2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ

ನವದೆಹಲಿ: 2014ರಿಂದ 2026ರ ಜೂನ್‌ವರೆಗೆ ಕನಿಷ್ಠ ಬೆಂಬಲ ಬೆಲೆ (MSP) ವ್ಯವಸ್ಥೆಯಡಿ 12,819 ಲಕ್ಷ ಮೆಟ್ರಿಕ್ ಟನ್ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗಿದ್ದು, ರೈತರಿಗೆ ಒಟ್ಟು ₹27.8 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್, ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸುಗಳು, ರಾಜ್ಯ ಸರ್ಕಾರಗಳು ಹಾಗೂ ಸಂಬಂಧಿತ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಪ್ರತಿವರ್ಷ 22 ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 2018-19ರ ಕೇಂದ್ರ ಬಜೆಟ್ ಘೋಷಣೆಯಂತೆ, ಎಲ್ಲ MSPಗಳನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸುವ ನೀತಿಯನ್ನು ಸರ್ಕಾರ ಮುಂದುವರಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಅಂಕಿ-ಅಂಶಗಳ ಪ್ರಕಾರ, 2021-22ರಿಂದ 2026ರ ಜೂನ್‌ವರೆಗೆ ಮಾತ್ರ…

ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು

ನವದೆಹಲಿ: ದೇಶಾದ್ಯಂತ ಆಯುಷ್ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ 2014-15ರಿಂದ 2025-26ರವರೆಗೆ ರಾಷ್ಟ್ರೀಯ ಆಯುಷ್ ಮಿಷನ್ (NAM) ಅಡಿಯಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ₹6,406.99 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸಾರ್ವಜನಿಕ ಆರೋಗ್ಯವು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಒಳಪಡುವ ವಿಷಯವಾಗಿದ್ದು, ಹೊಸ ಆಯುಷ್ ಕಾಲೇಜುಗಳು, ಸಂಯೋಜಿತ ಆಸ್ಪತ್ರೆಗಳು ಹಾಗೂ ಇತರೆ ಆರೋಗ್ಯ ಮೂಲಸೌಕರ್ಯಗಳನ್ನು ಸ್ಥಾಪಿಸುವ ಜವಾಬ್ದಾರಿ ರಾಜ್ಯಗಳದ್ದಾಗಿದೆ ಎಂದು ಆಯುಷ್ ಸಚಿವಾಲಯ ಸ್ಪಷ್ಟಪಡಿಸಿದೆ. ಆದರೆ, ರಾಜ್ಯಗಳು ತಮ್ಮ ರಾಜ್ಯ ವಾರ್ಷಿಕ ಕ್ರಿಯಾ ಯೋಜನೆಗಳ (SAAPs) ಮೂಲಕ ಸಲ್ಲಿಸುವ ಪ್ರಸ್ತಾವನೆಗಳ ಆಧಾರದ ಮೇಲೆ ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ಆಯುಷ್ ಸೇವೆ ಲಭ್ಯವಿಲ್ಲದ ರಾಜ್ಯಗಳಲ್ಲಿ ಹೊಸ ಸರ್ಕಾರಿ ಆಯುಷ್ ಕಾಲೇಜುಗಳ ಸ್ಥಾಪನೆ, 10, 30 ಹಾಗೂ 50 ಹಾಸಿಗೆಗಳ ಸಂಯೋಜಿತ ಆಯುಷ್ ಆಸ್ಪತ್ರೆಗಳ…

‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

ಬೆಂಗಳೂರು: ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ಖ್ಯಾತ ಖಳನಟ ಪ್ರದೀಪ್ ರಾವತ್ ಅವರು ಆಗಸ್ಟ್ 4ರ ಸಂಜೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯನ್ನು ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿಂದಿ, ಕನ್ನಡ, ತೆಲುಗು, ತಮಿಳು ಸೇರಿದಂತೆ ವಿವಿಧ ಚಿತ್ರರಂಗಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. 1988ರಲ್ಲಿ ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಧಾರಾವಾಹಿಯಲ್ಲಿ ಅಶ್ವತ್ಥಾಮ ಪಾತ್ರದ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಪ್ರದೀಪ್ ರಾವತ್, 1990ರಲ್ಲಿ ಸಲ್ಮಾನ್ ಖಾನ್ ಅಭಿನಯದ ‘ಬಾಘಿ’ ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದರು. ಬಳಿಕ ‘ಲಗಾನ್’ ಚಿತ್ರದಲ್ಲಿ ದೇವ್ ಪಾತ್ರ ಹಾಗೂ ‘ಘಜಿನಿ’ ಚಿತ್ರದಲ್ಲಿ ಘಜಿನಿ ಧರ್ಮಾತ್ಮ ಪಾತ್ರದ ಮೂಲಕ ಭಾರತೀಯ ಚಿತ್ರರಂಗದ ಪ್ರಮುಖ ಖಳನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡರು. ತೆಲುಗಿನ ‘ಸೈ’ ಚಿತ್ರದ ಭಿಕ್ಷು…

ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

ಬೆಂಗಳೂರು: ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರ ಮನವೊಲಿಕೆ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಸಚಿವ ಎನ್. ಚಲುವರಾಯಸ್ವಾಮಿ ಇಂದು ಶಾಸಕ ಎಂ. ಕೃಷ್ಣಪ್ಪ ಹಾಗೂ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಎಂ. ಕೃಷ್ಣಪ್ಪ ನಿವಾಸದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, “ಕೃಷ್ಣಪ್ಪ ಅವರು ಕೆಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸೂಚನೆ ಮೇರೆಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ” ಎಂದು ಹೇಳಿದರು. “ಬುಧವಾರ ಮುಖ್ಯಮಂತ್ರಿ ಸ್ವತಃ ಕೃಷ್ಣಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಅವರು ನಮಗೆ ಹಿರಿಯಣ್ಣನಂತಹವರು. ಇಲ್ಲಿ ಸಂಧಾನ ಎಂಬ ಪ್ರಶ್ನೆಯೇ ಇಲ್ಲ. ಅಷ್ಟು ದೊಡ್ಡವರು ನಾವಲ್ಲ. ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗುತ್ತದೆ” ಎಂದು ಅವರು ತಿಳಿಸಿದರು. ಇದೇ ವೇಳೆ, ಈ ಹಿಂದೆ ಉಂಟಾಗಿದ್ದ ಕೆಲವು ಭಿನ್ನಾಭಿಪ್ರಾಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು…

ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು

ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಮಾತನಾಡುವ ವೇಳೆ ನಟಿ ತ್ರಿಷಾ ಕೃಷ್ಣನ್ ಕುರಿತು ದ್ವಂದ್ವಾರ್ಥ ಮೂಡಿಸುವ ರೀತಿಯ ಹೇಳಿಕೆ ನೀಡಿದ್ದರೆಂಬ ಆರೋಪ ಉದಯನಿಧಿ ವಿರುದ್ಧ ಕೇಳಿಬಂದಿದೆ. ಕಾರ್ಯಕ್ರಮದ ವೇಳೆ ಕೆಲವರು ತ್ರಿಷಾ ಹೆಸರನ್ನು ಕೂಗುತ್ತಿದ್ದಾಗ, “ನಾನು ಹೇಳಿದ್ದು ಕಾವೇರಿ ನೀರಿನ ಬಗ್ಗೆ” ಎಂದು ನಗುತ್ತಲೇ ಪ್ರತಿಕ್ರಿಯಿಸಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಪಕ್ಷ, ತಂಜಾವೂರು ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ…

ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರು ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷವು ಈ ಬಾರಿ ಬ್ರಾಹ್ಮಣ ಸಮುದಾಯವನ್ನು ಸಚಿವ ಸಂಪುಟದಲ್ಲಿ ಕಡೆಗಣಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರು ಬಾರಿ ಶಾಸಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಅವರು ಕಳೆದ ಹಲವು ದಶಕಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಇಂತಹ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡದಿರುವುದು ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.…

ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ, “ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ದಯವಿಟ್ಟು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ” ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಬಸವರಾಜ ಹೊರಟ್ಟಿ, “ಇದು ಕಲುಷಿತ ರಾಜಕಾರಣ. ಈ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ” ಎಂದು ಹೇಳಿದ್ದಾರೆ. ಇದಲ್ಲದೆ, ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ನಲ್ಲಿ ನೂತನ ವಿಧಾನ ಪರಿಷತ್ ಸಭಾಪತಿ ಹೆಸರನ್ನು ಪ್ರಕಟಿಸಿರುವ ಕ್ರಮಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಭಾಪತಿ ಹಾಗೂ ಸಭಾಧ್ಯಕ್ಷರ ಹುದ್ದೆಗಳು ಸಾಂವಿಧಾನಿಕ ಹುದ್ದೆಗಳಾಗಿವೆ. ಆ ಹುದ್ದೆಯಲ್ಲಿರುವವರನ್ನು ಬದಲಾಯಿಸಲು ಬಯಸಿದರೆ ಮೊದಲು ನೋಟಿಸ್ ನೀಡಬೇಕು. ಅದಕ್ಕೆ ನಾನು ಸೂಕ್ತ ಉತ್ತರ…

‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ

ಬೆಂಗಳೂರು: ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರ ಅಧಿಕಾರಾವಧಿ ಜನಪರ ಹಾಗೂ ಯಶಸ್ವಿಯಾಗಲಿ ಎಂದು ಅವರು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಶುಭಾಶಯ ಕೋರಿರುವ ಸುರ್ಜೇವಾಲ, ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್‌ನ ಬದ್ಧತೆಯನ್ನು ಪ್ರತಿಬಿಂಬಿಸುವ ಸಚಿವ ಸಂಪುಟ ರಚನೆಯಾಗಿದ್ದು, ಯುವಶಕ್ತಿ ಮತ್ತು ಅನುಭವದ ಸಮನ್ವಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿಯ ಕಾರ್ಯಸೂಚಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಸಚಿವರು ಮತ್ತು ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿವೃದ್ಧಿಯ ಪಯಣವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು…

ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕವೂ ರಾಜ್ಯದ ಎಂಟು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಿಸ್ತರಣೆಯ ನಂತರ ಒಟ್ಟು 23 ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿದ್ದರೆ, ಎಂಟು ಜಿಲ್ಲೆಗಳು ಸಂಪುಟದಲ್ಲಿ ಸ್ಥಾನ ಪಡೆಯದೇ ಉಳಿದಿವೆ. ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಉಡುಪಿ, ರಾಯಚೂರು, ಯಾದಗಿರಿ, ಗದಗ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿಲ್ಲ. ಇನ್ನೊಂದೆಡೆ, ಬೆಂಗಳೂರು ನಗರ ಜಿಲ್ಲೆ ಅತಿ ಹೆಚ್ಚು ಪ್ರಾತಿನಿಧ್ಯ ಪಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಈ ಜಿಲ್ಲೆಯಿಂದ ಆರು ಸಚಿವರು ಸ್ಥಾನ ಪಡೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿ ಜಿಲ್ಲೆಯಿಂದ ಮೂವರು ಸಚಿವರು ಸಂಪುಟದಲ್ಲಿದ್ದಾರೆ. ರಾಮನಗರ, ಬೆಳಗಾವಿ, ಕೊಪ್ಪಳ ಹಾಗೂ ಮಂಡ್ಯ ಜಿಲ್ಲೆಗಳಿಂದ ತಲಾ ಇಬ್ಬರು ಸಚಿವರು ಸ್ಥಾನ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, ದಕ್ಷಿಣ ಕನ್ನಡ, ಉತ್ತರ…

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಅಲೆ ಎದ್ದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಶಾಸಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೆಲ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ. ಇದೇ ವೇಳೆ, ಬೇಳೂರು ಶಾಸಕ ಗೋಪಾಲಕೃಷ್ಣ ಅವರು ಉದ್ದೇಶಪೂರ್ವಕವಾಗಿ ಸಚಿವ ಸ್ಥಾನದಿಂದ ವಂಚಿಸಲಾಗಿದೆ ಎಂದು ಆರೋಪಿಸಿ, ಶಾಸಕ ಸ್ಥಾನ ಹಾಗೂ ನಿಗಮ–ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರು ಮುಂದಿನ ರಾಜಕೀಯ ನಡೆ ಕುರಿತು ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಮೈಸೂರು,…