ಏಷ್ಯನ್ ಪ್ಯಾರಾ ಗೇಮ್ಸ್: ಕ್ರೀಡಾಪಟುಗಳ ಧೈರ್ಯ, ಸಮರ್ಪಣೆ ಮತ್ತು ಛಲಕ್ಕೆ ಪ್ರಧಾನಿ ಮೆಚ್ಚುಗೆ

ನವದೆಹಲಿ: ಜಪಾನ್‌ನ ಐಚಿ–ನಗೋಯಾದಲ್ಲಿ 2026ರ ಏಷ್ಯನ್ ಪ್ಯಾರಾ ಗೇಮ್ಸ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾರತೀಯ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಸಂದೇಶ ಹಂಚಿಕೊಂಡಿರುವ ಮೋದಿ, ಭಾರತದ ಪ್ಯಾರಾ ಕ್ರೀಡಾಪಟುಗಳ ಬಗ್ಗೆ ದೇಶಕ್ಕೆ ಅಪಾರ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಅವರ ಧೈರ್ಯ, ಸಮರ್ಪಣೆ ಮತ್ತು ಅದಮ್ಯ ಮನೋಭಾವ ನಿರಂತರವಾಗಿ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಕ್ರೀಡಾಪಟುಗಳು ಆತ್ಮವಿಶ್ವಾಸದಿಂದ ಸ್ಪರ್ಧಿಸಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿ” ಎಂದು ಹಾರೈಸಿರುವ ಪ್ರಧಾನಿ, ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಭಾರತೀಯ ತಂಡ ಯಶಸ್ಸು ಸಾಧಿಸಲಿ ಎಂದು ಶುಭ ಕೋರಿದ್ದಾರೆ. ತಮ್ಮ ದೃಢನಿಶ್ಚಯ, ಪರಿಶ್ರಮ ಮತ್ತು ಕ್ರೀಡಾ ಶ್ರೇಷ್ಠತೆಯ ಬದ್ಧತೆಯ ಮೂಲಕ ಪ್ಯಾರಾ ಕ್ರೀಡಾಪಟುಗಳು ಲಕ್ಷಾಂತರ ಭಾರತೀಯರಿಗೆ ಪ್ರೇರಣೆಯಾಗಿದ್ದಾರೆ ಎಂದು ಮೋದಿ ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಕ್ರೀಡಾಪಟುಗಳ ಪ್ರದರ್ಶನವನ್ನು…

ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ವಸಿಷ್ಠ ಸಿಂಹ! ಹೊಸ ಸಿನಿಮಾದ ಪೋಸ್ಟರ್ ಅನಾವರಣ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಲವು ವರ್ಷಗಳ ಬಳಿಕ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಪತ್ನಿ ಹರಿಪ್ರಿಯಾ ಹಾಗೂ ಮಗನೊಂದಿಗೆ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ನಟ, ಅಭಿಮಾನಿಗಳ ಪ್ರೀತಿಗೆ ಮನಸೋತಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ವಸಿಷ್ಠ ಸಿಂಹ ಅಭಿನಯದ ಹೊಸ ಸಿನಿಮಾದ ಪೋಸ್ಟರ್ ಹಾಗೂ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಾಯಿತು. ಇದರಿಂದ ಹುಟ್ಟುಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ದೊರೆಯಿತು. ಕಾರ್ಯಕ್ರಮದಲ್ಲಿ ಅಭಿಮಾನಿಗಳ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ವಸಿಷ್ಠ ಸಿಂಹ, ಇಷ್ಟು ವರ್ಷಗಳಿಂದ ತಮಗೆ ಬೆಂಬಲವಾಗಿ ನಿಂತ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು. “ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲಾಗದು. ನೀವು ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚು ನಾನು ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಹೇಳುವ ಮೂಲಕ ಅಭಿಮಾನಿಗಳ ಮೇಲಿನ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ನೆಚ್ಚಿನ ನಟನನ್ನು ಭೇಟಿಯಾಗಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಹಲವು ವರ್ಷಗಳ…