ನಗೋಯಾ: ಏಷ್ಯನ್ ಗೇಮ್ಸ್‌ನ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಅಂಕುಶ್ ಪಂಘಾಲ್ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಶುಕ್ರವಾರ ನಡೆದ ಪುರುಷರ 80 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ಸಿಯಾಂಗ್ ಅವರನ್ನು 4-0 ಅಂತರದಿಂದ ಮಣಿಸಿದ ಅಂಕುಶ್, ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ 2018ರಲ್ಲಿ ಅಮಿತ್ ಪಂಘಾಲ್ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಪುರುಷ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಗೋಯಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್‌ಗಳ ಯಶಸ್ಸಿನ ಓಟ ಮುಂದುವರಿದಿದೆ. ಇದಕ್ಕೂ ಮುನ್ನ ಮಹಿಳೆಯರ 75 ಕೆ.ಜಿ. ವಿಭಾಗದಲ್ಲಿ ಲವ್ಲಿನಾ ಬೊರ್ಗೊಹೈನ್ ಹಾಗೂ 65 ಕೆ.ಜಿ. ವಿಭಾಗದಲ್ಲಿ ಪರ್ವೀನ್ ಹೂಡಾ ತಮ್ಮ ಫೈನಲ್ ಪಂದ್ಯಗಳಲ್ಲಿ ಜಯಗಳಿಸಿ ಚಿನ್ನದ ಪದಕ ಗೆದ್ದಿದ್ದರು. ಇದೀಗ ಅಂಕುಶ್ ಅವರ ಗೆಲುವಿನೊಂದಿಗೆ ಬಾಕ್ಸಿಂಗ್‌ನಲ್ಲಿ ಭಾರತ ಮೂರು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಏಷ್ಯನ್ ಗೇಮ್ಸ್‌ನ…
Day: October 2, 2026
ಏಷ್ಯನ್ ಗೇಮ್ಸ್ : ಫೈನಲ್‌ನಲ್ಲಿ ಏಳು ಅಂಕಗಳ ಹಿನ್ನಡೆ ಮೆಟ್ಟಿ ಜಯ; ಭಾರತಕ್ಕೆ ಕುಸ್ತಿಯಲ್ಲಿ ಮೊದಲ ಚಿನ್ನ
ನಗೋಯಾ: ಏಷ್ಯನ್ ಗೇಮ್ಸ್‌ನ ಪುರುಷರ 65 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಸುಜೀತ್ ಕಲ್ಕಲ್ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಶುಕ್ರವಾರ ನಡೆದ ರೋಚಕ ಫೈನಲ್‌ನಲ್ಲಿ ಏಳು ಅಂಕಗಳ ಹಿನ್ನಡೆಯಿಂದ ಅದ್ಭುತವಾಗಿ ಚೇತರಿಸಿಕೊಂಡ ಅವರು, ಎದುರಾಳಿ ಅಬ್ದುಲ್ಮಜಿದ್ ಕುದೀವ್ ಅವರನ್ನು ಮಣಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಈ ಮೂಲಕ ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಮೊದಲ ಚಿನ್ನದ ಪದಕ ತಂದುಕೊಟ್ಟರು. ಫೈನಲ್ ಪಂದ್ಯದಲ್ಲಿ ಕಲ್ಕಲ್ ಆರಂಭದಲ್ಲಿ 2-9 ಅಂಕಗಳಿಂದ ಹಿನ್ನಡೆ ಅನುಭವಿಸಿದ್ದರು. ಆದರೆ, ಒತ್ತಡದ ನಡುವೆಯೂ ಹೋರಾಟ ಮುಂದುವರಿಸಿದ ಅವರು, ಪ್ರಬಲ ಪುನರಾಗಮನದ ಮೂಲಕ ಎದುರಾಳಿಯನ್ನು ಮಣಿಸಿ ಸ್ಮರಣೀಯ ಗೆಲುವು ದಾಖಲಿಸಿದರು. ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಜಪಾನ್‌ನ ಒಲಿಂಪಿಕ್ ಚಾಂಪಿಯನ್ ಕೊಟಾರೊ ಕಿಯೊಕ ಅವರನ್ನು ಸೋಲಿಸಿ ಕಲ್ಕಲ್ ಫೈನಲ್ ಪ್ರವೇಶಿಸಿದ್ದರು. ಫೈನಲ್‌ಗೇರಲು ನಡೆದ ಹಾದಿಯಲ್ಲಿ ಅಫ್ಘಾನಿಸ್ತಾನ ಮತ್ತು ಇರಾನ್‌ನ ಕುಸ್ತಿಪಟುಗಳ ವಿರುದ್ಧ ತಾಂತ್ರಿಕ ಶ್ರೇಷ್ಠತೆಯ ಆಧಾರದ ಮೇಲೆ…
