ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಮೃತರ ಕುಟುಂಬಗಳಿಗೆ ಸರ್ಕಾರದ ನೆರವಿನ ಭರವಸೆ

ಬೆಂಗಳೂರು: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ದೆಹಲಿ ಮೂಲದ ಪೈಲಟ್ ಹಾಗೂ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿರುವುದು ತೀವ್ರ ಆಘಾತ ಮತ್ತು ದುಃಖ ಉಂಟುಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕ್ಯಾಪ್ಟನ್ ಹಿಮಾಂಶು, ಸಿಸಿಬಿ ಇನ್‌ಸ್ಪೆಕ್ಟರ್ ಅರುಣ್ ಸಾಲಂಕೆ, ಪ್ರತಾಪ್ ಬಿ. ನಿಂಗರಾಜು, ಶಂಕರಗೌಡ ವಿ.ಬಿ., ಸುಧೀರ್ ಕೆ. ಹಾಗೂ ಎಚ್.ಎಸ್. ನಟರಾಜು ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ಅಗಲಿದವರ ಕುಟುಂಬಸ್ಥರಿಗೆ ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹಾರೈಸಿರುವ ಅವರು, ಮೃತದೇಹಗಳನ್ನು ಆದಷ್ಟು ಬೇಗ ಕರ್ನಾಟಕಕ್ಕೆ ತರಲು ಉತ್ತರಾಖಂಡದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ದುಃಖದ ಸಮಯದಲ್ಲಿ ರಾಜ್ಯ ಸರ್ಕಾರ ಮೃತರ ಕುಟುಂಬಗಳೊಂದಿಗೆ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಭರವಸೆ…

ಕನ್ನಡಿಗರ ನೇಮಕಾತಿಯಲ್ಲಿ ತಾರತಮ್ಯ ಸಹಿಸುವುದಿಲ್ಲ: ಐಟಿ-ಬಿಟಿ ಕಂಪನಿಗಳಿಗೆ ಸರ್ಕಾರದ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಹಾಗೂ ಸ್ಥಳೀಯ ಕನ್ನಡ ಭಾಷಿಕರನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕನ್ನಡಿಗರ ಹಕ್ಕುಗಳು, ಘನತೆ ಮತ್ತು ಉದ್ಯೋಗಾವಕಾಶಗಳು ಸರ್ಕಾರಕ್ಕೆ ಅತ್ಯಂತ ಮಹತ್ವದ್ದಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯದ ಯುವಜನರ ವಿರುದ್ಧ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡುವುದನ್ನು ಸಹಿಸುವುದಿಲ್ಲ. ಇಂತಹ ಕೃತ್ಯಗಳಲ್ಲಿ ತೊಡಗಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಬಂದಿರುವ ದೂರುಗಳನ್ನು ನೇರವಾಗಿ ಪರಿಶೀಲಿಸಿ, ಉದ್ಯೋಗಾಕಾಂಕ್ಷಿಗಳ ಆತಂಕಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ. ಇದೇ ವೇಳೆ, ಯಾವುದೇ ಸಂಘಟನೆಗಳು ನೇರವಾಗಿ ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುವುದು ಅಥವಾ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಕಚೇರಿ ಮನವಿ…

