ನವದೆಹಲಿ: ಡಿಸೆಂಬರ್ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಸ್ಮೃತಿ ಮಂಧನಾ ಮುನ್ನಡೆಸಲಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ20 ಸೇರಿದಂತೆ ಮೂರೂ ಮಾದರಿಗಳ ತಂಡಗಳಿಗೆ ಅವರನ್ನೇ ನಾಯಕಿಯಾಗಿ ನೇಮಿಸಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ಪ್ರವಾಸದಲ್ಲಿ ಭಾರತ ತಂಡ ಒಂದು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಡಿಸೆಂಬರ್ 9ರಂದು ಗೆಬೆರ್ಹಾದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ. ಡಿಸೆಂಬರ್ 16ರಿಂದ 22ರವರೆಗೆ ಏಕದಿನ ಸರಣಿ ನಡೆಯಲಿದ್ದು, ಡಿಸೆಂಬರ್ 26ರಿಂದ ಬೆನೋನಿಯಲ್ಲಿ ಟಿ20 ಸರಣಿ ಆರಂಭವಾಗಲಿದೆ. ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ದೀಪ್ತಿ ಶರ್ಮಾ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಟಿ20 ತಂಡದ ಉಪನಾಯಕಿ ಜವಾಬ್ದಾರಿಯನ್ನು ಶಫಾಲಿ ವರ್ಮಾ ಅವರಿಗೆ ನೀಡಲಾಗಿದೆ. 15 ಸದಸ್ಯರ ಟೆಸ್ಟ್ ತಂಡದಲ್ಲಿ ಹರ್ಮನ್ಪ್ರೀತ್ ಕೌರ್, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್, ಯಸ್ತಿಕಾ ಭಾಟಿಯಾ…
Day: November 10, 2026
ಕ್ಲೌಡ್ ನೈನ್ ಆಸ್ಪತ್ರೆ ವೈದ್ಯರ ನೀರಲಕ್ಷ್ಯ ಆರೋಪ: ಕೋಮಾದಲ್ಲಿರುವ ಒಂದು ವರ್ಷದ ಮಗುವೀಣೆ ಆರೋಗ್ಯ ವಿಚಾರಿಸಿದ HDK
ಬೆಂಗಳೂರು: ನಾಗರಬಾವಿಯ ಕ್ಲೌಡ್ ನೈನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಒಂದು ವರ್ಷದ ಮಗು ಶಯಾನ ಕೋಮಾಗೆ ತಲುಪಿದೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಜಯನಗರದ ಕ್ಲೌಡ್ ನೈನ್ ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ವೈದ್ಯರು ಹಾಗೂ ಮಗುವಿನ ಪೋಷಕರೊಂದಿಗೆ ಚರ್ಚಿಸಿ, ಮುಂದಿನ ಚಿಕಿತ್ಸೆಯ ಕುರಿತು ಮಾಹಿತಿ ಪಡೆದರು. ಮಗು ಸದ್ಯ ತುರ್ತು ನಿಗಾ ಘಟಕದಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಸಂಪೂರ್ಣ ಗುಣಮುಖವಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. “ಎಷ್ಟೇ ಖರ್ಚಾದರೂ ಪರವಾಗಿಲ್ಲ, ಅಗತ್ಯವಿದ್ದರೆ ಹೊರಗಿನಿಂದ ಮಕ್ಕಳ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ತಿಳಿಸಿದ್ದೇನೆ. ಪೋಷಕರ ಜೊತೆ ನಾನಿದ್ದೇನೆ ಎಂಬ ಭರವಸೆಯನ್ನೂ ನೀಡಿದ್ದೇನೆ. ಮಗು ಗುಣಮುಖವಾಗಿ ಮನೆಗೆ ಮರಳಲಿದೆ ಎಂಬ ಅದಮ್ಯ ವಿಶ್ವಾಸ…
ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ: ಟಿ. ರಘುಮೂರ್ತಿ
ಜಗಳೂರು (ದಾವಣಗೆರೆ), ನ. 9: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಸರ್ಕಾರ ಆದ್ಯತೆ ನೀಡಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು. ಬಿಳಿಚೋಡು ಗ್ರಾಮ ಸೇರಿದಂತೆ ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧೆಡೆ ₹31.82 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಜನಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಅಧಿಕಾರ ಎನ್ನುವುದು ಜನಸೇವೆ ಮಾಡಲು ಸಿಕ್ಕಿರುವ ಅವಕಾಶವಾಗಿದ್ದು, ಅದನ್ನು ಜನರ ಕಲ್ಯಾಣಕ್ಕೆ ಬಳಸಿಕೊಳ್ಳಬೇಕು ಎಂದರು. ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಸುಮಾರು ₹10 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ, ಅದು ಅರ್ಹ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವಿಚಾರ…
