‘ಮನ್ ಕಿ ಬಾತ್’: ಸರ್ಜಿಕಲ್ ಸ್ಟ್ರೈಕ್ ಸ್ಮರಿಸಿದ ಮೋದಿ; ಜನಗಣತಿಯಲ್ಲಿ ಭಾಗವಹಿಸಲು ಕರೆ

ನವದೆಹಲಿ: 2016ರ ಸರ್ಜಿಕಲ್ ಸ್ಟ್ರೈಕ್‌ನ 10ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಾಚರಣೆಯನ್ನು ಸ್ಮರಿಸಿದ್ದು, ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವನ್ನು ಅದು ಜಗತ್ತಿಗೆ ತೋರಿಸಿತ್ತು ಎಂದು ಹೇಳಿದರು. ಭಾನುವಾರ ನಡೆದ ‘ಮನ್ ಕಿ ಬಾತ್’ 138ನೇ ಸಂಚಿಕೆಯಲ್ಲಿ ಅವರು ಈ ಕುರಿತು ಮಾತನಾಡಿದರು. 2016ರ ಸೆಪ್ಟೆಂಬರ್ 28–29ರಂದು ನಿಯಂತ್ರಣ ರೇಖೆಯಾಚೆ ಭಯೋತ್ಪಾದಕ ನೆಲೆಗಳ ವಿರುದ್ಧ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್, ಭಯೋತ್ಪಾದನೆಗೆ ಭಾರತದ ನಿರ್ಣಾಯಕ ಪ್ರತಿಕ್ರಿಯೆಯಾಗಿತ್ತು ಎಂದು ಮೋದಿ ಹೇಳಿದರು. ಕಳೆದ ಒಂದು ದಶಕದಲ್ಲಿ ಬಾಲಾಕೋಟ್ ವೈಮಾನಿಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಮೂಲಕವೂ ಇದೇ ಸಂದೇಶ ಮುಂದುವರಿದಿದೆ ಎಂದು ಅವರು ಉಲ್ಲೇಖಿಸಿದರು. ನಡೆಯುತ್ತಿರುವ ಜನಗಣತಿಯಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನಿ ಕರೆ ನೀಡಿದರು. ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಹಂತ ಬಹುತೇಕ ಪೂರ್ಣಗೊಂಡಿದ್ದು, 32 ಕೋಟಿಗೂ…