ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಮಂಗಳವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Year: 2026
ಕೆಎಸ್‌ಆರ್‌ಟಿಸಿ ಪ್ರತಿಷ್ಠಿತ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ
ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡಾ 5 ರಿಂದ 15ರವರೆಗೆ ರಿಯಾಯಿತಿ ಘೋಷಿಸಿದೆ. ಈ ರಿಯಾಯಿತಿ ಜನವರಿ 5, 2026ರಿಂದ ಜಾರಿಗೆ ಬರಲಿದೆ. ಬೆಂಗಳೂರು–ಮಂಗಳೂರು, ಬೆಂಗಳೂರು–ಕುಂದಾಪುರ, ಉಡುಪಿ, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಪುತ್ತೂರು, ಮಡಿಕೇರಿ/ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ/ಸಾಗರ ಸೇರಿದಂತೆ ಚೆನ್ನೈ, ಹೈದರಾಬಾದ್/ಸಿಕಂದರಾಬಾದ್, ತಿರುಪತಿ, ಮಂತ್ರಾಲಯ, ಪುಣೆ/ಮುಂಬೈ, ವಿಜಯವಾಡ, ಎರ್ನಾಕುಲಂ, ಮದುರೈ, ಕೋಯಿಮತ್ತೂರು, ತಿರುಶೂರು ಸೇರಿದಂತೆ ಆಯ್ದ ಮಾರ್ಗಗಳಲ್ಲಿ ಈ ರಿಯಾಯಿತಿ ಅನ್ವಯವಾಗಲಿದೆ. ರಾಜಹಂಸ, ನಾನ್‌ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್ ಹಾಗೂ ಮಲ್ಟಿ ಆಕ್ಸಲ್ ಎಸಿ ಸ್ಲೀಪರ್ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ನಿಗಮ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ನಿಗಮ ಮನವಿ ಮಾಡಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.
ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ನಡೆದ ಸುದ್ದಿ ಹರಿದಾಡಿ, ಜೆಜೆ ನಗರ ಉದ್ವಿಗ್ನಗೊಂಡಿದೆ. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್ ಬಳಿ ಮಾಲಾಧಾರಿಗಳು ಕೈಂಕರ್ಯದಲ್ಲಿ ನಿರತರಾಗಿದ್ದಾಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಓಂ ಶಕ್ತಿ ಮಾಲಾಧಾರಿ ಯುವತಿಯರ ತಲೆಗೆ ಕಲ್ಲೇಟು ತಗುಲಿ ಗಾಯಗಳಾಗಿವೆ. ಕೂಡಲೇ ಅವರನ್ನು ದಾಖಲಿಸಲಾಗಿದೆ ಎನ್ನಲಾಗಿದೆ. ಕಲ್ಲು ತೂರಾಟದ ಘಟನೆಯಿಂದ ಕೆರಳಿದ ಮಾಲಾಧಾರಿಗಳು ಜೆಜೆ ನಗರ ಪೊಲೀಸ್ ಸ್ಟೇಷನ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹರಸಾಹಸಪಟ್ಟ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಪದ್ಮರಾಜ್ ಪೂಜಾರಿ ದೂರು; FIR
ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಜಾತ್ರೋತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ವಿಚಾರವಾಗಿ ಪರ–ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಕೆಲವರು ಇದನ್ನು ಉತ್ಸವದ ಸಂದರ್ಭದ ಮನರಂಜನಾ ಆಟವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದನ್ನು ಜಾತ್ರಾ ಸಂಪ್ರದಾಯದ ಭಾಗವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳು ಹರಿದಾಡುತ್ತಿವೆ ಎಂದು ಆರೋಪಿಸಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯೂ ಆಗಿರುವ ಬಿಲ್ಲವ ಸಮುದಾಯದ ಮುಖಂಡ ಪದ್ಮರಾಜ್ ಪೂಜಾರಿ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “Kalyug Kalki Post” ಎಂಬ ಶೀರ್ಷಿಕೆಯಡಿ ಹರಿದಾಡುತ್ತಿರುವ ಒಂದು ಪೋಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿದ್ದು, ಸಮಾಜದಲ್ಲಿ ಅಶಾಂತಿ, ವೈಮನಸ್ಸು ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವ…
ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು
ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರ ಸುದ್ದಿಯಲ್ಲಿರುವ ನಡುವೆಯೇ, ಅವರ ತಾಯಿ ಪುಷ್ಪಾ ವಿರುದ್ಧ ಭೂ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆ ಸುದ್ದಿಯ ಕೇಂದ್ರಬಿಂದುವಾಗಿದೆ. ಹಾಸನದ ವಿದ್ಯಾನಗರದಲ್ಲಿ ಭಾನುವಾರ ಬೆಳಗಿನ ಜಾವ ಜೆಸಿಬಿ ಬಳಸಿ ಕಾಂಪೌಂಡ್ ತೆರವುಗೊಳಿಸಲಾಗಿದೆ. ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಎಂಬುವರಿಗೆ ಸೇರಿದ್ದ ಜಾಗಕ್ಕೆ ಯಶ್ ಅವರ ತಾಯಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಕ್ಷ್ಮಮ್ಮ ಅವರ ಸಂಬಂಧಿ ದೇವರಾಜ್ ಈ ವಿಚಾರವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ನ್ಯಾಯಾಲಯವು ದೇವರಾಜ್ ಪರವಾಗಿ ಆದೇಶ ನೀಡಿದೆ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಜೆಸಿಬಿ ಮೂಲಕ ಕಾಂಪೌಂಡ್ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟ Yash ತಾಯಿ ವಿರುದ್ಧ ಭೂಒತ್ತುವರಿ ಆರೋಪ.. ಯಶ್ ತಾಯಿ ವಿರುದ್ಧ ಜಿಪಿಎ ಹೋಲ್ಡರ್ ದೇವರಾಜು ಕಿಡಿ | #TV9D #TV9Kannada #Yashmother #Yash #Yashmotherpushpa…
