ಸೌಜನ್ಯಾ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳಲ್ಲಿ ವರದಿ

ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಮರು ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ಮರುತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಮರುತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಸಿಬಿಐ ತನಿಖೆಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಜುಲೈನಲ್ಲಿ ನಡೆದ ವಿಚಾರಣೆಯಲ್ಲಿ, ತನಿಖಾಧಿಕಾರಿ ಸ್ವತಂತ್ರವಾಗಿ ತನಿಖೆ ನಡೆಸುವ ಬದಲು ಈ ಹಿಂದೆ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳು ಮತ್ತು ದಾಖಲೆಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ ಎಂದು ಪೀಠ ಹೇಳಿತ್ತು. ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್…

‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ

ಹೈದರಾಬಾದ್: ಜನಪ್ರಿಯ ‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಹಾಗೂ ವೃತ್ತಿಪರ ಕುಸ್ತಿಪಟು ಸೌರವ್ ಗುರ್ಜರ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ವಂಚನೆ ದೂರಿನ ಆಧಾರದ ಮೇಲೆ ನಟನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಚಿಬೌಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, 2021ರಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಸೌರವ್ ಗುರ್ಜರ್ ಅವರ ಪರಿಚಯವಾಗಿತ್ತು ಎಂದು ಮಹಿಳೆ ತಿಳಿಸಿದ್ದಾರೆ. ಬಳಿಕ ವಾಟ್ಸಾಪ್ ಮೂಲಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದ್ದು, ಅದೇ ವರ್ಷದ ಡಿಸೆಂಬರ್ 25ರಂದು ಮೊದಲ ಬಾರಿಗೆ ನೇರವಾಗಿ ಭೇಟಿಯಾಗಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೌರವ್ ಗುರ್ಜರ್ ತಮ್ಮನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಮದುವೆಯಾದ ಬಳಿಕ ಪತ್ನಿಗೆ ಸಿಗುವ ಗೌರವ ಮತ್ತು ಹಕ್ಕುಗಳನ್ನು ನೀಡುವುದಾಗಿ ಹೇಳಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಈ ಭರವಸೆಯನ್ನು ನಂಬಿ ಅಮೆರಿಕದಲ್ಲಿದ್ದ ಉದ್ಯೋಗವನ್ನು ತೊರೆದು ಭಾರತಕ್ಕೆ ಮರಳಿದ್ದಾಗಿ…

ಅಕ್ಟೋಬರ್ 10ರೊಳಗೆ ಗದಗ ಬರಪೀಡಿತ ಘೋಷಿಸಿ; ಇಲ್ಲದಿದ್ದರೆ ರಾಜೀನಾಮೆ: ಎಚ್.ಕೆ. ಪಾಟೀಲ

ಗದಗ: ಅಕ್ಟೋಬರ್ 10ರೊಳಗಾಗಿ ಗದಗ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಪಾಟೀಲ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮುಳಗುಂದ ಪಟ್ಟಣದ ಬಳಿ ಕಾರವಾರ–ಕೈಗಾ ಹಾಗೂ ಗದಗ–ಇಳಕಲ್ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಡೆದು ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ಏಕೆ ಎಂದು ಪ್ರಶ್ನಿಸಿದ ಪಾಟೀಲ, “ಬರ ಘೋಷಣೆಗೆ ಅಡ್ಡಿಯಾಗಿರುವವರು ಯಾರು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಅನ್ಯಾಯ ಮತ್ತು ಮೋಸವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂದರ್ಭದಲ್ಲೇ ಗದಗದ ಬರ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಸರ್ಕಾರದ ಮುಂದಿತ್ತು. ಬಳಿಕ ಮುಖ್ಯಮಂತ್ರಿ…

