ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದಿದೆ ಎನ್ನಲಾದ ಅವಮಾನಕರ ‘ಶುದ್ಧೀಕರಣ’ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ. ಇದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ದಲಿತ ವಿರೋಧಿ ನೀತಿಯ ಪರಮಾವಧಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಹಿರಿಯ ರಾಜಕಾರಣಿ ಹಾಗೂ ಶೋಷಿತ ಸಮುದಾಯದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಶುದ್ಧೀಕರಣ’ದ ಹೆಸರಿನಲ್ಲಿ ಅವಮಾನಿಸಲಾಗಿದೆ ಎಂದು ದೂರಿದ್ದಾರೆ. ಅಮಾನವೀಯ ಕೃತ್ಯವನ್ನು ಖಂಡಿಸಿ ನ್ಯಾಯಕ್ಕಾಗಿ ಧ್ವನಿ ಎತ್ತಿದ್ದೇ ರಾಹುಲ್ ಗಾಂಧಿ ಮಾಡಿದ ತಪ್ಪೇ ಎಂದು ಪ್ರಶ್ನಿಸಿರುವ ಪದ್ಮರಾಜ್ ಪೂಜಾರಿ, ಅವಮಾನಕರ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಶೋಷಿತ ಸಮುದಾಯದ ಪರವಾಗಿ ನಿಂತು…
Day: September 2, 2026
ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಪ್ರಜಾಪ್ರಭುತ್ವದ ಮೇಲಿನ ದಾಳಿ: ರಘುಮೂರ್ತಿ
ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತೀವ್ರವಾಗಿ ಖಂಡಿಸಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಸ್ಥಳವನ್ನು ಶುದ್ಧೀಕರಿಸಲಾಗಿದೆ ಎನ್ನಲಾದ ಕೃತ್ಯವನ್ನು ಪ್ರಶ್ನಿಸಿ, ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯದಂತಹ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರ ಮೇಲೆಯೇ ಪ್ರಕರಣ ದಾಖಲಿಸಿರುವುದು ವಿಪರ್ಯಾಸ ಎಂದು ಅವರು ಹೇಳಿದ್ದಾರೆ. ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದಲಿತರು ಮತ್ತು ಆದಿವಾಸಿಗಳ ರಕ್ಷಣೆಗೆ ರೂಪಿಸಲಾಗಿದೆ. ಆದರೆ ದಲಿತರ ಪರವಾಗಿ ಧ್ವನಿ ಎತ್ತಿದವರ ವಿರುದ್ಧವೇ ಈ ಕಾಯ್ದೆಯನ್ನು ಬಳಸಿರುವುದು ಅದರ ಆಶಯಕ್ಕೆ ವಿರುದ್ಧವಾಗಿದೆ. ಇದು ಕಾನೂನಿನ ದುರುಪಯೋಗ ಹಾಗೂ ಸಂವಿಧಾನದ ಆಶಯಗಳಿಗೆ…
ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಇಲಾಖೆ ಸ್ಪಷ್ಟನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ದಿವಂಗತ ಚಂದ್ರಶೇಖರನ್ ಅವರ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಪೈಕಿ ₹3.05 ಲಕ್ಷ ಪಿಎಫ್ ಮೊತ್ತ ಮಾತ್ರ ಬಾಕಿ ಇದ್ದು, ಉಳಿದ ಎಲ್ಲಾ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಮೈಸೂರಿನ ಪೇಪರ್ ಮಿಲ್ಸ್‌ನಿಂದ ಚಂದ್ರಶೇಖರನ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ವಿಲೀನಗೊಳಿಸಲಾಗಿತ್ತು. ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ ನಿರ್ದೇಶನದಂತೆ ನಿಗಮದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ನೌಕರರ ಶಾಸನಬದ್ಧ ಕಡಿತಗಳ ಮೊತ್ತವನ್ನು ಜಮಾ ಮಾಡಲು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯಲು ಅನುಮತಿ ನೀಡಲಾಗಿತ್ತು. ಅದರಂತೆ ಜುಲೈ 22, 2026ರಂದು ಬ್ಯಾಂಕ್ ಖಾತೆ ತೆರೆಯಲಾಗಿದೆ. ಬಾಕಿ ಇರುವ ₹3.05 ಲಕ್ಷ ಪಿಎಫ್ ಮೊತ್ತವನ್ನು ಶೀಘ್ರದಲ್ಲೇ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