ಸ್ಟಿಂಗ್ ಕೋಲಾಹಲ: ಕಾಂಗ್ರೆಸ್‌ನಿಂದ ಕೃಪಾ ಆಳ್ವಾ 6 ವರ್ಷಉಚ್ಚಾಟನೆ

ಬೆಂಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಕಾರಣ ಕೇಳಿ ನೋಟಿಸ್ ನೀಡಿದ್ದರೂ ಉತ್ತರಿಸದ ಹಿನ್ನೆಲೆಯಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಸಿಬಿ ಕ್ಲೀನ್‌ಚಿಟ್ ನೀಡಿದ್ದು, ಸ್ಟಿಂಗ್ ಆಪರೇಷನ್ ಪ್ರಕರಣ ಕಟ್ಟುಕಥೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಸ್ಟಿಂಗ್ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಸ್ಟಿಂಗ್ ಹಿಂದೆ ಸ್ವಪಕ್ಷೀಯರ ಕೈವಾಡವಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದರು. ಅವರ ಹೇಳಿಕೆ ಪಡೆಯುವ ಕುರಿತು ಪೊಲೀಸ್ ಅಧಿಕಾರಿಗಳು ಚರ್ಚಿಸಿದ್ದರು ಎನ್ನಲಾಗಿದೆ. ಸ್ಟಿಂಗ್ ತಂಡದಿಂದ ಬ್ಲ್ಯಾಕ್‌ಮೇಲ್ ನಡೆದಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿತ್ತು. ಅಕ್ಟೋಬರ್ 24ರಂದು…

ಸ್ತನ ಕ್ಯಾನ್ಸರ್ ಜಾಗೃತಿಗೆ ವಿಶೇಷ ಸ್ಮರಣಾರ್ಥ ಅಂಚೆಚೀಟಿಗಳ ಬಿಡುಗಡೆ

ನವದೆಹಲಿ: ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಪತ್ತೆ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ ಎರಡು ವಿಶೇಷ ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದೆ. ಡಾಕ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಚೆ ಸೇವೆಗಳ ಮಹಾನಿರ್ದೇಶಕಿ ಮನೀಷಾ ಸಿನ್ಹಾ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಅವರು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಶೇಷ ಅಂಚೆಚೀಟಿ ಹಾಳೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮನೀಷಾ ಸಿನ್ಹಾ, ನಿಯಮಿತ ಆರೋಗ್ಯ ತಪಾಸಣೆ ಮತ್ತು ಆರಂಭಿಕ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳಿದರು. ಮಹಿಳೆಯರು ಸಕಾಲದಲ್ಲಿ ವೈದ್ಯಕೀಯ ಸಲಹೆ ಪಡೆಯಲು ಕುಟುಂಬಗಳು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ಪುಣ್ಯ ಸಲಿಲಾ ಶ್ರೀವಾಸ್ತವ ಅವರು ತಡೆಗಟ್ಟುವ ಆರೋಗ್ಯ ಸೇವೆಗಳ ಮೇಲೆ ಸರ್ಕಾರ ನೀಡುತ್ತಿರುವ ಗಮನವನ್ನು ವಿವರಿಸಿದರು. ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಕುರಿತು…

ಅರ್ನಾಬ್ ಪೀಡಿತ ಪ್ರದೇಶಗಳಲ್ಲಿ ಐಸಿಆರ್ ಸೌಲಭ್ಯ ಸಕ್ರಿಯ; ತುರ್ತು ಸಂಪರ್ಕಕ್ಕಾಗಿ 11 ಮೊಬೈಲ್ ಸೆಲ್ ಘಟಕಗಳ ನಿಯೋಜನೆ