ಸುಡಾನ್‌ನಲ್ಲಿ ಚಿನ್ನದ ಗಣಿ ಕುಸಿತ: 11 ಕಾರ್ಮಿಕರು ಸಾವು

ಖಾರ್ಟೌಮ್: ಈಶಾನ್ಯ ಸುಡಾನ್‌ನ ಕೆಂಪು ಸಮುದ್ರ ರಾಜ್ಯದ ಒನಿ ಪ್ರದೇಶದಲ್ಲಿ ಚಿನ್ನದ ಗಣಿಯ ಸುರಂಗ ಕುಸಿದು ಸಂಭವಿಸಿದ ದುರಂತದಲ್ಲಿ ಕನಿಷ್ಠ 11 ಕಾರ್ಮಿಕರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಶನಿವಾರ ರಾತ್ರಿ ಗಣಿ ಕುಸಿಯಲು ಆರಂಭಿಸಿದ್ದು, ಭಾನುವಾರದ ವೇಳೆಗೆ ಅವಶೇಷಗಳಿಂದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ. 30 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಸುಡಾನ್ ಮಿನರಲ್ ರಿಸೋರ್ಸಸ್ ಕಂಪನಿಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಸುಡಾನ್‌ನಲ್ಲಿ ಅನಧಿಕೃತ ಚಿನ್ನದ ಗಣಿ ಕುಸಿದಿರುವ ಎರಡನೇ ಘಟನೆ ಇದಾಗಿದೆ. ಗಣಿಗಾರಿಕೆ ಪ್ರದೇಶಗಳಲ್ಲಿ ಸುರಕ್ಷತಾ ಮಾನದಂಡಗಳ ಕೊರತೆಯಿಂದ ಇಂತಹ ದುರಂತಗಳು ಪದೇಪದೆ ಸಂಭವಿಸುತ್ತಿವೆ ಎಂದು ವರದಿಯಾಗಿದೆ. ಕಳೆದ ವಾರ ಪಶ್ಚಿಮ ಸುಡಾನ್‌ನಲ್ಲಿ ನಡೆದ ಮತ್ತೊಂದು ಚಿನ್ನದ ಗಣಿ ಕುಸಿತದಲ್ಲಿ ಕನಿಷ್ಠ…

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಷರತ್ತು: ವಾಣಿಜ್ಯ ಹಡಗುಗಳ ಮಾರ್ಗ ಬದಲಿಸಿದ ಅಮೆರಿಕ

ಟೆಹ್ರಾನ್: ಅಮೆರಿಕ ತನ್ನ ಷರತ್ತುಗಳನ್ನು ಈಡೇರಿಸುವವರೆಗೆ ಹಾರ್ಮುಜ್ ಜಲಸಂಧಿಯನ್ನು ಮರು ತೆರೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಇರಾನ್ ಮೇಲಿನ ನೌಕಾ ದಿಗ್ಬಂಧನವನ್ನು ಜಾರಿಗೊಳಿಸುತ್ತಿರುವ ಅಮೆರಿಕ, ಜಲಸಂಧಿ ಪ್ರದೇಶದಲ್ಲಿ ಸಂಚರಿಸುತ್ತಿದ್ದ 109 ವಾಣಿಜ್ಯ ಹಡಗುಗಳ ಮಾರ್ಗವನ್ನು ಬದಲಾಯಿಸಿದೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್, ಮಧ್ಯವರ್ತಿಗಳ ಮೂಲಕ ಅಮೆರಿಕಕ್ಕೆ ಇರಾನ್ ತನ್ನ ಬೇಡಿಕೆಗಳನ್ನು ತಿಳಿಸಿದೆ. ಅವು ಈಡೇರುವವರೆಗೆ ಹಿಂದಿನ ಮಾತುಕತೆ ಚೌಕಟ್ಟಿಗೆ ಮರಳುವ ಅಥವಾ ಹಾರ್ಮುಜ್ ಜಲಸಂಧಿ ತೆರೆಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್‌ನಲ್ಲಿ ನೌಕಾ ಸಂಚಾರ ತೀವ್ರವಾಗಿ ಕುಸಿದಿದೆ. ಸೆಪ್ಟೆಂಬರ್ 20ರ ವೇಳೆಗೆ ಅಮೆರಿಕದ ಪಡೆಗಳು 109 ವಾಣಿಜ್ಯ ಹಡಗುಗಳನ್ನು ಮರುಮಾರ್ಗಗೊಳಿಸಿರುವುದಾಗಿ CENTCOM ಹೇಳಿದೆ. ಇತ್ತೀಚಿನ ವಾರಾಂತ್ಯದಲ್ಲಿ ಕೇವಲ 12 ಸರಕು ಸಾಗಣೆ ಹಡಗುಗಳು ಜಲಸಂಧಿ…

