SIR ರದ್ದುಗೊಳಿಸಿ ಹೊಸದಾಗಿ ಪ್ರಕ್ರಿಯೆ ನಡೆಸಬೇಕು; ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೊಸದಾಗಿ ಪರಿಷ್ಕರಣೆ ನಡೆಸಬೇಕು ಎಂದು ಆಗ್ರಹಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಚುನಾವಣಾ ವ್ಯವಸ್ಥೆಯ ಸ್ವಾಯತ್ತತೆ ಮತ್ತು ಪಾರದರ್ಶಕತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು. “ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಬಡವರು ಹಾಗೂ ಆಡಳಿತ ವ್ಯವಸ್ಥೆಯನ್ನು ಟೀಕಿಸುವ ಮತದಾರರನ್ನು ಗುರಿಯಾಗಿಸಲಾಗುತ್ತಿದೆ. ಬಿಜೆಪಿ ಜತೆ ಸೇರಿ ಮತಗಳ್ಳತನಕ್ಕೆ ಚುನಾವಣಾ ಆಯೋಗ ಪಾಲುದಾರವಾಗಿದೆ” ಎಂದು ಅವರು ಆರೋಪಿಸಿದರು. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅಕ್ರಮವಾಗಿ ನಡೆದ ಚುನಾವಣೆಗಳ ಕುರಿತು ಪರಿಶೀಲನೆ…