ನವದೆಹಲಿ: ಅರ್ನಾಬ್ ಚಂಡಮಾರುತದಿಂದ ಹಾನಿಗೊಳಗಾಗಿದ್ದ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ದೂರಸಂಪರ್ಕ ಸೇವೆಗಳು ಕ್ರಮೇಣ ಪುನಃಸ್ಥಾಪನೆಯಾಗುತ್ತಿವೆ. ಆಂಧ್ರಪ್ರದೇಶದಲ್ಲಿ ಟೆಲಿಕಾಂ ನೆಟ್‌ವರ್ಕ್ ಲಭ್ಯತೆ ಶೇ. 99.18ಕ್ಕೆ ತಲುಪಿದೆ ಎಂದು ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದೆ. ಭಾರೀ ಮಳೆ, ಹಠಾತ್ ಪ್ರವಾಹ, ಮರಗಳು ಉರುಳಿರುವುದು ಹಾಗೂ ವಿದ್ಯುತ್ ಮೂಲಸೌಕರ್ಯಕ್ಕೆ ಹಾನಿಯಾದ ಹಿನ್ನೆಲೆಯಲ್ಲಿ ಟೆಲಿಕಾಂ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ಸೇವಾ ಪೂರೈಕೆದಾರರೊಂದಿಗೆ ಸಮನ್ವಯ ಸಾಧಿಸಿ ಪುನಃಸ್ಥಾಪನಾ ಕಾರ್ಯ ಕೈಗೊಳ್ಳಲಾಗಿದೆ. ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನೆಟ್‌ವರ್ಕ್ ಲಭ್ಯತೆ ಶೇ. 98.5ರಷ್ಟಿದ್ದರೆ, ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಶೇ. 91.96ರಷ್ಟಿದೆ. ವಿದ್ಯುತ್ ವ್ಯತ್ಯಯ ಮತ್ತು ಸ್ಥಳೀಯ ಆಪ್ಟಿಕಲ್ ಫೈಬರ್ ಕೇಬಲ್‌ಗಳ ಕಡಿತ ಪುನಃಸ್ಥಾಪನೆಗೆ ಪ್ರಮುಖ ಸವಾಲುಗಳಾಗಿವೆ. ಪೀಡಿತ ಜಿಲ್ಲೆಗಳಲ್ಲಿ ಇಂಟ್ರಾ-ಸರ್ಕಲ್ ರೋಮಿಂಗ್ (ಐಸಿಆರ್) ಸೌಲಭ್ಯ ಸಕ್ರಿಯಗೊಳಿಸಲಾಗಿದೆ. ಇದರಿಂದ ಬಳಕೆದಾರರು ತಮ್ಮ ಮೊಬೈಲ್ ಸೇವಾ ಪೂರೈಕೆದಾರರ ನೆಟ್‌ವರ್ಕ್ ಲಭ್ಯವಿಲ್ಲದಿದ್ದರೆ ಮತ್ತೊಂದು ಕಂಪನಿಯ ನೆಟ್‌ವರ್ಕ್ ಬಳಸಬಹುದು. ತುರ್ತು…

ಗುಜರಾತ್‌ನಲ್ಲಿ ₹14,000 ಕೋಟಿಗೂ ಅಧಿಕ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಬನಸ್ಕಾಂತ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ₹14,000 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಹಲವು ಯೋಜನೆಗಳಿಗೆ ಚಾಲನೆ ನೀಡಿದರು. ಕೃಷಿ, ಹೈನುಗಾರಿಕೆ, ಮೂಲಸೌಕರ್ಯ, ಸಾರಿಗೆ ಮತ್ತು ಸಮಾಜ ಕಲ್ಯಾಣ ಕ್ಷೇತ್ರಗಳಿಗೆ ಈ ಯೋಜನೆಗಳು ಸಂಬಂಧಿಸಿವೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ರೈತರು ಮತ್ತು ಪಶುಸಂಗೋಪನೆ ಅಭಿವೃದ್ಧಿ ಹೊಂದಿದ ಭಾರತದ ಪ್ರಮುಖ ಆಧಾರಸ್ತಂಭಗಳು ಎಂದು ಹೇಳಿದರು. ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಸುಮಾರು 10 ಕೋಟಿ ರೈತರಿಗೆ ₹18,000 ಕೋಟಿಗೂ ಅಧಿಕ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದರು. ಗುಜರಾತ್‌ನ 50 ಲಕ್ಷಕ್ಕೂ ಹೆಚ್ಚು ರೈತರಿಗೆ ₹1,000 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿದ್ದು, ಬನಸ್ಕಾಂತದ ರೈತರಿಗೆ ಸುಮಾರು ₹50 ಕೋಟಿ ದೊರೆಯಲಿದೆ ಎಂದರು. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಮೂಲಕ ರೈತರಿಗೆ ₹50 ಲಕ್ಷ ಕೋಟಿಗೂ ಅಧಿಕ ಆರ್ಥಿಕ…

