈಲಿನೊಳಗಿಂದ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವುದಾಗಿ ಹೇಳಲಾದ 17 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್‌ಡ್ರೈವ್ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದವು ಎಂದು ಸುದ್ದಿಯಾಗಿವೆ. ಮೊಬೈಲ್‌ನಲ್ಲಿ ಹಲವು ಒಟಿಟಿ ಅಪ್ಲಿಕೇಶನ್‌ಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೈಲು ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಮತ್ತು ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಜೈಲಿನ ಕರ್ತವ್ಯದಲ್ಲಿದ್ದ ಸಹಾಯಕ…
ಹೆಬ್ಬಾಳ ಶಾರ್ಟ್ ಟನಲ್ ಯೋಜನೆಗೆ ತೇಜಸ್ವಿ ಸೂರ್ಯ ವಿರೋಧ; ವೈಜ್ಞಾನಿಕ ಅಧ್ಯಯನಕ್ಕೆ ಆಗ್ರಹ
ಬೆಂಗಳೂರು: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೆತ್ತಿಕೊಂಡಿರುವ ಹೆಬ್ಬಾಳ ಶಾರ್ಟ್ ಟನಲ್ ಯೋಜನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಸುಮಾರು ₹1,140 ಕೋಟಿ ಅಂದಾಜು ವೆಚ್ಚದ ಯೋಜನೆಯನ್ನು ವೈಜ್ಞಾನಿಕ ಮೌಲ್ಯಮಾಪನವಿಲ್ಲದೆ ಮುಂದುವರಿಸಬಾರದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹೆಬ್ಬಾಳ ಜಂಕ್ಷನ್‌ನಿಂದ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) ಸಂಪರ್ಕಿಸುವ ಸುಮಾರು 2.2 ಕಿ.ಮೀ. ಉದ್ದದ ಕಿರು ಸುರಂಗ ಮಾರ್ಗವನ್ನು ನಿರ್ಮಿಸಲು ಯೋಜಿಸಲಾಗಿದೆ. ಯೋಜನೆಗಾಗಿ ಹೆಬ್ಬಾಳ ಕೆರೆಯ ಸುಮಾರು 3.45 ಎಕರೆ ಜಮೀನು ವರ್ಗಾವಣೆಯಾಗುತ್ತಿದೆ ಎಂದು ವರದಿಯಾಗಿದೆ. ಮೆಟ್ರೋ, ಉಪನಗರ ರೈಲು ಯೋಜನೆಗಳಿಗೆ ಸಂಘರ್ಷದ ಆತಂಕ ಹೆಬ್ಬಾಳ ಶಾರ್ಟ್ ಟನಲ್ ಯೋಜನೆಯು ಪ್ರಸ್ತಾವಿತ ಮೆಟ್ರೋ ರೆಡ್ ಲೈನ್…
ರೈಲ್‌ಒನ್‌ಗೆ ಭರ್ಜರಿ ಸ್ಪಂದನೆ; ದಿನಕ್ಕೆ 10 ಲಕ್ಷ ಟಿಕೆಟ್ ಬುಕಿಂಗ್
ನವದೆಹಲಿ: ಭಾರತೀಯ ರೈಲ್ವೆಯ ಡಿಜಿಟಲ್ ಸೇವೆಗಳಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರೈಲ್‌ಒನ್ ಅಪ್ಲಿಕೇಶನ್ ಈಗ 4.76 ಕೋಟಿ ಡೌನ್‌ಲೋಡ್‌ಗಳನ್ನು ದಾಟಿದೆ. 2026ರ ಆಗಸ್ಟ್ 2ರ ವೇಳೆಗೆ ಆ್ಯಪ್ ಮೂಲಕ ಪ್ರತಿದಿನ ಸರಾಸರಿ 10 ಲಕ್ಷ ಟಿಕೆಟ್‌ಗಳು ಬುಕ್ ಆಗುತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದ್ದಾರೆ. 2025ರ ಜುಲೈ 1ರಂದು ಆರಂಭವಾದ ರೈಲ್‌ಒನ್, ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್‌ಗಳು, ಪ್ಲಾಟ್‌ಫಾರ್ಮ್ ಟಿಕೆಟ್, ರೈಲು ಮತ್ತು ಪಿಎನ್‌ಆರ್ ಮಾಹಿತಿ, ರೈಲ್‌ಮದಾದ್ ಸೇರಿದಂತೆ ಹಲವು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುತ್ತದೆ. ಒಂದೇ ಸೈನ್-ಆನ್ ವ್ಯವಸ್ಥೆಯ ಮೂಲಕ ಪ್ರಯಾಣಿಕರು ವಿವಿಧ ಸೇವೆಗಳನ್ನು ಸುಲಭವಾಗಿ ಬಳಸಬಹುದಾಗಿದೆ. ಆಗಸ್ಟ್ 2ರ ವೇಳೆಗೆ ಪ್ರತಿದಿನ ಸರಾಸರಿ 2.79 ಲಕ್ಷ ಕಾಯ್ದಿರಿಸಿದ ಹಾಗೂ 7.24 ಲಕ್ಷ ಕಾಯ್ದಿರಿಸದ ಟಿಕೆಟ್‌ಗಳು ರೈಲ್‌ಒನ್ ಮೂಲಕ ಬುಕ್ ಆಗುತ್ತಿವೆ. ಡಿಜಿಟಲ್ ರೈಲು ಮಾಹಿತಿ ಸೇವೆಗೂ ಹೆಚ್ಚಿದ ಬೇಡಿಕೆ…
ಆಳ ಸಮುದ್ರ ಮೀನುಗಾರಿಕೆ; 9,650 ಉಚಿತ ಡಿಜಿಟಲ್ ಪಾಸ್ ವಿತರಣೆ, ಕರ್ನಾಟಕಕ್ಕೆ ಅತಿ ಹೆಚ್ಚು
