ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ನವದೆಹಲಿ: ದೆಹಲಿಯ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈವರೆಗೆ 9 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 40ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಧ್ಯಾಹ್ನ 1.30ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಸುಮಾರು 40 ಮಂದಿ ವಾಸಿಸುತ್ತಿದ್ದ ಪೇಯಿಂಗ್ ಗೆಸ್ಟ್‌ (PG) ವಸತಿಯಾಗಿ ಇದನ್ನು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 40ರಿಂದ 50 ವರ್ಷ ಹಳೆಯದಾದ ಕಟ್ಟಡದಲ್ಲಿ ನೆಲಮಾಳಿಗೆ ಹಾಗೂ ಐದು ಮೇಲಿನ ಮಹಡಿಗಳಿದ್ದವು. ಘಟನೆ ವೇಳೆ ನೆಲಮಾಳಿಗೆಯಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. ಭಾರೀ ಮಳೆಯೂ ಕಟ್ಟಡ ಕುಸಿತಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಲಭಿಸಿದ ಕೂಡಲೇ ದೆಹಲಿ ಪೊಲೀಸರು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ತಂಡಗಳು ಸ್ಥಳಕ್ಕೆ…