ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು

ರಾಮನಗರ: ಕಾಂಗ್ರೆಸ್ ಸರ್ಕಾರದ ಉದ್ದೇಶಿತ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಮೂರು ದಿನಗಳ ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ರಾಮನಗರ ತಾಲ್ಲೂಕಿನ ಬೈರಮಂಗಲ ಗ್ರಾಮದಿಂದ ಆರಂಭವಾದ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ ಆರ್.ಅಶೋಕ್ ಚಾಲನೆ ನೀಡಿದರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯೊಂದಿಗೆ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸುಮಾರು 38 ಕಿ.ಮೀ. ಸಾಗಲಿದೆ. ಮೈತ್ರಿ ಪಕ್ಷವಾದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸಿ ರೈತರ ಭೂಮಿಯನ್ನು ಉಳಿಸಬೇಕು ಎಂಬುದು ಜೆಡಿಎಸ್‌ನ ಪ್ರಮುಖ ಆಗ್ರಹವಾಗಿದೆ. ಪಾದಯಾತ್ರೆ ಆರಂಭಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ…

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ

ಮಂಡ್ಯ: ಮಂಡ್ಯ ತಾಲ್ಲೂಕಿನ ಬಿ.ಹಟ್ನ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ರೈತನ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ಸಚಿವರು, ಕುಟುಂಬದ ಆರ್ಥಿಕ ಪರಿಸ್ಥಿತಿ ಹಾಗೂ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣಗಳ ಕುರಿತು ಮಾಹಿತಿ ಪಡೆದರು. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಕುಟುಂಬದ ನೆರವಿಗೆ ನಿಲ್ಲಲಿದೆ ಎಂದು ಧೈರ್ಯ ತುಂಬಿದರು. ಸರ್ಕಾರದ ನಿಯಮಾನುಸಾರ ರೈತ ಕುಟುಂಬಕ್ಕೆ ದೊರೆಯಬೇಕಾದ ₹5 ಲಕ್ಷ ಪರಿಹಾರವನ್ನು ಮೃತ ರೈತನ ಪುತ್ರ ಸ್ವಾಮಿ ಅವರಿಗೆ ಸಚಿವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ತೀವ್ರ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದರು. ಸಂಕಷ್ಟ ಎದುರಾದಾಗ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ನೆರವು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ರೈತರ ಸಮಸ್ಯೆಗಳಿಗೆ…

ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು

ಮಂಡ್ಯ: ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಅವರು ರೈತರ ಜಮೀನಿನಲ್ಲಿ ಸೊರಗಿರುವ ಹಲಸಂದೆ ಬೆಳೆಯನ್ನು ಪರಿಶೀಲಿಸಿದರು. ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ಮೇಲೆ ಉಂಟಾಗಿರುವ ಪರಿಣಾಮದ ಕುರಿತು ಸಚಿವರು ರೈತರಿಂದ ಮಾಹಿತಿ ಪಡೆದುಕೊಂಡರು. ಬೆಳೆ ಹಾನಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದ ಅವರು, ಸ್ಥಳದಲ್ಲಿದ್ದ ಕೃಷಿ ಇಲಾಖೆಯ ಅಧಿಕಾರಿಗಳಿಂದ ಬೆಳೆ ಪರಿಸ್ಥಿತಿ ಹಾಗೂ ಹಾನಿಯ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು. ರೈತರಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಬೆಳೆ ಹಾನಿಯ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು. ಜಮೀನಿನಲ್ಲಿ ಉಂಟಾಗಿರುವ ಬೆಳೆ ಪರಿಸ್ಥಿತಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ…

ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ

ನವದೆಹಲಿ: ಐತಿಹಾಸಿಕ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಳುವಳಿಯ ಹೋರಾಟಗಾರರು ಪ್ರದರ್ಶಿಸಿದ ಧೈರ್ಯ, ತ್ಯಾಗ ಮತ್ತು ದೃಢಸಂಕಲ್ಪವನ್ನು ಸ್ಮರಿಸಿದ ಅವರು, ಅವರ ಕೊಡುಗೆಗಳು ಇಂದಿಗೂ ಭಾರತೀಯರಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು. ಕ್ವಿಟ್ ಇಂಡಿಯಾ ಚಳುವಳಿಯ ವಾರ್ಷಿಕೋತ್ಸವದ ಅಂಗವಾಗಿ ಸಾಮಾಜಿಕ ಮಾಧ್ಯಮ ‘X’ನಲ್ಲಿ ಸಂದೇಶ ನೀಡಿದ ಮೋದಿ, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನೀಡಲಾದ ‘ಕ್ವಿಟ್ ಇಂಡಿಯಾ’ ಕರೆಯು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ವೇಗ ನೀಡಿತ್ತು ಎಂದು ಹೇಳಿದರು. ವಸಾಹತುಶಾಹಿ ಆಡಳಿತದಿಂದ ಮುಕ್ತರಾಗಬೇಕೆಂಬ ಭಾರತೀಯರ ಸಾಮೂಹಿಕ ಸಂಕಲ್ಪವನ್ನು ಈ ಚಳುವಳಿ ಪ್ರತಿಬಿಂಬಿಸಿತ್ತು. ಚಳುವಳಿಯಲ್ಲಿ ಭಾಗವಹಿಸಿದವರ ಧೈರ್ಯ ಮತ್ತು ಬದ್ಧತೆ ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿಯಾಗಿ ಉಳಿಯಲಿದೆ ಎಂದು ಪ್ರಧಾನಿ ಹೇಳಿದರು. 1942ರ ಆಗಸ್ಟ್‌ನಲ್ಲಿ ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆರಂಭಗೊಂಡಿತ್ತು. ಬ್ರಿಟಿಷ್ ಆಡಳಿತವನ್ನು…

