ಬೆಂಗಳೂರು: ಪಿ.ಸಿ. ಹೋಟಾ ಸಮಿತಿ ವರದಿ ಹಾಗೂ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ದ ನಿಯಮಾವಳಿ ಮತ್ತು ಪ್ರಕ್ರಿಯೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಅಳವಡಿಸುವ ಮೂಲಕ ಆಯೋಗಕ್ಕೆ ಸೂಕ್ತ ಕಾಯಕಲ್ಪ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ, ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿಯಲ್ಲಿ ನಡೆದಿರುವ ಅಕ್ರಮಗಳ ಆರೋಪಗಳಿಂದ ಉದ್ಯೋಗಾಕಾಂಕ್ಷಿಗಳು ಹಾಗೂ ಸಾರ್ವಜನಿಕರಲ್ಲಿ ಆಯೋಗದ ಮೇಲಿನ ನಂಬಿಕೆ ಕುಸಿದಿದೆ. ಇದರಿಂದ ಸರ್ಕಾರದ ಆಡಳಿತದ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧದ ಆರೋಪಗಳ ಕುರಿತು ಸಂವಿಧಾನದ ಅನುಚ್ಛೇದ 317ರಡಿ ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕು. ತನಿಖೆ ನಡೆಯುವ ಅವಧಿಯಲ್ಲಿ ಆರೋಪಿತ…