ಬರ, ಕಸ್ತೂರಿರಂಗನ್ ವರದಿ; ಇಂದಿನಿಂದ ವಿಧಾನಮಂಡಲ ಕದನ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಮತ್ತೊಂದು ಸುತ್ತಿನ ರಾಜಕೀಯ ಸಮರಕ್ಕೆ ವಿಧಾನಮಂಡಲ ವೇದಿಕೆಯಾಗಲಿದೆ. ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಪ್ರಮುಖ ಅಜೆಂಡಾಗಳಾಗಿರುವ ಮೂರು ದಿನಗಳ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾಗಲಿದ್ದು, ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿ, ಬೆಳೆಹಾನಿ, ಕುಡಿಯುವ ನೀರು, ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ. ಜಾನುವಾರುಗಳಿಗೆ ನೀರು ಮತ್ತು ಮೇವಿನ ಕೊರತೆ, ಬೆಳೆ ನಷ್ಟ ಪರಿಹಾರ ಹಾಗೂ ರೈತರ ಸಾಲಮನ್ನಾ ವಿಚಾರಗಳನ್ನೂ ಪ್ರತಿಪಕ್ಷಗಳು ಪ್ರಸ್ತಾಪಿಸುವ ಸಾಧ್ಯತೆಯಿದೆ. ಕಳೆದ ತಿಂಗಳು ನಡೆದ 11 ದಿನಗಳ ಮುಂಗಾರು ಅಧಿವೇಶನ ಗದ್ದಲದಲ್ಲೇ ಅಂತ್ಯಗೊಂಡಿತ್ತು. ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿ ಧರಣಿ ನಡೆಸಿದ್ದರಿಂದ ಕಲಾಪಕ್ಕೆ ಪದೇಪದೆ ಅಡ್ಡಿಯಾಗಿತ್ತು. ಹೀಗಾಗಿ ಬರ ಸೇರಿದಂತೆ ಹಲವು…