ರಷ್ಯಾದ ಒಳನಾಡಿನವರೆಗೆ ದಾಳಿ ವ್ಯಾಪ್ತಿ ವಿಸ್ತರಣೆ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ಕೈವ್: ರಷ್ಯಾದ ಭೂಪ್ರದೇಶದೊಳಗೆ ದೂರದ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಉಕ್ರೇನ್ ಮತ್ತಷ್ಟು ಹೆಚ್ಚಿಸುತ್ತಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಿದ ದೀರ್ಘ-ಶ್ರೇಣಿಯ ದಾಳಿ ಕಾರ್ಯಾಚರಣೆಗಳ ಫಲಿತಾಂಶಗಳ ಪರಿಶೀಲನೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ಯಮಲ್ ಪ್ರದೇಶದಿಂದ ಪಶ್ಚಿಮ ಸೈಬೀರಿಯಾದವರೆಗೆ ವಿಸ್ತರಿಸಿರುವ ರಷ್ಯಾದ ಪ್ರಮುಖ ಸೌಲಭ್ಯಗಳು ಈಗ ಉಕ್ರೇನ್‌ನ ದೀರ್ಘ-ಶ್ರೇಣಿಯ ದಾಳಿಗಳ ವ್ಯಾಪ್ತಿಗೆ ಬಂದಿವೆ ಎಂದು ಝೆಲೆನ್ಸ್ಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ರಷ್ಯಾದ ಇನ್ನಷ್ಟು ದೂರದ ಪ್ರದೇಶಗಳನ್ನು ಗುರಿಯಾಗಿಸುವ ಸಾಮರ್ಥ್ಯವನ್ನು ವಿಸ್ತರಿಸಲು ಕೈವ್ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ಉಕ್ರೇನಿಯನ್ ಪಡೆಗಳ ನಿಖರ ದಾಳಿಗಳನ್ನು ಶ್ಲಾಘಿಸಿರುವ ಅವರು, ಉಕ್ರೇನ್‌ನ ನಗರಗಳು ಮತ್ತು ಸಮುದಾಯಗಳ ಮೇಲೆ ರಷ್ಯಾ ನಡೆಸುವ ಪ್ರತಿಯೊಂದು ದಾಳಿಗೂ ಪ್ರತಿಕ್ರಿಯೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ. ಈ ಕಾರ್ಯಾಚರಣೆಗಳು ರಷ್ಯಾದ ವಿರುದ್ಧ ಉಕ್ರೇನ್ ಅನುಸರಿಸುತ್ತಿರುವ ದೀರ್ಘ-ಶ್ರೇಣಿಯ ನಿರ್ಬಂಧ…

ಹಾಲಿನ ದರ ಏರಿಕೆ ಸಮರ್ಥಿಸಿಕೊಂಡ ಕರ್ನಾಟಕ ಸರ್ಕಾರ: ₹8 ಹೆಚ್ಚಳದಲ್ಲಿ ₹7 ರೈತರಿಗೆ – ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು: ಹೈನುಗಾರರ ಜೀವನೋಪಾಯ ರಕ್ಷಿಸುವುದರ ಜತೆಗೆ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ನಂದಿನಿ ಉತ್ಪನ್ನಗಳನ್ನು ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ನವೆಂಬರ್ 1ರಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಹಾಲಿನ ದರವನ್ನು ₹8 ಹೆಚ್ಚಿಸಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸರ್ಕಾರ, ಈ ಮೊತ್ತದಲ್ಲಿ ₹7 ನೇರವಾಗಿ ರೈತರಿಗೆ ತಲುಪಲಿದೆ ಎಂದು ಸ್ಪಷ್ಟಪಡಿಸಿದೆ. ಜಾನುವಾರುಗಳ ಮೇವು ಮತ್ತು ಹಿಂಡಿ ದರ ಹೆಚ್ಚಳ, ಇಂಧನ ಹಾಗೂ ಪ್ಯಾಕೇಜಿಂಗ್ ವೆಚ್ಚದ ಏರಿಕೆ ಮತ್ತು ಬರಗಾಲದ ಪರಿಣಾಮವಾಗಿ ದೈನಂದಿನ ಹಾಲಿನ ಸಂಗ್ರಹಣೆಯಲ್ಲಿ ಉಂಟಾಗಿರುವ ಕುಸಿತ ದರ ಪರಿಷ್ಕರಣೆಗೆ ಪ್ರಮುಖ ಕಾರಣಗಳಾಗಿವೆ ಎಂದು ಸಿಎಂ ಕಚೇರಿ ಹೇಳಿದೆ. ರೈತರಿಗೆ ಲೀಟರ್‌ಗೆ ₹47 ಆದಾಯ ದರ ಏರಿಕೆಯ ₹8ರಲ್ಲಿ ₹7 ರೈತರಿಗೆ ಪಾವತಿಯಾಗಲಿದ್ದು, ಪ್ರತಿ ಲೀಟರ್ ಹಾಲಿಗೆ ಸಿಗುತ್ತಿದ್ದ ₹35ರ ಮೊತ್ತ ₹42ಕ್ಕೆ ಹೆಚ್ಚಳವಾಗಲಿದೆ. ಸರ್ಕಾರ ನೀಡುವ ₹5 ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ…

