ಗ್ರಾಮೀಣ LPG ಗ್ರಾಹಕರಿಗೆ ಗುಡ್ ನ್ಯೂಸ್: 45 ದಿನಗಳ ಗಡುವು 25 ದಿನಕ್ಕೆ ಇಳಿಕೆ

ನವದೆಹಲಿ: ಗ್ರಾಮೀಣ ಪ್ರದೇಶದ ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಮೀಣ ಭಾಗದಲ್ಲೂ ಕೇವಲ 25 ದಿನಗಳ ಅಂತರದಲ್ಲಿ ಮತ್ತೊಂದು ಅಡುಗೆ ಅನಿಲ ಸಿಲಿಂಡರ್‌ನ್ನು ಮರುಬುಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಸಿಲಿಂಡರ್ ಬುಕಿಂಗ್‌ಗೆ ಇದ್ದ 45 ದಿನಗಳ ಕಡ್ಡಾಯ ಅವಧಿಯನ್ನು ಸರ್ಕಾರ 25 ದಿನಗಳಿಗೆ ಇಳಿಸಿದೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇಂಡಿಯನ್ ಆಯಿಲ್, ಬಿಪಿಸಿಎಲ್ ಹಾಗೂ ಎಚ್‌ಪಿಸಿಎಲ್ ಸೇರಿದಂತೆ ತೈಲ ಮಾರಾಟ ಕಂಪನಿಗಳಿಗೆ ಸೂಚನೆ ನೀಡಿದೆ. ಪರಿಷ್ಕೃತ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲು ಸೂಚಿಸಲಾಗಿದೆ. 2026ರ ಮಾರ್ಚ್‌ನಲ್ಲಿ ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೊರ್ಮುಜ್ ಜಲಸಂಧಿಗೆ ಸಂಬಂಧಿಸಿದ ಬೆಳವಣಿಗೆಗಳಿಂದ ಜಾಗತಿಕ ಇಂಧನ ಪೂರೈಕೆಯ ಮೇಲೂ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ದಾಸ್ತಾನು ಮತ್ತು…