44 ವರ್ಷಗಳ ಭಾರತದ ಕನಸು ನನಸು: ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಹಿಳಾ ಹಾಕಿ ತಂಡ
ಕಕಾಮಿಗಹರಾ (ಜಪಾನ್): ಏಷ್ಯನ್ ಗೇಮ್ಸ್ ಮಹಿಳಾ ಹಾಕಿ ಚಿನ್ನದ ಪದಕಕ್ಕಾಗಿ ಭಾರತ 44 ವರ್ಷಗಳಿಂದ ಕಾಯುತ್ತಿದ್ದ ನಿರೀಕ್ಷೆ ಕೊನೆಗೂ ಈಡೇರಿದೆ. ಶುಕ್ರವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಭಾರತ, ಚಿನ್ನದ ಪದಕಕ್ಕೆ ಮುತ್ತಿಕ್ಕಿತು. ಈ ಗೆಲುವಿನೊಂದಿಗೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆಯನ್ನೂ ಖಚಿತಪಡಿಸಿಕೊಂಡಿತು. ಪಂದ್ಯದ ಆರಂಭದಿಂದಲೇ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಕಂಡುಬಂತು. ಪಂದ್ಯದ 10ನೇ ನಿಮಿಷದಲ್ಲಿ ಲಾಲ್‌ರೆಮ್ಸಿಯಾಮಿ ಅವರು ಅದ್ಭುತ ರಿವರ್ಸ್ ಸ್ಟಿಕ್ ಹೊಡೆತದ ಮೂಲಕ ಗೋಲು ದಾಖಲಿಸಿ ಭಾರತಕ್ಕೆ ಮುನ್ನಡೆ ತಂದುಕೊಟ್ಟರು. ಈ ಗೋಲೇ ಪಂದ್ಯದ ನಿರ್ಣಾಯಕ ಗೋಲಾಗಿ ಪರಿಣಮಿಸಿತು. ಮುನ್ನಡೆ ಸಾಧಿಸಿದ ಬಳಿಕ ಭಾರತ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿತು. ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಚೀನಾ ತಂಡ ಸಮಬಲ ಸಾಧಿಸಲು ನಿರಂತರ ದಾಳಿ ನಡೆಸಿದರೂ, ಭಾರತದ…
ಕಾವೇರಿ ನೀರು ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು ಕರ್ನಾಟಕ ಮನವಿ; ಸಿಡಬ್ಲ್ಯೂಎಂಎ ಆದೇಶ ಮರುಪರಿಶೀಲನೆಗೆ ಆಗ್ರಹ
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಬರ ಪರಿಸ್ಥಿತಿ ಹಾಗೂ ಜಲಾಶಯಗಳಲ್ಲಿ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 4,000 ಕ್ಯೂಸೆಕ್ಸ್‌ನಿಂದ 2,000 ಕ್ಯೂಸೆಕ್ಸ್‌ಗೆ ಇಳಿಸುವಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸೆಪ್ಟೆಂಬರ್ 24ರಂದು ನಡೆದ ಪ್ರಾಧಿಕಾರದ 58ನೇ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 4,000 ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಲಾಗಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಅಧಿಕೃತ ಮನವಿ ಸಲ್ಲಿಸಿದೆ ಎಂದು ಸಚಿವರು ವಿವರಿಸಿದ್ದಾರೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಕೃಷ್ಣರಾಜ ಸಾಗರ (ಕೆಆರ್‌ಎಸ್), ಹೇಮಾವತಿ, ಹಾರಂಗಿ ಹಾಗೂ ಕಬಿನಿ ಜಲಾಶಯಗಳಿಗೆ ನೀರಿನ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಪ್ರಸ್ತುತ ಈ…
