ಅರ್ಥಪೂರ್ಣವಾಗಿ ವಾಲ್ಮೀಕಿ ಜಯಂತಿ ಆಚರಣೆ: ಸಚಿವ ರಘುಮೂರ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿಯವರ ಆದರ್ಶಗಳು, ಜೀವನ ಸಂದೇಶ ಹಾಗೂ ಸಾಹಿತ್ಯಿಕ ಕೊಡುಗೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಬಾರಿಯ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ. ನಗರದ ವಿಕಾಸಸೌಧದಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಸಮುದಾಯದ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಸಮುದಾಯದ ಪ್ರಮುಖ ಹಬ್ಬಗಳು, ಜಯಂತಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಗೌರವಯುತವಾಗಿ ಆಚರಿಸಲು ಅಗತ್ಯ ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕು ಎಂದು ಮುಖಂಡರು ಮನವಿ ಮಾಡಿದರು. ಬೆಂಗಳೂರಿನ ಶಾಸಕರ ಭವನದಲ್ಲಿರುವ ವಾಲ್ಮೀಕಿ ಉದ್ಯಾನವನವನ್ನು ಮಹರ್ಷಿ ವಾಲ್ಮೀಕಿಯವರ ಜೀವನ…