ಬೆಂಗಳೂರು: ಬೆಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ, ಮಹಿಳಾ ಸುರಕ್ಷತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು ಪೊಲೀಸ್ ಇಲಾಖೆಯ ನೂತನ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಹೊಸ ಪೊಲೀಸ್ ಆಯುಕ್ತರೇಟ್‌ಗಳ ವ್ಯಾಪ್ತಿಯನ್ನು ಸ್ಪಷ್ಟವಾಗಿ ಗುರುತಿಸಿ, ಆಡಳಿತ ಮತ್ತು ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ ಎಂದರು. ಬೆಂಗಳೂರು ಐಟಿ-ಬಿಟಿ ಹಬ್ ಆಗಿರುವುದರಿಂದ ಮಹಿಳಾ ಉದ್ಯೋಗಿಗಳು, ಟೆಕ್ಕಿಗಳು ಮತ್ತು ಹೂಡಿಕೆದಾರರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು. ದ್ವೇಷ ಭಾಷಣಗಳಿಗೆ ಕಡಿವಾಣ ಹಾಕುವುದರ ಜತೆಗೆ ನೈತಿಕ ಪೊಲೀಸ್‌ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ನಿರ್ದೇಶನ ನೀಡಲಾಗಿದೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಮುಖ ರೌಡಿಶೀಟರ್‌ಗಳನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು.…
Month: November 2026
ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ನಡೆಯುವ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುಭದ್ರ ಮತ್ತು ಪಾರದರ್ಶಕ ವ್ಯವಸ್ಥೆಯಡಿ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆಯುವ ಅಂಕಗಳ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ಗಳಿಸಿರುವ ಅಂಕಗಳನ್ನೂ ಪರಿಗಣಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಿಲ್ಲ ಎಂದು ಹೇಳಿದರು. ನೀಟ್ ಪರೀಕ್ಷೆಯಲ್ಲಿ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ರಾಜ್ಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ದೊರೆಯಬೇಕು. ರಾಷ್ಟ್ರಮಟ್ಟದ ಪರೀಕ್ಷೆಗಳಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ಕಷ್ಟಕರವಾಗಿರುವುದರಿಂದ ಅವರಿಗೆ ಕೃಪಾಂಕ ನೀಡಬೇಕು ಎಂದು ಪ್ರತಿಪಾದಿಸಿದರು. ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳಲ್ಲಿ…
ಫ್ರೀಡಂ ಪಾರ್ಕ್‌ನಲ್ಲಿ ಐದನೇ ದಿನವೂ ಮುಂದುವರಿದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ತಿಂಗಳಿಗೆ ₹15 ಸಾವಿರ ಗೌರವಧನ ನೀಡಬೇಕು ಹಾಗೂ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದ ಸರ್ಕಾರದ ಆದೇಶದ ಪ್ರತಿಯನ್ನು ನೀಡಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ. ಐದು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೇಡಿಕೆಗಳು ಈಡೇರುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳಾ ಕಾರ್ಯಕರ್ತೆಯರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲವೇ? ಸೌಜನ್ಯಕ್ಕಾದರೂ ತಮ್ಮತ್ತ ತಿರುಗಿ ನೋಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಗೌರವಧನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಕಾರ್ಯಕರ್ತೆಯರು, “ಕಲ್ಲುಬಂಡೆಯಂತಿರುವ ಮುಖ್ಯಮಂತ್ರಿಗಳ ಮನಸ್ಸನ್ನೂ…