ಗೋಕಳ್ಳತನ, ಅಕ್ರಮ ಸಾಗಾಟ ತಡೆಗೆ ಹಿಂದು ಜಾಗರಣ ವೇದಿಕೆ ಆಗ್ರಹ; ಕೊಲ್ಲೂರು ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಒತ್ತಾಯ
ಬೈಂದೂರು: ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋಸಾಗಾಟದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಘಟಕ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಮಾರಣಕಟ್ಟೆ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗೋವುಗಳ ಕಳ್ಳತನ ಮತ್ತು ಅಕ್ರಮ ಸಾಗಾಟ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಕೆಲವು ಸಂದರ್ಭಗಳಲ್ಲಿ ಮಾರಕಾಯುಧಗಳನ್ನು ಬಳಸಿ ಗೋವುಗಳನ್ನು ಹತ್ಯೆ ಮಾಡಿ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳೂ ಇವೆ. ಈ ಸಂಬಂಧ ಸ್ಥಳೀಯ ನಿವಾಸಿಯೊಬ್ಬರು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂಬರ್ 57/2026ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವೇದಿಕೆ ತಿಳಿಸಿದೆ. ಮಾರಣಕಟ್ಟೆ ದೇವಸ್ಥಾನದ ಸಮೀಪ ಮಲಗಿದ್ದ ಗೋವುಗಳನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು…
ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ ಪ್ರಕ್ರಿಯೆ; ವಿರೋಧದ ಹಿಂದೆ ಕಾಂಗ್ರೆಸ್‌ನ ದುರುದ್ದೇಶ: ಡಾ. ರವಿ ಸಿ.ಟಿ ಆಕ್ರೋಶ
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಆರೋಪಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದದ್ದಲ್ಲ. ದೇಶದಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಾದ 1951–52ರಿಂದಲೂ ವಿವಿಧ ಸಂದರ್ಭಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಚುನಾವಣಾ ಆಯೋಗ ಈ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. ನೆಹರು, ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ನೇತೃತ್ವದ ಅವಧಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಾಗ ಆಕ್ಷೇಪಿಸದ ಕಾಂಗ್ರೆಸ್, ಈಗ ವಿರೋಧಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಮರಣ ಹೊಂದಿದವರು, ಸ್ಥಳಾಂತರಗೊಂಡವರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರು ಹಾಗೂ ನಕಲಿ ಮತದಾರರ ಹೆಸರುಗಳನ್ನು ಪರಿಶೀಲಿಸಿ, ಪಟ್ಟಿಯನ್ನು ಶುದ್ಧೀಕರಿಸುವುದು ಎಸ್‌ಐಆರ್‌ನ ಉದ್ದೇಶವಾಗಿದೆ…
ಚಂದಾಪುರ ಸೇರಿ ಐದು ಕೆರೆಗಳಿಗೆ ರಾಮಲಿಂಗಾರೆಡ್ಡಿ ಭೇಟಿ, ಪರಿಶೀಲನೆ; ಸಂಸ್ಕರಿಸದ ತ್ಯಾಜ್ಯ ನೀರು ಹರಿಸಿದರೆ ಕ್ರಮದ ಎಚ್ಚರಿಕೆ
ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಕೈಗಾರಿಕಾ ಹಾಗೂ ಒಳಚರಂಡಿ ತ್ಯಾಜ್ಯ ನೀರು ಕೆರೆಗಳಿಗೆ ಸೇರುವುದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಿವಣ್ಣ ಅವರೊಂದಿಗೆ ಸಚಿವರು ಚಂದಾಪುರ, ರಾಮಕೃಷ್ಣಾಪುರ, ಹೆನ್ನಾಗರ, ಹೀಲಲಿಗೆ ಹಾಗೂ ಮುತ್ತಾನಲ್ಲೂರು ಕೆರೆಗಳಿಗೆ ಭೇಟಿ ನೀಡಿ, ಅಲ್ಲಿನ ಮಾಲಿನ್ಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ಎಲೆಕ್ಟ್ರಾನಿಕ್ ಸಿಟಿ, ಜಿಗಣಿ ಹಾಗೂ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳಿಂದ ಸಂಸ್ಕರಿಸದ ಕೈಗಾರಿಕಾ ತ್ಯಾಜ್ಯ ನೀರು ಮತ್ತು ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ಪ್ರದೇಶಗಳಿಂದ ಸಂಸ್ಕರಿಸದ ಒಳಚರಂಡಿ ನೀರು ಜಲಮೂಲಗಳಿಗೆ ಸೇರುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಕೆರೆಗಳ ಮಾಲಿನ್ಯದಿಂದ ಪರಿಸರ ಹಾಗೂ ಸ್ಥಳೀಯ ನಿವಾಸಿಗಳ ಮೇಲೆ ಉಂಟಾಗುತ್ತಿರುವ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಸಂಸ್ಕರಿಸದ ಕೈಗಾರಿಕಾ ಮತ್ತು…
ಬಂಟರ ಸಂಘ ಬೆಂಗಳೂರು ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ; 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆ
ಬೆಂಗಳೂರು: ಬಂಟರ ಸಂಘ ಬೆಂಗಳೂರಿನ 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ಹಾಗೂ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಡಾ. ದೀಪಕ್ ಶೆಟ್ಟಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಘದ ಆವರಣ ಹಾಗೂ ಮುಲ್ಕಿ ಸುಂದರರಾಮ್ ಶೆಟ್ಟಿ ಮೆಮೋರಿಯಲ್ ಎಂ.ಎಸ್.ಆರ್.ಎಸ್. ನಗರ ಟ್ರಸ್ಟ್ ಹಾಲ್‌ನಲ್ಲಿ ಏಕಕಾಲದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಧುಕರ್ ಎಂ. ಶೆಟ್ಟಿ ಮತ್ತು ಸೌಮ್ಯಪ್ರಿಯ ಹೆಗ್ಡೆ, ಗೌರವ ಕಾರ್ಯದರ್ಶಿಯಾಗಿ ಅಮರನಾಥ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಸುರೇಖಾ ಶೆಟ್ಟಿ ಹಾಗೂ ಖಜಾಂಚಿಯಾಗಿ ರಮಿತ್ ಬಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ಅನಿತಾ ಪಿ. ಭಂಡಾರಿ, ಅರುಣ್ ಕುಮಾರ್ ಶೆಟ್ಟಿ ಎಚ್., ಸಿ.ಎ. ಚಂದ್ರಶೇಖರ್ ಶೆಟ್ಟಿ, ಹೀರಾ ಅನುಪ್ ಹೆಗ್ಡೆ, ಕೀರ್ತನ್ ಶೆಟ್ಟಿ, ಸಿ.ಎ. ಕಿಶೋರ್ ಶೆಟ್ಟಿ, ಮಾಲತಿ ಜೆ. ಶೆಟ್ಟಿ, ನಿತ್ಯರಂಜನ್ ಶೆಟ್ಟಿ, ಪ್ರಸಾದ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಎಸ್.,…
