ಬೆಂಗಳೂರು: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದಕ್ಕೆ ಪ್ರಮೋದ್ ಮಧ್ವರಾಜ್ ಸಂತಸ ವ್ಯಕ್ತಪಡಿಸಿದ್ದು, ಪಕ್ಷದ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಅಮರ್ ಪಾಲ್ ಮೌರ್ಯ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕದ ಜನತೆ, ಒಬಿಸಿ ಸಮುದಾಯಗಳು, ಮೀನುಗಾರ ಸಮುದಾಯ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನೀಡುತ್ತಿರುವ ಬೆಂಬಲ ಹಾಗೂ ಪ್ರೀತಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ದೇಶಾದ್ಯಂತ ಒಬಿಸಿ ಸಮುದಾಯಗಳ ಪ್ರಾತಿನಿಧ್ಯ, ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಪ್ರಮೋದ್…
Day: November 23, 2026
ಕ್ರೀಡಾ ಮೀಸಲಾತಿಯಡಿ 1,500 ಹುದ್ದೆ ಕ್ರೀಡಾಪಟುಗಳಿಗೆ ಮೀಸಲು: ಡಾ. ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಅವಕಾಶ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಘೋಷಿಸಿರುವ 72 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ 1,500 ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಅಕ್ಕಿತಿಮ್ಮನಹಳ್ಳಿಯ ಕರ್ನಾಟಕ ರಾಜ್ಯ ಹಾಕಿ ಸ್ಟೇಡಿಯಂನಲ್ಲಿ ಭಾನುವಾರ ಅಜ್ಜಿ ಕುಟ್ಟೀರ ಕುಟುಂಬ ಕ್ರೀಡಾ, ಶಿಕ್ಷಣ ಮತ್ತು ಸಾಂಸ್ಕೃತಿಕ ಧರ್ಮದತ್ತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 27ನೇ ಕೊಡವ ಕುಟುಂಬಗಳ ಹಾಕಿ ಉತ್ಸವ ‘ಅಜ್ಜಿ ಕುಟ್ಟೀರ ಹಾಕಿ ನಮ್ಮೆ’ಯ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ₹1 ಕೋಟಿ ಪ್ರೋತ್ಸಾಹಧನ ನೀಡುತ್ತಿದೆ. ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕ್ರೀಡಾ ಮೀಸಲಾತಿ ಜಾರಿಯಲ್ಲಿದ್ದು, ನೂರಾರು ಕ್ರೀಡಾಪಟುಗಳು ಇದರ ಪ್ರಯೋಜನ ಪಡೆದಿದ್ದಾರೆ.…
