ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ. ಹೋರಾಟಗಾರನಾಗಿ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ನೂರು ಪ್ರಕರಣ ದಾಖಲಿಸಿದರೂ ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಮುಚ್ಚಳಿಕೆ ಬರೆದುಕೊಡುವುದೂ ಇಲ್ಲ, ಕ್ಷಮೆ ಕೇಳುವುದೂ ಇಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದಲ್ಲಿ ದುರುದ್ದೇಶಪೂರ್ವಕವಾಗಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಜನರಿಗೆ ಮನದಟ್ಟು ಮಾಡುವುದು ನಮ್ಮ ಕರ್ತವ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು, ಸ್ವಾತಂತ್ರ್ಯಾನಂತರ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದವರು ಯಾರು ಎಂಬುದನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದರು. ಕಾಂಗ್ರೆಸ್‌ನ ಶಕ್ತಿ ದೇಶದ ಶಕ್ತಿ ಹಾಗೂ ಕಾಂಗ್ರೆಸ್‌ನ…