ಬಂಟರ ಸಂಘ ಬೆಂಗಳೂರು ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

ಬೆಂಗಳೂರು: ವಿಜಯನಗರದ ಬಂಟರ ಸಂಘದಲ್ಲಿ ನಡೆದ 2026–29ನೇ ಸಾಲಿನ ಚುನಾವಣೆಯಲ್ಲಿ ದೀಪಕ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಧುಕರ್ ಶೆಟ್ಟಿ ಉಪಾಧ್ಯಕ್ಷರಾಗಿ ಹಾಗೂ ಮಹಿಳಾ ಮೀಸಲು ಉಪಾಧ್ಯಕ್ಷರಾಗಿ ಸೌಮ್ಯ ಶ್ರೀ ಹೆಗಡೆ ಆಯ್ಕೆಯಾಗಿದ್ದಾರೆ. ಚುನಾವಣೆಯ ಫಲಿತಾಂಶದಂತೆ ಅಮರನಾಥ್ ಶೆಟ್ಟಿ ಕಾರ್ಯದರ್ಶಿಯಾಗಿ, ಸುರೇಶಾ ಶೆಟ್ಟಿ ಜಂಟಿ ಕಾರ್ಯದರ್ಶಿಯಾಗಿ ಹಾಗೂ ರಮೀತ್ ಬಿ. ಶೆಟ್ಟಿ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರು: ಆನಿತಾ ಚಂದ್ರಶೇಖರ್ ಶೆಟ್ಟಿ, ಶಕುಂತಲ ಶೆಟ್ಟಿ, ಮಾಲತಿ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಕಿಶೋರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಕಿರ್ತನ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಸಾದ ಕುಮಾರ್ ಶೆಟ್ಟಿ, ಡಿ.ಬಿ. ಪ್ರತಾಪ್ ಶೆಟ್ಟಿ, ರಾಮದಾಸ್ ಶೆಟ್ಟಿ, ಹೀರಾ ಅನೂಪ್ ಹೆಗಡೆ, ಉಮೇಶ್ ಹಾಗೂ ನಿತ್ಯಾರಂಜನ್ ಶೆಟ್ಟಿ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಶಿಕ್ಷಣ, ಉದ್ಯೋಗ, ಆರೋಗ್ಯಕ್ಕೆ ಆದ್ಯತೆ: ನೂತನ ಅಧ್ಯಕ್ಷ ದೀಪಕ್ ಶೆಟ್ಟಿ ಮಾತನಾಡಿ, ಸಂಘದ ಸದಸ್ಯರು…

ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಸೆ.21ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಸೆ.22ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸೆ.22ರಂದು ಕರಾವಳಿ ಕರ್ನಾಟಕದ ದಕ್ಷಿಣ…

ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ

ಭೋಪಾಲ್: ಜಾತಿ ಹಾಗೂ ಹುಟ್ಟಿನ ಆಧಾರದ ಮೇಲೆ ಮನುಷ್ಯರ ನಡುವೆ ತಾರತಮ್ಯ ಮಾಡುವುದು ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಭೋಪಾಲ್‌ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾವೆಲ್ಲರೂ ಭಾರತ ಮಾತೆಯ ಮಕ್ಕಳು, ನಾವೆಲ್ಲರೂ ದೇವರ ಮಕ್ಕಳು. ಹೀಗಾಗಿ ಮನುಷ್ಯರ ನಡುವೆ ಯಾವುದೇ ರೀತಿಯ ತಾರತಮ್ಯ ಇರಬಾರದು” ಎಂದು ಹೇಳಿದರು. #WATCH | Bhopal, Madhya Pradesh: RSS General Secretary Dattatreya Hosabale says, “… We are all children of Mother India. We are all children of God. Therefore, there should be no discrimination of any kind among humans. Discrimination based on birth is not part of Hindu… pic.twitter.com/KBAQbJktwO — ANI…

ಬರ ನಿರ್ವಹಣೆಯಲ್ಲಿ ಡಿಕೆಶಿ ಸರ್ಕಾರ ವಿಫಲ? ಹೆಚ್.ಕೆ.ಪಾಟೀಲ್ ರಾಜೀನಾಮೆ ಬೆದರಿಕೆಯೇ ಬಿಜೆಪಿಗೆ ಅಸ್ತ್ರ!

ಬೆಂಗಳೂರು: ಬರಪೀಡಿತ ಪ್ರದೇಶಗಳ ಘೋಷಣೆ ಹಾಗೂ ರೈತರಿಗೆ ತಕ್ಷಣದ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ತೀವ್ರ ಬರದಿಂದ ಬೆಳೆಗಳು ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ಸರ್ಕಾರವೂ ಅನ್ನದಾತರನ್ನು ಕೈಬಿಟ್ಟಿದೆಯೇ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರು ಕೂಡ ಬರಪೀಡಿತ ಪ್ರದೇಶಗಳ ಘೋಷಣೆ ಮತ್ತು ಪರಿಹಾರ ಕ್ರಮಗಳ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ. ‘ಬರ ಪ್ರವಾಸ’ ಕೇವಲ ಪ್ರಚಾರವೇ? ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಗೆ ನೆರವಿನ…