ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ ದ್ವೇಷವನ್ನು ತಡೆಯಲು ಶಿಕ್ಷಕರು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಜ್ಞಾನ ನೀಡುವುದಷ್ಟೇ ಶಿಕ್ಷಕರ ಜವಾಬ್ದಾರಿಯಲ್ಲ, ಅವರ ಉಜ್ವಲ ಭವಿಷ್ಯ ರೂಪಿಸುವ ಮೂಲಕ ಸಮಾಜವನ್ನು ಸುಧಾರಿಸುವ ಮಹತ್ತರ ಹೊಣೆಗಾರಿಕೆಯೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಬಹುತ್ವದ ರಾಷ್ಟ್ರವಾಗಿದ್ದು, ವಿವಿಧ ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ನಡುವೆ ಸೌಹಾರ್ದತೆ ಕಾಪಾಡುವುದು ಎಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದ ವೇಳೆ ನಡೆದ ಮಾನವೀಯತೆಯ ಘಟನೆಯನ್ನು ಉಲ್ಲೇಖಿಸಿದ ಹರಿಪ್ರಸಾದ್, ನಡೆಯಲು ಸಾಧ್ಯವಾಗದೆ ಬಂದಿದ್ದ ಮಹಿಳೆಯೊಬ್ಬರಿಗೆ ಮತ್ತೊಬ್ಬ ಮಹಿಳೆ ಕುರ್ಚಿ ನೀಡಿದ ಪ್ರಸಂಗವನ್ನು ಶ್ಲಾಘಿಸಿದರು. ಇಂತಹ ಮಾನವೀಯ ಮೌಲ್ಯಗಳೇ ಸಮಾಜವನ್ನು ಬಲಪಡಿಸುತ್ತವೆ. ಧರ್ಮಾಂಧತೆ ಮತ್ತು ಅಂಧಭಕ್ತಿಯ ನಡುವೆ ಸೌಹಾರ್ದತೆ ಹಾಗೂ ಮಾತೃ ಹೃದಯ ಹೊಂದಿರುವ ಲಕ್ಷಾಂತರ ಜನರು…
Day: September 5, 2026
ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
ನವದೆಹಲಿ: ಲಡಾಖ್‌ನ ಪ್ರಮುಖ ಬೇಡಿಕೆಗಳ ಕುರಿತು ಸೆಪ್ಟೆಂಬರ್ 9ರಂದು ಕೇಂದ್ರ ಗೃಹ ಸಚಿವಾಲಯದ ಉಪಸಮಿತಿ ನಡೆಸಲಿರುವ ಸಭೆಯಲ್ಲಿ ಸ್ಪಷ್ಟ ಪ್ರಗತಿ ಕಂಡುಬರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಲಡಾಖ್ ಅಪೆಕ್ಸ್ ಬಾಡಿ (LAB) ಎಚ್ಚರಿಕೆ ನೀಡಿದೆ. 2019ರ ಆಗಸ್ಟ್‌ನಲ್ಲಿ ಲಡಾಖ್ ಕೇಂದ್ರಾಡಳಿತ ಪ್ರದೇಶವಾದ ಬಳಿಕದಿಂದ LAB ಹಾಗೂ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (KDA) ಹಲವು ರಾಜಕೀಯ ಮತ್ತು ಸಾಂವಿಧಾನಿಕ ಬೇಡಿಕೆಗಳಿಗಾಗಿ ಒತ್ತಾಯಿಸುತ್ತಿವೆ. ಲಡಾಖ್‌ಗೆ ಚುನಾಯಿತ ವಿಧಾನಸಭೆ ಹಾಗೂ ಕಾನೂನು ರೂಪಿಸುವ ಅಧಿಕಾರ ನೀಡಬೇಕು, ಸಂವಿಧಾನದ 371ನೇ ವಿಧಿಯಡಿ ವಿಶೇಷ ರಕ್ಷಣೆ ಕಲ್ಪಿಸಬೇಕು, ಹಿಂದಿನ ವರ್ಷದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು, ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ತನಿಖಾ ಆಯೋಗದ ವರದಿ ಬಹಿರಂಗಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ. ಸೆಪ್ಟೆಂಬರ್ 9ರ ಸಭೆಯನ್ನು ಸ್ವಾಗತಿಸಿರುವ LAB ಅಧ್ಯಕ್ಷ ತ್ಸೆರಿಂಗ್ ದೋರ್ಜೆ ಲಕ್ರೂಕ್, ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಹೋರಾಟದ ನಿರ್ಧಾರ…
ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
