ಬೆಂಗಳೂರು: ಕಿತ್ತೂರು ರಾಣಿ ಚನ್ನಮ್ಮ ಜಯಂತಿ ವಿಜಯೋತ್ಸವದ ಅಂಗವಾಗಿ ಹಾಗೂ ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ನಡೆಯಲಿರುವ ಪಂಚಮಸಾಲಿ ಸಮುದಾಯದ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಸಂಘಟನಾ ಸಭೆ ನಡೆಯಿತು. ಪಂಚಮಸಾಲಿ ಸಮುದಾಯಕ್ಕೆ ರಾಜ್ಯದ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪಸಮುದಾಯಗಳಿಗೆ ಕೇಂದ್ರದ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅಮೆರಿಕದ ಪಂಚಮಸಾಲಿ ಮಹಾಸಭಾದ ಸಂಚಾಲಕ ಚಂದ್ರಕಾಂತ್ ಯತ್ನಾತ್ತಿ, ಪಂಚಮಗೌಡ ದ್ಯಾಮನಗೌಡ, ಕಾಕತೀಯ ರಾಜು ಬಾಗೇವಾಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ವಿದ್ಯಾರ್ಥಿ ಪರಿಷತ್ಗೆ ನೇಮಕ LPVP ವಿದ್ಯಾರ್ಥಿ ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷರಾಗಿ ಬೆಂಗಳೂರಿನ ಜೆಎಸ್ಎಸ್ ಕಾಲೇಜಿನ ಬಿ.ಟಿ. ಜೀವನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಬಿರಾದರ್ ಅವರನ್ನು ನೇಮಕ ಮಾಡಲಾಯಿತು. ಅವರಿಗೆ ಸೇವಾ ಜವಾಬ್ದಾರಿಯ ಪ್ರತಿಜ್ಞೆ ಬೋಧಿಸಲಾಯಿತು. ಪ್ರಸಾದ ದಾಸೋಹಿಗಳಾದ ತ್ರಿಭುವನ್ ಗೌಡ ಮತ್ತು…
