ಬ್ರಿಟಿಷರ ದೌರ್ಜನ್ಯ ವಿರುದ್ಧದ ಹೋರಾಟದ ಕಥೆ; ವಿಜಯ್-ರಶ್ಮಿಕಾ ಜೋಡಿಯ ‘ರಣಬಾಲಿ’ ಟೀಸರ್ ಬಿಡುಗಡೆ;

ಹೈದರಾಬಾದ್: ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ಬಹುನಿರೀಕ್ಷಿತ ಐತಿಹಾಸಿಕ ಆ್ಯಕ್ಷನ್‌–ಡ್ರಾಮಾ ‘ರಣಬಾಲಿ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ರಾಹುಲ್‌ ಸಾಂಕೃತ್ಯನ್‌ ನಿರ್ದೇಶನದ ಈ ಸಿನಿಮಾ ದಸರಾ ಹಬ್ಬದ ಸಂದರ್ಭದಲ್ಲಿ ಅಕ್ಟೋಬರ್‌ 16ರಂದು ವಿಶ್ವಾದ್ಯಂತ ತೆರೆಗೆ ಬರಲು ಸಿದ್ಧವಾಗುತ್ತಿದೆ. ‘ದಿ ಸ್ಯಾವೇಜಸ್ ಓತ್’ ಎಂಬ ಶೀರ್ಷಿಕೆಯಡಿ ಬಿಡುಗಡೆಯಾಗಿರುವ ಟೀಸರ್‌ ಸಿನಿಮಾದ ಕಥಾಹಂದರದ ಬಗ್ಗೆ ಕುತೂಹಲ ಮೂಡಿಸಿದೆ. 1876–1878ರ ಅವಧಿಯಲ್ಲಿ ಸಂಭವಿಸಿದ ‘ಮದ್ರಾಸ್‌ ಕ್ಷಾಮ’ದ ಹಿನ್ನೆಲೆಯನ್ನು ಚಿತ್ರ ಹೊಂದಿದೆ. ಬ್ರಿಟಿಷರ ಆಡಳಿತದ ಸಂದರ್ಭದಲ್ಲಿ ನಡೆದ ದೌರ್ಜನ್ಯ ಮತ್ತು ಅದರ ವಿರುದ್ಧ ಸ್ಥಳೀಯರು ನಡೆಸಿದ ಹೋರಾಟವನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ಟೀಸರ್‌ನಲ್ಲಿ ಬ್ರಿಟಿಷ್‌ ಅಧಿಕಾರಿಗಳ ಕ್ರೌರ್ಯ ಹಾಗೂ ಅವರ ವಿರುದ್ಧ ಬಂಡೆದ್ದ ಜನರ ಹೋರಾಟದ ದೃಶ್ಯಗಳು ಗಮನ ಸೆಳೆಯುತ್ತವೆ. ಭಾರತದಲ್ಲಿ ಬ್ರಿಟಿಷರ ಆಡಳಿತದ ಅವಧಿಯಲ್ಲಿ ನಡೆದ ಅಮಾನವೀಯ ಘಟನೆಗಳ ಹಿನ್ನೆಲೆಯನ್ನು ಚಿತ್ರದಲ್ಲಿ ಪ್ರಸ್ತುತಪಡಿಸಲಾಗಿದೆ. ಹಾಲಿವುಡ್‌ನ ‘ದಿ ಮಮ್ಮಿ’…