ಕೃಷಿ ಸಾಲ ಮನ್ನಾ ಹೋರಾಟಕ್ಕೆ ಮಣಿದ ಸರ್ಕಾರ; ವಾರದೊಳಗೆ ರೈತ ಮುಖಂಡರ ಸಭೆ; ಜಾರಕಿಹೊಳಿ ಭರವಸೆ

ಬೆಂಗಳೂರು: ಕೃಷಿ ಸಾಲ ಮನ್ನಾ, ಬೆಳೆ ನಷ್ಟ ಪರಿಹಾರ ಹಾಗೂ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಕ್ಟೋಬರ್ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಯಿತು. ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ಒಂದು ವಾರದೊಳಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ಕರೆಯುವ ಭರವಸೆ ನೀಡಿದರು. ರಾಜ್ಯದ 217 ತಾಲೂಕುಗಳು ಬರದ ಪರಿಸ್ಥಿತಿಗೆ ತುತ್ತಾಗಿದ್ದು, ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ₹20 ಸಾವಿರ ಕೋಟಿಗೂ ಅಧಿಕ ಬೆಳೆ ನಷ್ಟ ಸಂಭವಿಸಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ರೈತರ ಎಲ್ಲ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು. ‘ಸರ್ಕಾರದ ಭಿಕ್ಷೆ ಬೇಡ’ ಎಂಬ…