ಕಾವೇರಿ ಸಮಸ್ಯೆಯಿಂದ ಸದ್ಯಕ್ಕೆ ಮುಕ್ತಿ: ಕರ್ನಾಟಕ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ ಎಂದ ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಕಾವೇರಿ ಜಲವಿವಾದದಲ್ಲಿ ಸದ್ಯದ ಮಟ್ಟಿಗೆ ರಾಜ್ಯಕ್ಕೆ ಸಮಾಧಾನಕರ ಬೆಳವಣಿಗೆ ಕಂಡುಬಂದಿದೆ. ರೈತರು ಮತ್ತು ವಿವಿಧ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಾಲಯದಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ತಮಿಳುನಾಡಿಗೆ ಹೆಚ್ಚುವರಿಯಾಗಿ 11 ಟಿಎಂಸಿ ನೀರು ಹರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದು ತಮಿಳುನಾಡಿನ ಹಿನ್ನಡೆಯಲ್ಲ; ಬದಲಿಗೆ ರಾಜ್ಯಕ್ಕೆ ನ್ಯಾಯ ಸಿಕ್ಕಿರುವ ಬೆಳವಣಿಗೆ ಎಂದರು. “ನಮ್ಮ ರಾಜ್ಯದಲ್ಲಿಯೇ ನೀರಿನ ಕೊರತೆ ಇರುವಾಗ ತಮಿಳುನಾಡಿಗೆ ನೀರು ಬಿಡುವುದು ಹೇಗೆ ಸಾಧ್ಯ? ನಾನು ಜಲಸಂಪನ್ಮೂಲ ಖಾತೆ ವಹಿಸಿಕೊಂಡ ದಿನದಿಂದಲೇ ಕಾವೇರಿ ವಿವಾದ ಎದುರಾಗಿತ್ತು. ಇತಿಹಾಸದಲ್ಲಿ ಮೊದಲ ಬಾರಿಗೆ ರೈತರು ಮತ್ತು ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಾಲಯದಲ್ಲಿ ಹೋರಾಟ ನಡೆಸಿದ್ದೇವೆ. ಸದ್ಯದ ಮಟ್ಟಿಗೆ ಕಾವೇರಿ ಸಮಸ್ಯೆಗಳಿಂದ ಪಾರಾಗಿದ್ದೇವೆ ಎಂಬ ಸಮಾಧಾನವಿದೆ” ಎಂದು ತಿಳಿಸಿದರು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ…
ವಾರದೊಳಗೆ ತುಮಕೂರಿಗೆ, ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ವಾರದೊಳಗೆ ತುಮಕೂರಿಗೆ ಮತ್ತು ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ಯೋಜನೆಯ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಟ್ರಯಲ್ ರನ್‌ಗೆ ಅನುಮತಿ ನೀಡಿದರೆ ವಾರದೊಳಗೆ ತುಮಕೂರಿಗೆ ನೀರು ಹರಿಸಲಾಗುವುದು. ಡಿಸೆಂಬರ್ 15ರಿಂದ 25ರೊಳಗೆ ಟ್ರಯಲ್ ರನ್ ನಡೆಸಲು ಉದ್ದೇಶಿಸಲಾಗಿದೆ ಎಂದರು. ಈಗಾಗಲೇ ಹಾಸನ, ಚಿಕ್ಕಮಗಳೂರು ಮತ್ತು ಕಡೂರಿಗೆ ಎತ್ತಿನಹೊಳೆ ನೀರು ಹರಿಯುತ್ತಿದೆ. ತಿಪಟೂರು, ಗುಬ್ಬಿವರೆಗಿನ ಕಾಮಗಾರಿಗಳು ಪೂರ್ಣಗೊಂಡಿವೆ. ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ನೀರು ತಲುಪಿಸುವ ವಿಶ್ವಾಸ ವ್ಯಕ್ತಪಡಿಸಿದರು. ಯೋಜನೆಗೆ ಈವರೆಗೆ ₹19 ಸಾವಿರ ಕೋಟಿ ವೆಚ್ಚವಾಗಿದ್ದು, ಒಟ್ಟು 252.61 ಕಿ.ಮೀ. ಕಾಮಗಾರಿಯಲ್ಲಿ 232 ಕಿ.ಮೀ. ಪೂರ್ಣಗೊಂಡಿದೆ. ಫೀಡರ್ ಕಾಲುವೆ ನಿರ್ಮಾಣಕ್ಕೆ ಐದು ಕಿ.ಮೀ. ಕಾಮಗಾರಿ ಬಾಕಿಯಿದೆ. ಯೋಜನೆಯಡಿ 527 ಕೆರೆಗಳನ್ನು ತುಂಬಿಸುವ ಗುರಿಯಿದೆ. ಜೂನ್‌ನಿಂದ ಅಕ್ಟೋಬರ್‌ವರೆಗೆ 24 ಟಿಎಂಸಿ ನೀರು…
ಸಮಂತಾ-ರಾಜ್ ದಂಪತಿಗೆ ಗಂಡು ಮಗು ಜನನ; ಮಗುವಿಗೆ ‘ದೇವ್ ನಿಡಿಮೋರು’ ಎಂದು ನಾಮಕರಣ!
ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಮತ್ತು ಚಿತ್ರ ನಿರ್ದೇಶಕ ರಾಜ್ ನಿಡಿಮೋರು ದಂಪತಿ ಜೀವನದಲ್ಲಿ ಹೊಸ ಸಂತಸ ಮನೆಮಾಡಿದೆ. ದಂಪತಿಗೆ ಗಂಡು ಮಗು ಜನಿಸಿದ್ದು, ಈ ಸಿಹಿ ಸುದ್ದಿಯನ್ನು ಸಮಂತಾ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಲ್ಲದೆ, ನವಜಾತ ಶಿಶುವಿನ ಮೊದಲ ಫೋಟೊವನ್ನೂ ಪ್ರಕಟಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಫೋಟೊದಲ್ಲಿ ಸಮಂತಾ ಮತ್ತು ರಾಜ್ ತಮ್ಮ ಪುಟ್ಟ ಮಗುವಿನ ಕೈಬೆರಳುಗಳನ್ನು ಪ್ರೀತಿಯಿಂದ ಹಿಡಿದುಕೊಂಡಿರುವ ಸುಂದರ ಕ್ಷಣ ಸೆರೆಯಾಗಿದೆ. ಮಗುವಿಗೆ ‘ದೇವ್ ನಿಡಿಮೋರು’ ಎಂದು ಹೆಸರಿಟ್ಟಿರುವುದಾಗಿಯೂ ದಂಪತಿ ತಿಳಿಸಿದ್ದಾರೆ. “ನಮ್ಮ ಮುದ್ದಾದ ಗಂಡು ಮಗು ದೇವ್ ನಿಡಿಮೋರು. 19.11.2026. ನಮ್ಮ ಹೃದಯಗಳು ಹಿಂದೆಂದೂ ಇಷ್ಟು ಸಂತೋಷದಿಂದಿರಲಿಲ್ಲ. ಪ್ರೀತಿಯಿಂದ ಸಮಂತಾ ಮತ್ತು ರಾಜ್” ಎಂದು ಫೋಟೊಗೆ ಶೀರ್ಷಿಕೆ ನೀಡಿದ್ದಾರೆ. ಈ ಸಂತಸದ ಸುದ್ದಿ ತಿಳಿಯುತ್ತಿದ್ದಂತೆ ಸಿನಿಮಾ ರಂಗದ ಗಣ್ಯರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ…
ಪ್ರಧಾನಿ ಮೋದಿ ಆಹ್ವಾನಕ್ಕೆ ಭಾರತಕ್ಕೆ ಬರಲಿರುವ ನೇಪಾಳ ಪ್ರಧಾನಿ ಬಾಲೆನ್ ಶಾ; ನ.22ರಿಂದ ಎರಡು ದಿನಗಳ ಭೇಟಿ
ಕಠ್ಮಂಡು: ನೇಪಾಳದ ಪ್ರಧಾನಿ ಬಾಲೆನ್ ಶಾ ಅವರು ನವೆಂಬರ್ 22ರಿಂದ ಎರಡು ದಿನಗಳ ಅಧಿಕೃತ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ನವದೆಹಲಿಗೆ ಆಗಮಿಸಲಿರುವ ಬಾಲೆನ್ ಶಾ, ಅಧಿಕಾರ ವಹಿಸಿಕೊಂಡ ಬಳಿಕ ಕೈಗೊಳ್ಳುತ್ತಿರುವ ಮೊದಲ ಅಧಿಕೃತ ದ್ವಿಪಕ್ಷೀಯ ವಿದೇಶಿ ಪ್ರವಾಸ ಇದಾಗಿದೆ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ಮಾರ್ಚ್ 27ರಂದು ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಾಲೆನ್ ಶಾ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಅಮೆರಿಕಕ್ಕೆ ತೆರಳಿದ್ದರು. ನೇಪಾಳದ ವಿದೇಶಾಂಗ ಕಾರ್ಯದರ್ಶಿ ಅಮೃತ್ ಬಹದ್ದೂರ್ ರೈ ಅವರ ಮಾಹಿತಿ ಪ್ರಕಾರ, ಬಾಲೆನ್ ಶಾ 34 ಸದಸ್ಯರ ಅಧಿಕೃತ ನಿಯೋಗದೊಂದಿಗೆ ನವದೆಹಲಿಗೆ ಆಗಮಿಸಲಿದ್ದಾರೆ. ಹಣಕಾಸು ಸಚಿವ ಸ್ವರ್ಣಿಮ್ ವಾಗ್ಲೆ, ವಿದೇಶಾಂಗ ಸಚಿವ ಶಿಶಿರ್ ಖನಾಲ್…
‘ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ’: ಮುಖ್ಯಮಂತ್ರಿ ಎಚ್ಚರಿಕೆ
ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸರ್ಕಾರ ಸಹಿಸುವುದಿಲ್ಲ. ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಎ ಚ್ಚರಿಕೆ ನೀಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬಸವಣ್ಣನವರು ಕನ್ನಡಿಗರ ಅಸ್ಮಿತೆ. 12ನೇ ಶತಮಾನದಲ್ಲಿಯೇ ಕರ್ನಾಟಕದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸಕ್ಕೆ ಹೊಸ ದಿಕ್ಕು ನೀಡಿದ ಮಹಾನ್ ಚೇತನ. ‘ಅನುಭವ ಮಂಟಪ’ದ ಮೂಲಕ ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಸಮಾನತೆ, ಕಾಯಕ, ದಾಸೋಹ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದ ಬಸವಣ್ಣನವರು ಮಹಾನ್ ಮಾನವತಾವಾದಿ. ಅವರ ಕಾಯಕ ತತ್ವಗಳ ಆಧಾರದಲ್ಲಿಯೇ…
ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ; ಅಂಚೆ ಇಲಾಖೆಯಿಂದ ಹೊಸ ಸೇವೆ
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಭಾರತೀಯ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ದೇವಸ್ಥಾನದ ಪ್ರಸಾದವನ್ನು ಭಕ್ತರು ತಮ್ಮ ಮನೆ ಬಾಗಿಲಿಗೇ ತರಿಸಿಕೊಳ್ಳಬಹುದು. ಇದಕ್ಕಾಗಿ ಶಬರಿಮಲೆ ದೇವಸ್ಥಾನದ ಆವರಣದಲ್ಲೇ ವಿಶೇಷ ಅಂಚೆ ಕೌಂಟರ್ ತೆರೆಯಲಾಗುತ್ತಿದ್ದು, ಅಲ್ಲಿಯೇ ಪ್ರಸಾದ ಬುಕ್ ಮಾಡಿದರೆ ಸಾಕು. ಅಂಚೆ ಇಲಾಖೆ ನೇರವಾಗಿ ಮನೆಗೆ ತಲುಪಿಸಲಿದೆ. ನವೆಂಬರ್ 17ರಿಂದ ಅಯ್ಯಪ್ಪ ಮಂಡಲ ಯಾತ್ರೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸೇವೆ ಒದಗಿಸಲು ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ವಂ ಮಂಡಳಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಲಾಗುವ ವಿಶೇಷ ಪಾರ್ಸೆಲ್ ಕೌಂಟರ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ದೇವಸ್ಥಾನದಲ್ಲೇ ಪ್ರಸಾದ ಬುಕ್ಕಿಂಗ್ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಬಳಿಕ ಭಕ್ತರು ದೇವಸ್ಥಾನದ ಆವರಣದಲ್ಲಿರುವ ಅಂಚೆ ಕೌಂಟರ್‌ಗೆ ತೆರಳಿ ತಮಗೆ…
ರೈಲಿನಲ್ಲಿ ಗುಂಪು ಪ್ರಯಾಣಿಸುವವರಿಗೆ ಗುಡ್‌ನ್ಯೂಸ್; ಗ್ರೂಪ್ ಬುಕಿಂಗ್ ನಿಯಮ ಸರಳೀಕರಣ
ಬೆಂಗಳೂರು: ಮದುವೆ, ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ ಸಿಹಿ ಸುದ್ದಿ ನೀಡಿದೆ. ಗ್ರೂಪ್ ಅಥವಾ ಬಲ್ಕ್ ಟಿಕೆಟ್ ಬುಕಿಂಗ್ ನಿಯಮಗಳನ್ನು ಸರಳಗೊಳಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮೂಲಕ ಹಿಂದಿನ ಎಲ್ಲ ಮಾರ್ಗಸೂಚಿಗಳನ್ನು ರದ್ದುಗೊಳಿಸಲಾಗಿದೆ. ಯಾರಿಗೆ ಅನ್ವಯವಾಗಲಿದೆ ಹೊಸ ನಿಯಮ? ಮದುವೆ ಸಮಾರಂಭಗಳಿಗೆ ತೆರಳುವವರು, ವಿದ್ಯಾರ್ಥಿಗಳು, ಯಾತ್ರಿಕರು, ಕ್ರೀಡಾ ತಂಡಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗುಂಪುಗಳು ಈ ಸೌಲಭ್ಯ ಪಡೆಯಬಹುದು. ನಿರ್ದಿಷ್ಟ ಉದ್ದೇಶಕ್ಕಾಗಿ ಒಟ್ಟಾಗಿ ಪ್ರಯಾಣಿಸುವ ಅಧಿಕೃತ ಗುಂಪುಗಳಿಗೆ ಈ ನಿಯಮ ಅನ್ವಯಿಸುತ್ತದೆ. ದೃಢೀಕೃತ ಟಿಕೆಟ್, ಆರ್‌ಎಸಿ ಹಾಗೂ ಕಾಯುವ ಪಟ್ಟಿಯ ಟಿಕೆಟ್ ಸೇರಿದಂತೆ ಎಲ್ಲ ಪ್ರಯಾಣದ ದರ್ಜೆಗಳಿಗೂ ಇದು ಅನ್ವಯವಾಗಲಿದೆ. ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ಗೆ ಅವಕಾಶ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಪ್ರಮುಖ ರೈಲು…
