ಬೆಂಗಳೂರು: ಪಕ್ಷದ ನಾಯಕರಿಗೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡುವ ರೀತಿಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಪಾ ಆಳ್ವಾ ಅವರನ್ನು ಕಾಂಗ್ರೆಸ್ನಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೃಪಾ ಆಳ್ವಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿ ಉತ್ತರಿಸಲು ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಉತ್ತರ ಬಾರದ ಹಿನ್ನೆಲೆಯಲ್ಲಿ ಉಚ್ಚಾಟನೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ನೋಟಿಸ್ ತಲುಪಿಲ್ಲವೇ ಎಂಬ ಪ್ರಶ್ನೆಗೆ, ಕಳುಹಿಸಿದ್ದ ನೋಟಿಸ್ ವಾಪಸ್ ಬಂದಿದೆ. ಬೇರೆ ವಿಧಿಯಿಲ್ಲದೆ ಕ್ರಮ ಕೈಗೊಳ್ಳಬೇಕಾಯಿತು ಎಂದು ಸ್ಪಷ್ಟಪಡಿಸಿದರು. ಕೃಪಾ ಆಳ್ವಾ ವಿದೇಶಕ್ಕೆ ತೆರಳಿರುವ ಕುರಿತು ಪ್ರತಿಕ್ರಿಯಿಸಿ, ಆ ವಿಚಾರವನ್ನು ಐಬಿ ಮತ್ತು ಸಿಬಿಐ ನೋಡಿಕೊಳ್ಳುತ್ತವೆ ಎಂದರು. ಕ್ರಮ ಕೈಗೊಳ್ಳಲು ವಿಳಂಬವಾದ ಬಗ್ಗೆ ಕೇಳಿದಾಗ, ದುಡುಕಿನ ನಿರ್ಧಾರ ತೆಗೆದುಕೊಳ್ಳದೆ ಸಂಬಂಧಪಟ್ಟವರಿಗೆ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ನೀಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ…
Day: November 1, 2026
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ನಟ ದತ್ತಣ್ಣಗೆ 2026ನೇ ಸಾಲಿನ ಕನ್ನಡ ಭಾರತೀ ರಂಗ ಪ್ರಶಸ್ತಿ
ನವದೆಹಲಿ: ದೆಹಲಿ ಕರ್ನಾಟಕ ಸಂಘವು 2026ನೇ ಸಾಲಿನ ಪ್ರತಿಷ್ಠಿತ ‘ಕನ್ನಡ ಭಾರತೀ ರಂಗ ಪ್ರಶಸ್ತಿ’ಗೆ ಖ್ಯಾತ ರಂಗಭೂಮಿ ಹಾಗೂ ಚಲನಚಿತ್ರ ನಟ ಹೆಚ್.ಜಿ. ದತ್ತಾತ್ರೇಯ (ದತ್ತಣ್ಣ) ಅವರನ್ನು ಆಯ್ಕೆ ಮಾಡಿದೆ. ರಂಗಭೂಮಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ನೀಡಲಾಗುವ ಈ ಪ್ರಶಸ್ತಿಯನ್ನು ದತ್ತಣ್ಣ ಅವರಿಗೆ ಪ್ರದಾನ ಮಾಡಲು ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ದೆಹಲಿ ಕರ್ನಾಟಕ ಸಂಘವು ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ. 2015ರಲ್ಲಿ ಮೊದಲ ಬಾರಿಗೆ ‘ಕನ್ನಡ ಭಾರತೀ’ಯ ಸಂಸ್ಥಾಪಕ ಸದಸ್ಯರಲ್ಲೊಬ್ಬರಾದ ರಂಗಕರ್ಮಿ ಎಂ.ವಿ. ನಾರಾಯಣರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ನಂತರ 2016ರಲ್ಲಿ ಸರೋಜಿನಿ ಶೆಟ್ಟಿ, 2017ರಲ್ಲಿ ಸುರೇಶ್ ಆನಗಳ್ಳಿ, 2021ರಲ್ಲಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, 2022ರಲ್ಲಿ ಶ್ರೀನಿವಾಸ ಜಿ. ಕಪ್ಪಣ್ಣ, 2023ರಲ್ಲಿ ಎಸ್. ದೊಡ್ಡಣ್ಣ, 2024ರಲ್ಲಿ ಡಾ.…