ಬೆಂಗಳೂರು: ನಗರದ ನಾಗರಿಕ ಸೇವೆಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಬೆಳಗ್ಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿದ ಸಚಿವರು, ಅಲ್ಲಿನ ನಾಗರಿಕ ಸೌಲಭ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಸ್ವಚ್ಛತೆ, ಮನೆಮನೆ ಕಸ ಸಂಗ್ರಹ, ಪೌರಕಾರ್ಮಿಕರ ಕಾರ್ಯನಿರ್ವಹಣೆ, ರಸ್ತೆ ಮತ್ತು ಫುಟ್‌ಪಾತ್‌ಗಳ ನಿರ್ವಹಣೆ, ರಾಜಕಾಲುವೆಗಳ ಸ್ವಚ್ಛತೆ, ಕೆರೆಗಳ ಸಂರಕ್ಷಣೆ ಹಾಗೂ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರತಿಯೊಂದು ಮನೆಯಿಂದಲೂ ಪ್ರತಿದಿನ ಕಸ ಸಂಗ್ರಹವಾಗಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕ…
ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ
ವಾಷಿಂಗ್ಟನ್: ಇರಾನ್‌ನ ರಹಸ್ಯ ಭೂಗತ ಪರಮಾಣು ನೆಲೆ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕ ಶೀಘ್ರದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸಲು ಮುಂದಾದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶ್ವೇತಭವನದ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಪಿಕ್ಯಾಕ್ಸ್ ಮೌಂಟನ್‌ನಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಪತ್ತೆಯಾದರೂ ಅಮೆರಿಕ ಅದನ್ನು ಗುರಿಯಾಗಿಸಲಿದೆ ಎಂದರು. ಅಮೆರಿಕದ ಗುಪ್ತಚರ ಸಂಸ್ಥೆಗಳು ಇರಾನ್‌ನಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇರಿಸಿವೆ ಎಂದು ಹೇಳಿದರು. “ಇರಾನ್ ಪರಮಾಣು ಬಾಂಬ್ ತಯಾರಿಸದಂತೆ ತಡೆಯುವುದೇ ನಮ್ಮ ಪ್ರಮುಖ ಉದ್ದೇಶ. ಏನಾದರೂ ತಪ್ಪಾದರೆ ನಾವು ದಾಳಿ ಮಾಡುತ್ತೇವೆ, ಕಠಿಣವಾಗಿ ಹೊಡೆಯುತ್ತೇವೆ,” ಎಂದು ಟ್ರಂಪ್ ಎಚ್ಚರಿಸಿದರು. ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡ ಅವರು, ಕಳೆದ ಐದು ತಿಂಗಳಲ್ಲಿ ಅಮೆರಿಕದ ಪ್ರಮುಖ ಗುರಿ ಇರಾನ್…
ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ
ಬೆಂಗಳೂರು, ಸೆ.5: ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚಾಲನೆ ನೀಡಿದರು. ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಎಲ್ಲ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಸಾಧ್ಯವಾಗದಿದ್ದರೂ, ಜನರ ಅಹವಾಲುಗಳನ್ನು ನೇರವಾಗಿ ಆಲಿಸಿ ಸೂಕ್ತ ಪರಿಹಾರ ಒದಗಿಸಲು ಈ ಅಭಿಯಾನ ಸಹಕಾರಿಯಾಗಲಿದೆ ಎಂದರು. ಏನಿದು ಪ್ರಜಾಸೇವಾ ಅಭಿಯಾನ? ಪಿಂಚಣಿ, ಪಹಣಿ, ಪಡಿತರ ಚೀಟಿ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗೆ ಜನರು ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶ. ಜನರ ಮನೆ ಬಾಗಿಲಿಗೆ ತೆರಳಿ ಅಹವಾಲು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗಿದೆ. ಹೇಗೆ ನಡೆಯಲಿದೆ? ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ…
ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸೆಪ್ಟೆಂಬರ್ 24ರಂದು ವೈಟ್‌ಹೌಸ್‌ನಲ್ಲಿ ರಾಜ್ಯ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ. 2016ರ ಬಳಿಕ ಇದೇ ಮೊದಲ ಬಾರಿಗೆ ಷಿ ಜಿನ್‌ಪಿಂಗ್ ವಾಷಿಂಗ್ಟನ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧ, ವ್ಯಾಪಾರ ಹಾಗೂ ಹಲವು ಅಂತಾರಾಷ್ಟ್ರೀಯ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಷಿ ಜಿನ್‌ಪಿಂಗ್ ಅವರನ್ನು ‘ಉತ್ತಮ ವ್ಯಕ್ತಿ’ ಎಂದು ಬಣ್ಣಿಸಿದರು. ಅಮೆರಿಕಾ ಮತ್ತು ಚೀನಾ ಪರಸ್ಪರ ಸ್ಪರ್ಧಿಗಳಾಗಿದ್ದರೂ ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ ಎಂದರು. “ಅವರ ಭೇಟಿಯನ್ನು ಎದುರು ನೋಡುತ್ತಿದ್ದೇವೆ. ಅಧ್ಯಕ್ಷ ಷಿ ಅವರೊಂದಿಗೆ ನಮಗೆ ಉತ್ತಮ ಸಂಬಂಧವಿದೆ. ಚೀನಾದೊಂದಿಗೆ ಉತ್ತಮ ಕೆಲಸಗಳನ್ನು ಮಾಡಲು ಬಯಸುತ್ತೇವೆ” ಎಂದು ಟ್ರಂಪ್ ಹೇಳಿದರು. ಇದೇ ವೇಳೆ ಇರಾನ್‌ನಲ್ಲಿನ ಸಂಘರ್ಷದ…
ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
ಮಡಿಕೇರಿ: ಪ್ರವಾಸಿಗರಿಗೆ ಅರಣ್ಯ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಸುರಕ್ಷತಾ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲಾಗಿದ್ದ ಕೊಡಗಿನ ಹರಂಗಿ ಹಾಗೂ ಮೈಸೂರು ಗಡಿ ಸಮೀಪದ ಮತ್ತಿಗೋಡು ಆನೆ ಶಿಬಿರಗಳು ಶನಿವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಅಧಿಕೃತವಾಗಿ ಮುಕ್ತಗೊಂಡಿವೆ. ಆದರೆ, ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿರುವ ದುಬಾರೆ ಆನೆ ಶಿಬಿರಕ್ಕೆ ಮಾತ್ರ ಇನ್ನೂ ಪ್ರವೇಶ ನಿರ್ಬಂಧ ಮುಂದುವರಿದಿದೆ. ಮೇ ತಿಂಗಳಲ್ಲಿ ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ದುರ್ಘಟನೆಯಲ್ಲಿ ಪ್ರವಾಸಿಗರೊಬ್ಬರು ಹಾಗೂ ಸಾಕಾನೆ ಮೃತಪಟ್ಟಿದ್ದರು. ಘಟನೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲ ಆನೆ ಶಿಬಿರಗಳಲ್ಲಿ ಪ್ರವಾಸಿಗರ ಚಟುವಟಿಕೆಗಳನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಬಳಿಕ ಆನೆಗಳ ನಿರ್ವಹಣೆ, ಪ್ರವಾಸಿಗರ ಸುರಕ್ಷತೆ ಹಾಗೂ ಶಿಬಿರಗಳಲ್ಲಿನ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ರಾಜ್ಯ ಸರ್ಕಾರ ರೂಪಿಸಿರುವ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಅನ್ವಯ ಇದೀಗ ಹರಂಗಿ ಮತ್ತು ಮತ್ತಿಗೋಡು…
ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ
ಬೆಳಗಾವಿ: ಕೆಲಸ ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕರಿಗೆ ಗಡಿಗೆಯೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರಿಗೆ ನಾಣ್ಯಗಳು ಸಿಕ್ಕಿವೆ. ಒಟ್ಟು 54.8 ಗ್ರಾಂ ತೂಕ ಹೊಂದಿರುವ ನಾಣ್ಯಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ. ನಾಣ್ಯಗಳು ಸಿಕ್ಕ ಕೂಡಲೇ ಕಾರ್ಮಿಕರು ಅವುಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಸಮ್ಮುಖದಲ್ಲಿ ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಅವರಿಗೆ ನಾಣ್ಯಗಳನ್ನು ಹಸ್ತಾಂತರಿಸಲಾಗಿದ್ದು, ಬಳಿಕ ಖಜಾನೆಗೆ ಒಪ್ಪಿಸಲಾಗಿದೆ. ಪತ್ತೆಯಾದ ನಾಣ್ಯಗಳ ಮೇಲೆ ಆನೆಯ ಚಿತ್ರವಿದೆ ಎನ್ನಲಾಗಿದ್ದು, ತಲಕಾಡಿನ ಗಂಗರ ರಾಜಲಾಂಛನ ಆನೆಯಾಗಿದ್ದ ಹಿನ್ನೆಲೆಯಲ್ಲಿ ನಾಣ್ಯಗಳು ಗಂಗರ ಕಾಲಕ್ಕೆ ಸೇರಿದವೆಯೇ ಎಂಬ ಕುತೂಹಲ ಮೂಡಿದೆ. ನಾಣ್ಯಗಳು ಕ್ರಿ.ಶ. 10ರಿಂದ 15ನೇ ಶತಮಾನದ ಅವಧಿಗೆ ಸೇರಿದವು ಎಂಬ ಶಂಕೆ ವ್ಯಕ್ತವಾಗಿದೆ.…
ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ
ನವದೆಹಲಿ: ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಳ್ಳಸಾಗಣೆ ಹಾಗೂ ಶೋಷಣೆ ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನಡೆಸಿದ ವಿಶೇಷ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ 3,800ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ. ‘ಪ್ಯಾನ್-ಇಂಡಿಯಾ ರೆಸ್ಕ್ಯೂ ಆ್ಯಂಡ್ ರಿಹ್ಯಾಬಿಲಿಟೇಷನ್’ ಹೆಸರಿನಲ್ಲಿ ಜೂನ್ 12ರಿಂದ ಆಗಸ್ಟ್ 31ರವರೆಗೆ ನಡೆದ ಅಭಿಯಾನದಲ್ಲಿ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಜಿಲ್ಲಾಧಿಕಾರಿಗಳು, ಕಾರ್ಮಿಕ ಇಲಾಖೆ, ಪೊಲೀಸರು ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳು ಸಹಕರಿಸಿದವು. ಬಾಲಕಾರ್ಮಿಕ ಹಾಗೂ ಮಕ್ಕಳ ಕಳ್ಳಸಾಗಣೆ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಗುರಿಯಾಗಿಸಿಕೊಂಡು ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸುವಂತೆ ಎನ್‌ಸಿಪಿಸಿಆರ್ ಅಧಿಕಾರಿಗಳಿಗೆ ಸೂಚಿಸಿತ್ತು. ರಕ್ಷಿಸಲಾದ ಮಕ್ಕಳ ಸಂಖ್ಯೆ, ದಾಖಲಾದ ಎಫ್‌ಐಆರ್‌ಗಳು, ಪುನರ್ವಸತಿ ಕ್ರಮಗಳು, ಕುಟುಂಬಗಳಿಗೆ ಮರುಸ್ಥಾಪನೆ, ಶಿಕ್ಷಣಕ್ಕೆ ಮರುಸೇರ್ಪಡೆ ಹಾಗೂ ಪರಿಹಾರಧನದ ಕುರಿತು ನಿಯಮಿತವಾಗಿ ವರದಿ ಸಲ್ಲಿಸುವಂತೆಯೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿತ್ತು. ಅಭಿಯಾನದ ಅನುಷ್ಠಾನ ಪರಿಶೀಲಿಸಲು ಎನ್‌ಸಿಪಿಸಿಆರ್ ಜಿಲ್ಲಾ…
ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ
ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣ ತಲುಪಿದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಯುನೈಟೆಡ್ ಕಿಂಗ್‌ಡಮ್ ಪ್ರವಾಸದಲ್ಲಿರುವ ಭಾಗವತ್ ಅವರನ್ನು ವಿಮಾನ ನಿಲ್ದಾಣದಲ್ಲಿ ಭಾರತೀಯ ಸಮುದಾಯದ ಪ್ರತಿನಿಧಿಗಳು ಹಾಗೂ ಸಂಘದ ಕಾರ್ಯಕರ್ತರು ಸಾಂಪ್ರದಾಯಿಕ ರೀತಿಯಲ್ಲಿ ಬರಮಾಡಿಕೊಂಡರು.