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬಿಜೆಪಿ ‘ತಿರಂಗ ಯಾತ್ರೆ’; ಹಲವು ರಾಜ್ಯಗಳಲ್ಲಿ ರ‍್ಯಾಲಿ

ನವದೆಹಲಿ: 80ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಹಲವು ರಾಜ್ಯಗಳಲ್ಲಿ ‘ತಿರಂಗ ಯಾತ್ರೆ’ಗೆ ಚಾಲನೆ ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಮತ್ತು ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯುವುದು ಯಾತ್ರೆಯ ಉದ್ದೇಶ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಯಾತ್ರೆಯಲ್ಲಿ ಭಾಗವಹಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿಗಳು ಹಾಗೂ ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ದೇಶಭಕ್ತನ ಕರ್ತವ್ಯ ಎಂದರು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ತಿರಂಗ ಯಾತ್ರೆ ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮಾತನಾಡಿ, ‘ಕಾಕೋರಿ ರೈಲು ಕ್ರಿಯಾ ದಿನ’ದ ಅಂಗವಾಗಿಯೂ ಕಾರ್ಯಕ್ರಮಗಳಿಗೆ ಮಹತ್ವವಿದೆ ಎಂದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತಿರಂಗ ರ‍್ಯಾಲಿಯಲ್ಲಿ ಭಾಗವಹಿಸಿ, ಯುವಜನತೆ ದೇಶದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿದ್ದು, ಅವರಿಗೆ ಸೂಕ್ತ ವೇದಿಕೆ…

ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು

ಬೆಂಗಳೂರು: ಮುಖ್ಯಮಂತ್ರಿ ಬದಲಾಗಿ ಸಂಪುಟ ಪುನಾರಚನೆಯಾಗುತ್ತಿದ್ದಂತೆಯೇ ವಿಧಾನ ಪರಿಷತ್ತಿನ ಚಿತ್ರಣವೂ ಬದಲಾಗಿದೆ. ಇದೀಗ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಸಂಪೂರ್ಣ ಬಹುಮತವನ್ನು ಹೊಂದಿದೆ. ಈ ಸನ್ನಿವೇಶವನ್ನೇ ಮುಂದಿಟ್ಟು ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಕಾರ್ಯತಂತ್ರ ರೂಪಿಸಿದೆ. ಸಚಿವ ಸ್ಥಾನ ವಂಚಿತ ನಾಯಕರನ್ನು ವಿಧಾನ ಪರಿಷತ್ತಿನ ಸಭಾಪತಿ ಹಾಗೂ ಉಪಸಭಾಪತಿ ಸ್ಥಾನಕ್ಕೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಂಭಾಪತಿ ಬಸವರಾಜ ಹೊರಟ್ಟಿ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಆರಂಭದಲ್ಲಿ ರಾಜೀನಾಮೆಗೆ ಒಪ್ಪದ ಹೊರಟ್ಟಿಯವರು ಬಳಿಕ ಅವಿಶ್ವಾಸ ನಿರ್ಣಯಕ್ಕೆ ಬೆದರಿ ಪದತ್ಯಾಗ ಮಾಡಿದ್ದಾರೆ. ಈ ಬೆಳವಣಿಗೆಯು ಪ್ರತಿಪಕ್ಷಗಳನ್ನು ಕೆರಳುವಂತೆ ಮಾಡಿದೆ. ಈ ವಿವಾದವನ್ನು ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯಪಾಲರ ಅಂಗಳಕ್ಕೆ ಒಯ್ದಿದ್ದು, ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿತು. ವಿಧಾನ ಪರಿಷತ್‌…

ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ

ಬಾರಾಮತಿ: ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ತರಬೇತಿ ವಿಮಾನ ಭಾನುವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿದೆ. ವಿಮಾನ ನಿಲ್ದಾಣದ ಆವರಣದಲ್ಲಿ ರನ್‌ವೇಯಿಂದ ಸ್ವಲ್ಪ ದೂರ ಮಧ್ಯಾಹ್ನ 12.35ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಜನವರಿಯಲ್ಲಿ ಇದೇ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲಿಯರ್‌ಜೆಟ್ 45 ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರದ ಘಟನೆ ಮತ್ತೆ ವಿಮಾನ ನಿಲ್ದಾಣದ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಗಮನ ಸೆಳೆದಿದೆ. ಜನವರಿ 28ರಂದು ನಡೆದ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ತನಿಖೆ ನಡೆಸಿತ್ತು. ಪ್ರಾಥಮಿಕ ವರದಿಯಲ್ಲಿ ಅಪಘಾತದ ಸಮಯದಲ್ಲಿ…

35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ

ಶ್ರೀಪೆರಂಬುದೂರು/ನವದೆಹಲಿ: ರಾಷ್ಟ್ರೀಯ ಏಕತೆ, ಕೋಮು ಸಾಮರಸ್ಯ, ಜಾತ್ಯತೀತತೆ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ 35ನೇ ಆವೃತ್ತಿಗೆ ಆಗಸ್ಟ್ 9ರಂದು ಶ್ರೀಪೆರಂಬುದೂರಿನಿಂದ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೀಡಾದ ಶ್ರೀಪೆರಂಬುದೂರಿನಲ್ಲಿ ಶಾಶ್ವತ ಜ್ಯೋತಿ ಬೆಳಗಿಸಿದ ಬಳಿಕ ಯಾತ್ರೆ ಆರಂಭವಾಗಲಿದೆ. ಸುಮಾರು 2,982 ಕಿಲೋಮೀಟರ್‌ಗಳ 12 ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು, ಆಗಸ್ಟ್ 19ರಂದು ರಾಷ್ಟ್ರ ರಾಜಧಾನಿ ನವದೆಹಲಿಯನ್ನು ತಲುಪಲಿದೆ. ತಮಿಳುನಾಡಿನಿಂದ ಆರಂಭವಾಗುವ ಯಾತ್ರೆ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖ ನಗರಗಳು ಹಾಗೂ ಪಟ್ಟಣಗಳ ಮೂಲಕ ಸಾಗಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಚಿತ್ರದುರ್ಗ, ರಾಯಚೂರು ಹಾಗೂ ಕಲಬುರಗಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಯಾತ್ರೆ ಸಾಗಲಿದೆ. ನಂತರ ಹೈದರಾಬಾದ್, ಆದಿಲಾಬಾದ್, ಬೇತುಲ್, ಗುಣ, ಗ್ವಾಲಿಯರ್ ಮತ್ತು ಗುರುಗ್ರಾಮ್…

ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್ , ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.…

ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು

ಗಾಂಧಿನಗರ: ಗುಜರಾತ್‌ನಲ್ಲಿ ಚಂಡಿಪುರ ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ಜೂನ್ 30ರಿಂದ ಆಗಸ್ಟ್ 8ರವರೆಗೆ 217 ಶಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 23 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ. ಒಟ್ಟು 217 ಮಾದರಿಗಳಲ್ಲಿ 208ರ ಪರೀಕ್ಷಾ ವರದಿ ಲಭ್ಯವಾಗಿದ್ದು, ಇನ್ನೂ ಒಂಬತ್ತು ಮಾದರಿಗಳ ಫಲಿತಾಂಶ ಬಾಕಿಯಿದೆ. ರಾಜ್ಯದಲ್ಲಿ ಕಣ್ಗಾವಲು ಮತ್ತು ಪರೀಕ್ಷೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಜುಲೈ 14ರಂದು 27 ಶಂಕಿತ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ ಏಳು ಮಂದಿಗೆ ಸೋಂಕು ದೃಢಪಟ್ಟಿದ್ದು, ಮೂವರು ಮಕ್ಕಳು ಮೃತಪಟ್ಟಿದ್ದರು. ಪಂಚಮಹಲ್ ಜಿಲ್ಲೆಯ ಗೋಧ್ರಾ ತಾಲ್ಲೂಕಿನ ಗ್ರಾಮಗಳಲ್ಲಿ ಇಬ್ಬರು ಮಕ್ಕಳು ಸೋಂಕಿನಿಂದ ಮೃತಪಟ್ಟ ಬಳಿಕ ಪ್ರಕರಣಗಳು ಗಮನ ಸೆಳೆದಿದ್ದವು. ಬಳಿಕ ಆರೋಗ್ಯ ಇಲಾಖೆ ಪೀಡಿತ ಪ್ರದೇಶಗಳಲ್ಲಿ ಮನೆ-ಮನೆಗೆ ತೆರಳಿ ತಪಾಸಣೆ, ಮಾದರಿ ಸಂಗ್ರಹ ಹಾಗೂ…