ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವುದೇ ಪ್ರಜಾಸೇವೆ ಅಭಿಯಾನದ ಉದ್ದೇಶ: ಡಾ. ಜಿ. ಪರಮೇಶ್ವರ್

ಕೊರಟಗೆರೆ: ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಅಭಿಯಾನ ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು. ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಈ ಅಭಿಯಾನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮವಾಗಿದ್ದು, ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು. ಅಭಿಯಾನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಅರ್ಜಿಗಳನ್ನು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಿದ್ದಾರೆ. ಸಲ್ಲಿಕೆಯಾಗುವ ಅರ್ಜಿಗಳ ಪೈಕಿ ಕನಿಷ್ಠ ಶೇ.50ರಷ್ಟು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಗುರಿಯಿದೆ. ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಮತ್ತು ಕುಣಿಗಲ್‌ನಲ್ಲಿ ಈಗಾಗಲೇ ಕಾರ್ಯಕ್ರಮ ನಡೆದಿದ್ದು, ಇದೀಗ…

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಮುಕ್ತ: ಪ್ರಧಾನಿ ಮೋದಿ

ಖರಗ್‌ಪುರ: ಕಳೆದ 12 ವರ್ಷಗಳಲ್ಲಿ ಭಾರತ ತನ್ನ ಸಾಂಪ್ರದಾಯಿಕ ಚಿಂತನೆಗಳ ಮಿತಿಗಳನ್ನು ಮೀರಿ ದೇಶದ ಸಾಮರ್ಥ್ಯವನ್ನು ಅನಾವರಣಗೊಳಿಸಿದೆ. ಹೊಸ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಬಡವರ ಸಬಲೀಕರಣಕ್ಕೆ ಮಹತ್ವದ ಆದ್ಯತೆ ನೀಡಲಾಗಿದೆ. ಕಳೆದ 12ರಿಂದ 13 ವರ್ಷಗಳಲ್ಲಿ ದೇಶದಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಐಐಟಿ ಖರಗ್‌ಪುರದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಮತ್ತು ಬಡತನ ನಿವಾರಣೆಯಲ್ಲಿ ಆಗಿರುವ ಬದಲಾವಣೆಗಳನ್ನು ವಿವರಿಸಿದರು. ಹಿಂದಿನ ಸರ್ಕಾರಗಳು ಬಡತನ ನಿರ್ಮೂಲನೆ ಕುರಿತು ಕೇವಲ ಘೋಷಣೆಗಳನ್ನು ಮಾಡುತ್ತಿದ್ದವು. ಆದರೆ, ಬಡತನ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದ್ದವು ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಶ್ವ ಬ್ಯಾಂಕ್ ವರದಿಯನ್ನು ಉಲ್ಲೇಖಿಸಿದ ಅವರು, ಕಳೆದ 12ರಿಂದ 13 ವರ್ಷಗಳಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ…