ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ 71 ಸಾಧಕರನ್ನು ಗೌರವಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದರು. “ವಿವಿಧ ಕ್ಷೇತ್ರಗಳಲ್ಲಿ ನೀವು ಮಾಡಿರುವ ನಿಸ್ವಾರ್ಥ ಸಾಧನೆ ಇಡೀ ಕರುನಾಡಿಗೆ ಹೆಮ್ಮೆ ತಂದಿದೆ. ನಾಡಿನ ಹಿರಿಮೆಯನ್ನು ಹೆಚ್ಚಿಸಿದ ನಿಮ್ಮ ಶ್ರಮ ಮುಂದಿನ ಪೀಳಿಗೆಗೆ ದಾರಿದೀಪವಾಗಿದೆ. ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಬೆಳಗುತ್ತಿರುವ ನಿಮ್ಮ ಸಾಧನೆಯ ಹಾದಿ ನಿರಂತರವಾಗಿರಲಿ” ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಸೇರಿದಂತೆ…
Day: November 2, 2026
‘ನನ್ನನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ’: ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕುಮಾರಸ್ವಾಮಿ ಸವಾಲು
ಬೆಂಗಳೂರು: ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋಮವಾರ ತನಿಖೆಯ ವಿವರಗಳನ್ನು ಬಹಿರಂಗಪಡಿಸುವುದಾಗಿ ಅವರು ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ತನಿಖೆಯ ಪ್ರಗತಿ ಹಾಗೂ ಪೊಲೀಸ್ ಆಯುಕ್ತರು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿದರು. ಸರ್ಕಾರ ಯಾರ ಹಿತಾಸಕ್ತಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂಬುದನ್ನೂ ಬಹಿರಂಗಪಡಿಸುವುದಾಗಿ ಹೇಳಿದರು. ರಾಜ್ಯ ಸರ್ಕಾರ ತನಿಖೆಯ ನೆಪದಲ್ಲಿ ಕೆಲವರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಯಾರಿಂದಲೂ ತಮ್ಮನ್ನು ಮುಟ್ಟಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. “ಮುಖ್ಯಮಂತ್ರಿ ಮತ್ತು ಅಧಿಕಾರಿಗಳು ಸೇರಿದಂತೆ ಈ ಸರ್ಕಾರದಲ್ಲಿ ಯಾರೊಬ್ಬರೂ ಕುಮಾರಸ್ವಾಮಿಯನ್ನು ಮುಟ್ಟಲು ಸಾಧ್ಯವಿಲ್ಲ. ಅವರಿಗೆ ನನ್ನನ್ನು ಕಂಡರೆ ಭಯ” ಎಂದು ಅವರು ಹೇಳಿಕೆ ನೀಡಿದರು.
‘ರಾಷ್ಟ್ರಧ್ವಜದ ಜೊತೆಗೆ ನಾಡಧ್ವಜವೂ ಹಾರಾಡಲಿ’: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಷ್ಟ್ರಧ್ವಜದ ಕೆಳಗೆ ನಾಡಧ್ವಜವೂ ಹಾರಾಡುವಂತಾಗಬೇಕು. ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯದ ಜನತೆ ಒಗ್ಗಟ್ಟಿನಿಂದ ಕೇಂದ್ರಕ್ಕೆ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ನಾಡಧ್ವಜ ಹೊಂದಬಾರದು ಎಂದು ಎಲ್ಲಿಯೂ ಹೇಳಿಲ್ಲ ಎಂದರು. “ಭಾರತದ ಬಲ ಕರ್ನಾಟಕ” ಎಂಬ ಪರಿಕಲ್ಪನೆಯೊಂದಿಗೆ ರಾಜ್ಯ ಬೆಳೆಯಬೇಕು. ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಶೇ.5.5ರಷ್ಟಿದ್ದರೆ, ಆರ್ಥಿಕತೆಯಲ್ಲಿ ರಾಜ್ಯದ ಕೊಡುಗೆ ಶೇ.9.19ರಷ್ಟಿದೆ. ಬೆಂಗಳೂರು ಭಾರತದ ಹೆಬ್ಬಾಗಿಲಾಗಿ ಬೆಳೆದಿದೆ ಎಂದು ಹೇಳಿದರು. 2011ರ ಜನಗಣತಿ ಪ್ರಕಾರ ಬೆಂಗಳೂರಿನಲ್ಲಿ 107 ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಆದರೆ ಶೇ.44.5ರಷ್ಟು ಜನ ಮಾತ್ರ ಕನ್ನಡವನ್ನು ಮಾತೃಭಾಷೆಯಾಗಿ ಹೊಂದಿದ್ದಾರೆ. ಹಿಂದೆ ಶೇ.90ರಷ್ಟು ಜನ ಕನ್ನಡ ಮಾತನಾಡುತ್ತಿದ್ದರು ಎಂದು ತಿಳಿಸಿದ ಅವರು, ಕನ್ನಡದ ಬಳಕೆ ಹೆಚ್ಚಿಸಬೇಕೆಂದರು. ಕನ್ನಡ,…
‘ಮತ ಉಳಿಸಿ–ದೇಶ ಉಳಿಸಿ’ ಸಮಾವೇಶದಲ್ಲಿ ಜನಶಕ್ತಿಯ ಮಹಾಸಂಗಮ: ಜನಧ್ವನಿ ಪ್ರಜಾಪ್ರಭುತ್ವ ಹೋರಾಟಕ್ಕೆ ಹೊಸ ಶಕ್ತಿ: ಬಿ.ಕೆ. ಹರಿಪ್ರಸಾದ್
ಬೆಂಗಳೂರು: ಪ್ರಜಾಪ್ರಭುತ್ವದ ಉಳಿವು ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಮತ ಉಳಿಸಿ–ದೇಶ ಉಳಿಸಿ’ ಬೃಹತ್ ಸಮಾವೇಶಕ್ಕೆ ದೇಶದ ಮೂಲೆಮೂಲೆಗಳಿಂದ ಜನರು ಆಗಮಿಸಿದ್ದು, ಈ ಜನಧ್ವನಿ ಪ್ರಜಾಪ್ರಭುತ್ವದ ಹೋರಾಟಕ್ಕೆ ಹೊಸ ಶಕ್ತಿ ತುಂಬಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇಂಡಿಯಾ ಒಕ್ಕೂಟದ ನಾಯಕರ ನೇತೃತ್ವದಲ್ಲಿ ನಡೆದ ಸಮಾವೇಶವು ಜನಶಕ್ತಿಯ ಮಹಾಸಂಗಮವಾಗಿತ್ತು ಎಂದು ಅವರು ತಿಳಿಸಿದ್ದಾರೆ. ಇದು ಕೇವಲ ರಾಜಕೀಯ ಸಮಾವೇಶವಲ್ಲ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು, ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಜನರು ಒಗ್ಗೂಡಿದ ಐತಿಹಾಸಿಕ ಹೋರಾಟವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಿದ ರಾಜ್ಯದ ಸಾವಿರಾರು ಕಾರ್ಯಕರ್ತರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸ್ವಯಂಸೇವಕ ತಂಡಗಳಿಗೆ…