ನವದೆಹಲಿ: ಭಾರತದ ವಿಶೇಷ ಆರ್ಥಿಕ ವಲಯದಲ್ಲಿ (EEZ) ಆಳ ಸಮುದ್ರ ಮೀನುಗಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 9,650 ಉಚಿತ ಡಿಜಿಟಲ್ ಪ್ರವೇಶ ಪಾಸ್‌ಗಳನ್ನು ವಿತರಿಸಿದೆ. ಈ ಪೈಕಿ ಕರ್ನಾಟಕವೇ ಅತಿ ಹೆಚ್ಚು ಪಾಸ್‌ಗಳನ್ನು ಪಡೆದ ರಾಜ್ಯವಾಗಿದ್ದು, ಸಾಂಪ್ರದಾಯಿಕ ಮೀನುಗಾರರು, ಸಹಕಾರಿ ಸಂಸ್ಥೆಗಳು ಹಾಗೂ ಮೀನು ರೈತ ಉತ್ಪಾದಕ ಸಂಸ್ಥೆಗಳಿಗೆ (FFPOs) ಹೊಸ ಅವಕಾಶಗಳು ದೊರೆಯಲಿವೆ. 2025ರ ನವೆಂಬರ್‌ನಲ್ಲಿ ಅಧಿಸೂಚನೆಗೊಂಡ EEZ ನಿಯಮಗಳು, 2025ರಡಿ ReALCRaft ಪೋರ್ಟಲ್ ಮೂಲಕ ಈ ಪಾಸ್‌ಗಳನ್ನು ನೀಡಲಾಗುತ್ತಿದೆ. 12 ನಾಟಿಕಲ್ ಮೈಲುಗಳಾಚೆ ಹಾಗೂ 200 ನಾಟಿಕಲ್ ಮೈಲುಗಳವರೆಗೆ ಮೀನುಗಾರಿಕೆ ನಡೆಸುವ ಯಾಂತ್ರಿಕೃತ ಮೀನುಗಾರಿಕಾ ಹಡಗುಗಳಿಗೆ ಹಾಗೂ 24 ಮೀಟರ್‌ಗಿಂತ ಉದ್ದದ ದೊಡ್ಡ ಯಾಂತ್ರಿಕೃತ ದೋಣಿಗಳಿಗೆ ಪ್ರವೇಶ ಪಾಸ್ ಕಡ್ಡಾಯವಾಗಿದೆ. ಸಾಂಪ್ರದಾಯಿಕ ಮೋಟಾರು ರಹಿತ ಹಾಗೂ ಸಣ್ಣ ದೋಣಿಗಳಿಗೆ ವಿನಾಯಿತಿ ನೀಡಲಾಗಿದೆ. ಆಳ ಸಮುದ್ರ ಮೀನುಗಾರಿಕೆಯನ್ನು ವಿಸ್ತರಿಸುವುದರ ಜೊತೆಗೆ ಮೀನು ಸಂಸ್ಕರಣೆ ಮತ್ತು…
ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ
ಬೆಂಗಳೂರು: ಖ್ಯಾತ ನಟಿ ಶಕೀಲಾ ಅವರು ಇತ್ತೀಚೆಗೆ ಗಂಭೀರ ಕುತ್ತಿಗೆ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅತಿಯಾದ ಮೊಬೈಲ್ ಬಳಕೆ ಹಾಗೂ ತಪ್ಪಾದ ಭಂಗಿಯೇ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಶಕೀಲಾ ಹಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಇತ್ತೀಚೆಗೆ ಕುತ್ತಿಗೆ ನೋವು ಹಾಗೂ ನರಗಳಿಗೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶಸ್ತ್ರಚಿಕಿತ್ಸೆಗೆ ಸುಮಾರು ₹3 ಲಕ್ಷ ವೆಚ್ಚವಾಗಿದೆ ಎನ್ನಲಾಗಿದೆ. ಆಸ್ಪತ್ರೆಯಿಂದ ಮನೆಗೆ ಮರಳಿದ ಬಳಿಕ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಶಕೀಲಾ, ತಮ್ಮ ಆರೋಗ್ಯ ಸಮಸ್ಯೆಯ ಕುರಿತು ಮಾಹಿತಿ ನೀಡಿದ್ದಾರೆ. ಹಾಸಿಗೆಯಲ್ಲಿ ಒಂದೇ ಮಗ್ಗುಲಿಗೆ ಮಲಗಿ ಗಂಟೆಗಟ್ಟಲೆ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದೆ. ಕಾಫಿ ಕುಡಿಯಲು ಮಾತ್ರ ಎದ್ದು ಬರುತ್ತಿದ್ದೆ. ಬಳಿಕ ಮತ್ತೆ ಗೇಮ್ ಆಡುತ್ತಿದ್ದೆ. ನಂತರ ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಮ್ ರೀಲ್ಸ್ ನೋಡುತ್ತಿದ್ದೆ…
ಕಾವೇರಿ ನೀರು ವಿವಾದ; ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ, ಹಲವೆಡೆ ಪ್ರತಿಭಟನೆ
ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಗುರುವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿವೆ. ಸಾರಿಗೆ ಹಾಗೂ ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಮುಂದುವರಿದಿದ್ದರಿಂದ ಜನ ಜೀವನದ ಮೇಲೆ ಬಂಧ್ ಪರಿಣಾಮ ಬೀರಿಲ್ಲ. ಬರ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್‌ಗೆ ಕರೆ ನೀಡಿದ್ದರು. ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಹಲವು ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ. ಬೆಂಗಳೂರು, ಮೈಸೂರು, ರಾಮನಗರ, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಆದರೆ…
