ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೊದಲ ಹಂತದಲ್ಲಿ 45 ಪ್ರಕರಣಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಬಳಿಕ ಮತ್ತೊಂದು ಪ್ರಕರಣಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮೋದನೆ ದೊರೆತಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಕೈದಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ. ಕೈದಿಗಳು ಜೈಲಿನಲ್ಲಿ ಕಳೆದಿರುವ ಅವಧಿ, ಅವರ ನಡವಳಿಕೆ ಹಾಗೂ ನಿಗದಿತ ಮಾನದಂಡಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅಂತಿಮ ಅಂಕಿತ ದೊರೆತ ಬಳಿಕ ಅರ್ಹ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

ನವದೆಹಲಿ: ‘ವಂದೇ ಮಾತರಂ’ ವಿವಾದದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅರಾಜಕತೆಯ ರಾಜಕೀಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ. ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಯುವಕ ಸಾಹಿಲ್ ಲೋಚಬ್ ಅವರಿಗೆ ಪೆಲೆಟ್ ಗುಂಡೇಟಿನಿಂದ ಗಾಯವಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ರಾಹುಲ್ ಗಾಂಧಿ ಅವರು ಸಂಸತ್ ಮಾರ್ಗ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಟೀಕೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಶಂಕರ್ ಪ್ರಸಾದ್, ಯಾವುದೇ ಮುನ್ಸೂಚನೆ ಅಥವಾ ಅನುಮತಿಯಿಲ್ಲದೆ ಪೊಲೀಸ್ ಠಾಣೆ ಎದುರು ಧರಣಿ ನಡೆಸುವ ಮೂಲಕ ರಾಹುಲ್ ಗಾಂಧಿ ಅರಾಜಕತೆಯ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ,…

ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

ನವದೆಹಲಿ: ವಿದ್ಯಾರ್ಥಿ ಪ್ರತಿಭಟನೆ ವೇಳೆ ಯುವಕನೊಬ್ಬನಿಗೆ ಪೆಲೆಟ್ ಗನ್‌ನಿಂದ ಗಾಯವಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೊನೆಗೂ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂತ್ರಸ್ತ ಸಾಹಿಲ್ ಲೋಚಬ್ ಅವರೊಂದಿಗೆ ಸಂಸತ್ ಮಾರ್ಗ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ಸಾಹಿಲ್ ಲೋಚಬ್ ಅವರಿಗೆ ಪೆಲೆಟ್ ಗನ್‌ನಿಂದ ಗಾಯಗಳಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. ಗಾಯದಿಂದ ಅವರ ಬಲಗಣ್ಣಿಗೆ ಗಂಭೀರ ಹಾನಿಯಾಗಿದ್ದು, ದೃಷ್ಟಿ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಪಕ್ಷ ಹೇಳಿದೆ. ಈ ಕುರಿತು ದೂರು ನೀಡಿದರೂ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಶುಕ್ರವಾರ ಮೊದಲು ಕನ್ನಾಟ್…

ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

ವಾಷಿಂಗ್ಟನ್: ಇರಾನ್‌ಗೆ ಸಂಬಂಧಿಸಿದ ಪ್ರಮುಖ ಕಾರ್ಯತಂತ್ರದ ಜಲಮಾರ್ಗಗಳನ್ನು ಅಮೆರಿಕ “ಮೂಲಭೂತವಾಗಿ ನಿಯಂತ್ರಿಸುತ್ತಿದೆ” ಮತ್ತು ಶೀಘ್ರದಲ್ಲೇ ಸಂಪೂರ್ಣ ನಿಯಂತ್ರಣ ಸಾಧಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದೇ ವೇಳೆ, ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದನ್ನು ಯಾವುದೇ ಕಾರಣಕ್ಕೂ ಅನುಮತಿಸುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಇರಾನ್ ವಿರುದ್ಧ ಅಮೆರಿಕ ಕೈಗೊಂಡಿರುವ ಮಿಲಿಟರಿ ಕ್ರಮವನ್ನು ಸಮರ್ಥಿಸಿಕೊಂಡರು. ಸಂಘರ್ಷದಿಂದ ಅಮೆರಿಕದಲ್ಲಿ ಪೆಟ್ರೋಲ್ ಮತ್ತು ಇಂಧನ ಬೆಲೆಗಳು ಏರಿಕೆಯಾಗುವ ಸಾಧ್ಯತೆಯನ್ನೂ ಅವರು ಒಪ್ಪಿಕೊಂಡಿದ್ದಾರೆ. ಇರಾನ್‌ನ ಮಿಲಿಟರಿ ನಾಯಕತ್ವ, ನೌಕಾಪಡೆ ಮತ್ತು ವಾಯುಪಡೆಗೆ ಭಾರಿ ಹಾನಿಯಾಗಿದ್ದು, ಇದರಿಂದ ಮಾತುಕತೆ ನಡೆಸುವುದು ಕಷ್ಟಕರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಪರಮಾಣು ಸೌಲಭ್ಯಗಳ ಮೇಲೆ ನಡೆಸಿದ ಅಮೆರಿಕದ ದಾಳಿಗಳು ಇರಾನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸುವುದನ್ನು ತಡೆಯಲು ಅಗತ್ಯವಾಗಿದ್ದವು ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಇನ್ನೊಂದೆಡೆ, ಅಮೆರಿಕದ ಹೊಸ ಆರ್ಥಿಕ ಕ್ರಮಗಳನ್ನು ಇರಾನ್ ತೀವ್ರವಾಗಿ ವಿರೋಧಿಸಿದೆ.…

ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

ನವದೆಹಲಿ: ದೇಶದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದೀರ್ಘಾವಧಿಯ ಯೋಜನೆಗಳನ್ನು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ನವದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಡೆದ ಮೂರನೇ ಉನ್ನತ ಮಟ್ಟದ ಸಭೆಯಲ್ಲಿ ವಿವಿಧ ಸಚಿವಾಲಯಗಳ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ, ವಿದೇಶಾಂಗ ವ್ಯವಹಾರ ಹಾಗೂ ಆಡಳಿತ ಕ್ಷೇತ್ರಗಳ ಆದ್ಯತೆಗಳ ಬಗ್ಗೆ ಅಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ತಕ್ಷಣದ ಸಮಸ್ಯೆಗಳು ಮತ್ತು ಅಂಕಿ-ಅಂಶಗಳ ಮೇಲೆ ಮಾತ್ರ ಗಮನಹರಿಸದೆ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೀರ್ಘಾವಧಿಯ ದೃಷ್ಟಿಕೋನ ಹೊಂದಬೇಕು ಎಂದು ಮೋದಿ ಸೂಚಿಸಿದರು. ವಿವಿಧ ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ‘ಸೈಲೋ’ ಮನೋಭಾವದಿಂದ ಹೊರಬರಬೇಕು. ಇದು ಕೇವಲ ಆಡಳಿತಾತ್ಮಕ ಸಮಸ್ಯೆಯಲ್ಲ, ಮನೋಭಾವದ ಸಮಸ್ಯೆಯೂ ಆಗಿದೆ ಎಂದು ಪ್ರಧಾನಿ…

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಆಗಸ್ಟ್ 21 ಮತ್ತು 22ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವೆಡೆ ನಿರಂತರವಾಗಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ. ರಾಜ್ಯದ…

ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

ಬೆಂಗಳೂರು: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿರುವ ಖಾಸಗಿ ರಸ್ತೆಗಳು ಮತ್ತು ಚರಂಡಿಗಳು ಹದಗೆಟ್ಟು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೆ, ಅವುಗಳನ್ನು ಸಾರ್ವಜನಿಕ ರಸ್ತೆಗಳಾಗಿ ಘೋಷಿಸಿ ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಪಡೆಯಲು ಅವಕಾಶ ಕಲ್ಪಿಸುವ ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ವಿಧಾನಸಭೆ ಗುರುವಾರ ಅನುಮೋದನೆ ನೀಡಿದೆ. ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಮಂಡಿಸಿದ ‘ಕರ್ನಾಟಕ ಪುರಸಭೆಗಳ (ತಿದ್ದುಪಡಿ) ವಿಧೇಯಕ, 2026’ ಮತ್ತು ‘ಕರ್ನಾಟಕ ಮಹಾನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2026’ಕ್ಕೆ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೇ ಅಂಗೀಕಾರ ದೊರೆತಿದೆ. ತಿದ್ದುಪಡಿಯನ್ವಯ, ನಗರ ಅಥವಾ ಪಟ್ಟಣ ಪ್ರದೇಶಗಳಲ್ಲಿರುವ ಖಾಸಗಿ ರಸ್ತೆಗಳು ಹಾಗೂ ಚರಂಡಿಗಳು ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹದಗೆಟ್ಟಿದ್ದರೆ, ಮುನ್ಸಿಪಲ್ ಕಮಿಷನರ್ ಅಥವಾ ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ಸಾರ್ವಜನಿಕ ರಸ್ತೆ ಎಂದು ಘೋಷಿಸಿ ಸ್ಥಳೀಯ ಸಂಸ್ಥೆಯ ಸುಪರ್ದಿಗೆ ಪಡೆಯಬಹುದು. ಬಳಿಕ ರಸ್ತೆ ಅಭಿವೃದ್ಧಿ ಹಾಗೂ…

ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಕರಡು ಅಧಿಸೂಚನೆ ಕುರಿತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ. ಅಧಿಸೂಚನೆಯಿಂದ ಗ್ರಾಮೀಣ ಜನರ ಜೀವನೋಪಾಯ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿ, ಜನರಿಗೆ ಸ್ಪಷ್ಟ ಮಾಹಿತಿ ಒದಗಿಸುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರವು ಜುಲೈ 27, 2026ರಂದು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ 7ನೇ ಕರಡು ಅಧಿಸೂಚನೆ ಹೊರಡಿಸಿದ್ದು, ಈ ವಿಷಯ ಪ್ರಸ್ತುತ ರಾಜ್ಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಪ್ರಶ್ನೆಗೆ ಉತ್ತರಿಸಿದರು. ಹಿಂದಿನ ಅಧಿಸೂಚನೆಗಳನ್ನೂ ತಿರಸ್ಕರಿಸಿದ್ದ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ಸಮಿತಿ ಗುರುತಿಸಿರುವ ಹಲವು ಪ್ರದೇಶಗಳು ಈಗಾಗಲೇ ಸಂರಕ್ಷಿತ ಪ್ರದೇಶ, ಅಧಿಸೂಚಿತ ಅರಣ್ಯ ಅಥವಾ ಪರಿಸರ ಸೂಕ್ಷ್ಮ…

ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ರಾಜ್ಯದ ಹೊರಗೆ ತೆರಳಲು ನ್ಯಾಯಾಲಯದ ಅನುಮತಿ ಪಡೆಯಬೇಕು ಎಂಬ ಷರತ್ತನ್ನು ಕೋರ್ಟ್ ಸಡಿಲಿಸಿದ್ದು, ದೇಶದೊಳಗೆ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಜಾಮೀನು ನೀಡುವ ವೇಳೆ ನಾಗೇಂದ್ರ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ದೇಶದೊಳಗೆ ಪ್ರಯಾಣಿಸಲು ಅನುಮತಿ ನೀಡಿದೆ. ಆದರೆ, ವಿದೇಶಕ್ಕೆ ತೆರಳಬೇಕಾದರೆ ನ್ಯಾಯಾಲಯದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿದ್ದಾರೆ. ಇದೇ ವೇಳೆ, ಆರೋಪ ಎದುರಿಸುತ್ತಿರುವ ಸಚಿವರನ್ನು…

ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕೇರಳದ ಕೋವಲಂನಲ್ಲಿ ಗುರುವಾರ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ, ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರು ಹಂಚಿಕೆ ವಿಚಾರಗಳು ಪ್ರಮುಖವಾಗಿ ಚರ್ಚೆಗೆ ಬಂದವು. ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾಗಿರುವ ದಕ್ಷಿಣ ರಾಜ್ಯಗಳಿಗೆ ಕ್ಷೇತ್ರ ಪುನರ್ವಿಂಗಡಣೆ ವೇಳೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿದರು. 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ನಡೆಸಬೇಕು. ಲೋಕಸಭೆಯ ಒಟ್ಟು 543 ಸ್ಥಾನಗಳನ್ನು ಮುಂದಿನ 25 ವರ್ಷಗಳ ಕಾಲ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ. ಜನಸಂಖ್ಯೆ ನಿಯಂತ್ರಣಕ್ಕೆ ಕೇಂದ್ರ ನೀಡಿದ ಕರೆಯನ್ನು ದಕ್ಷಿಣ ರಾಜ್ಯಗಳು ಯಶಸ್ವಿಯಾಗಿ ಪಾಲಿಸಿವೆ. ಈ ಸಾಧನೆಗಾಗಿ ಕ್ಷೇತ್ರ ಪುನರ್ವಿಂಗಡಣೆ ಸಂದರ್ಭದಲ್ಲಿ ಅವುಗಳಿಗೆ ರಾಜಕೀಯವಾಗಿ ಶಿಕ್ಷೆಯಾಗಬಾರದು. ಪ್ರಾತಿನಿಧ್ಯವೆಂದರೆ ಕೇವಲ ಸ್ಥಾನಗಳ ಸಂಖ್ಯೆಯಲ್ಲ, ಅದು ರಾಜಕೀಯ ಪ್ರಭಾವ ಮತ್ತು ಜನರ ಧ್ವನಿಯೂ ಆಗಿದೆ…