ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಬೇಡ್ತಿ-ವರದಾ (ಹಿರೇವಡ್ಡಟ್ಟಿ) ನದಿ ಜೋಡಣೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಯೋಜನೆಯ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ (NWDA) ಸಿದ್ಧಪಡಿಸುತ್ತಿರುವ ಯೋಜನೆಗೆ ಅಂದಾಜು 9,652.73 ಕೋಟಿ ರೂ. ವೆಚ್ಚವಾಗಲಿದೆ. ಮುಂಗಾರು ಅವಧಿಯಲ್ಲಿ ಬೇಡ್ತಿ ನದಿಯ 524 Mm3 (ಸುಮಾರು 18.5 TMC) ಹೆಚ್ಚುವರಿ ನೀರನ್ನು ಪೈಪ್‌ಲೈನ್ ಮತ್ತು ಲಿಫ್ಟ್ ಮೂಲಕ ತುಂಗಭದ್ರಾ ಉಪ-ಕಣಿವೆಗೆ ಹರಿಸಲು ಉದ್ದೇಶಿಸಲಾಗಿದೆ. ಈ ಪೈಕಿ 77 Mm3 ಕುಡಿಯುವ ನೀರಿಗೆ, 131 Mm3 ಕೈಗಾರಿಕೆಗಳಿಗೆ ಹಾಗೂ 316 Mm3 ಕೃಷಿ ಮತ್ತು ನೀರಾವರಿಗೆ ಬಳಸಲಾಗುತ್ತದೆ. ಯೋಜನೆಯಿಂದ 70,053 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಸುಮಾರು 20.21 ಲಕ್ಷ ಜನರಿಗೆ…
Day: November 18, 2026
ಶಾಲಾ ಆವರಣದಲ್ಲಿ ರಾಜಕೀಯ ಭಾಷಣ, ಮಕ್ಕಳಿಂದ ಘೋಷಣೆ ವಿವಾದ: ಪದ್ಮರಾಜ್ ಪೂಜಾರಿ ಖಂಡನೆ
ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ರಾಜಕೀಯ ಪ್ರೇರಿತ ಭಾಷಣ ಮಾಡಿರುವುದಲ್ಲದೆ, ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ಜ್ಞಾನ ದೇಗುಲಗಳಾಗಿವೆ. ಇಂತಹ ಶೈಕ್ಷಣಿಕ ಆವರಣದಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವುದು ಹಾಗೂ ಮಕ್ಕಳನ್ನು ರಾಜಕೀಯ ಚಟುವಟಿಕೆಗೆ ಬಳಸಿಕೊಂಡಿರುವುದು ಶಿಕ್ಷಣ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾದ ಸಭಾಭವನದ ಉದ್ಘಾಟನೆಗೆ ಶಿಷ್ಟಾಚಾರ ಉಲ್ಲಂಘಿಸಿ ಮುಂದಾಗಿದ್ದನ್ನು ಪ್ರಶ್ನಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು. ಆ ಕಾರ್ಯಕ್ರಮ ರದ್ದಾದ ಬಳಿಕ ಖಾಸಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಶಾಲಾ ವೇದಿಕೆಯನ್ನು…