ರೈತರ ಬದುಕಿಗೆ ಭರವಸೆ, ಕೃಷಿಗೆ ಬಲ: ಧಾರವಾಡ ಜಿಲ್ಲೆಯ 99,412 ರೈತರಿಗೆ ₹19.88 ಕೋಟಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ನೆರವು

ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಒದಗಿಸುವ ಕಾರ್ಯ ನಿರಂತರವಾಗಿ ಮುಂದುವರಿದಿದೆ. ಯೋಜನೆಯ 24ನೇ ಕಂತಿನಡಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ ₹2,000 ಜಮೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ದೇಶಾದ್ಯಂತ 9.34 ಕೋಟಿಗೂ ಅಧಿಕ ರೈತ ಫಲಾನುಭವಿಗಳಿಗೆ ಒಟ್ಟು ₹18,680 ಕೋಟಿ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಏಕಕಾಲದಲ್ಲಿ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲೆಯ 99,412 ರೈತರಿಗೆ ಒಟ್ಟು ₹19.88 ಕೋಟಿ ಹಣ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕೃಷಿ ವೆಚ್ಚಗಳಿಗೆ ಸಕಾಲದಲ್ಲಿ ಆರ್ಥಿಕ ಆಸರೆ ಒದಗಿಸುವ ಈ ಯೋಜನೆಯು ರೈತ ಕುಟುಂಬಗಳಿಗೆ ನೆರವಾಗುವುದರ ಜೊತೆಗೆ ಅವರ ಆತ್ಮವಿಶ್ವಾಸವನ್ನೂ ಹೆಚ್ಚಿಸಿದೆ. ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ…

71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ; ನಟಿ ಬಿ. ಸರೋಜಾದೇವಿ, ನಟ ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ

ಬೆಂಗಳೂರು: 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಸಮಾಜಸೇವೆ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಒಂಬತ್ತು ಮಂದಿಗೆ ಪ್ರಶಸ್ತಿ ಲಭಿಸಿದೆ. ಜಾನಪದ ಮತ್ತು ಸಂಕೀರ್ಣ ಕ್ಷೇತ್ರಗಳಲ್ಲಿ ತಲಾ ಏಳು ಮಂದಿ, ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ತಲಾ ಆರು ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದ ನಾಲ್ವರು ಸಾಧಕರಿಗೂ ಗೌರವ ಲಭಿಸಿದೆ. ಸಂಗೀತ, ಚಲನಚಿತ್ರ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತಲಾ ಮೂವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಶಿಲ್ಪಕಲೆ, ಕೃಷಿ, ವಿಜ್ಞಾನ, ಮಾಧ್ಯಮ, ವೈದ್ಯಕೀಯ ಮತ್ತು ಆಡಳಿತ ಕ್ಷೇತ್ರಗಳಲ್ಲಿ ತಲಾ ಇಬ್ಬರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನೃತ್ಯ, ಯಕ್ಷಗಾನ, ಬಯಲಾಟ ಸೇರಿದಂತೆ ಇತರ ಹಲವು ಕ್ಷೇತ್ರಗಳಲ್ಲಿ ತಲಾ ಒಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಸರೋಜಾದೇವಿ, ವಿಷ್ಣುವರ್ಧನ್‌ಗೆ ಮರಣೋತ್ತರ…