ಬಳ್ಳಾರಿ ಬ್ಯಾನರ್ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಗನ್‌ಮ್ಯಾನ್ ಫೈರಿಂಗ್ ಶಂಕೆ
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿಯವರ ಗನ್‌ಮ್ಯಾನ್ ಹಾರಿಸಿದ ಗುಂಡು ತಗುಲಿಯೇ ಯುವಕ ರಾಜಶೇಖರ್ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಬ್ರೂಸ್‌ಪೇಟೆ ಪೊಲೀಸರು ಐದು ಬಂದೂಕುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆಗೂ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಎರಡೂ ಗುಂಪುಗಳ ವಿರುದ್ಧ ಪೊಲೀಸರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ 50ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವೈದ್ಯಕೀಯ ಶಿಕ್ಷಣ ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಸರ್ಕಾರದ ಕ್ರಮ
ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಮುಂದಾಗಿದ್ದಾರೆ. ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬ ಸದಸ್ಯರು ವಿಮಾ ಹಣ ಪಡೆಯಲು ತಾಂತ್ರಿಕ ಸಮಸ್ಯೆಗಳು ಎದುರಾದ ಹಿನ್ನೆಲೆಯಲ್ಲಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲಾ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಟರ್ಮ್ ಇನ್ಶೂರೆನ್ಸ್ ಪಡೆಯಬೇಕೆಂದು…
ತ್ರಿಶೂರ್ ರೈಲು ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ: 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ
ತ್ರಿಶೂರ್: ತಮಿಳುನಾಡಿನ ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಿಲ್ದಾಣದ ಸಮೀಪದ ನಿಗದಿತ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಬಳಿಯಿರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಬೆಳಗ್ಗೆ ಸುಮಾರು 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರತಿದಿನ ನೂರಾರು ಮೋಟಾರ್‌ಸೈಕಲ್‌ಗಳು ಮತ್ತು ಸ್ಕೂಟರ್‌ಗಳು ನಿಲ್ಲಿಸುವ ಈ ಪ್ರದೇಶದಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿ ಭಾರೀ ಹಾನಿ ಉಂಟಾಗಿದೆ. ಪಾರ್ಕಿಂಗ್ ಪ್ರದೇಶದಲ್ಲಿದ್ದ ವಾಹನಗಳಲ್ಲಿ ಇಂಧನ ಇರುವುದರಿಂದ ಬೆಂಕಿ ತ್ವರಿತವಾಗಿ ಹರಡಿದ್ದು, ಕೆಲವೇ ನಿಮಿಷಗಳಲ್ಲಿ ದೊಡ್ಡ ಪ್ರಮಾಣದ ವಾಹನಗಳು ಹೊತ್ತಿ ಉರಿದಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹಲವಾರು ದಳಗಳನ್ನು ನಿಯೋಜಿಸಿ ಸುಮಾರು ಅರ್ಧ ಗಂಟೆಗಳ ಶ್ರಮದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. #Kerala: A…
ಒಡಿಶಾ ಕಲ್ಲು ಗಣಿಯಲ್ಲಿ ಭೂ ಕುಸಿತ: ಹಲವು ಕಾರ್ಮಿಕರ ಸಾವಿನ ಶಂಕೆ
ಭುವನೇಶ್ವರ: ಒಡಿಶಾದ ಧೆಂಕಾನಾಲ್ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ವೇಳೆ ಭಾರಿ ಭೂ ಕುಸಿತ ಸಂಭವಿಸಿ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಶನಿವಾರ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ, ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ. ಘಟನೆ ಸಮಯದಲ್ಲಿ ಗಣಿಯಲ್ಲಿ ಹಲವರು ಕಾರ್ಯನಿರತರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭೂ ಕುಸಿತದ ಮಾಹಿತಿ ದೊರಕಿದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಮುಂದುವರಿದಿದೆ. ಘಟನೆಯ ಸಂಪೂರ್ಣ ವಿವರಗಳು ಮತ್ತು ಸಾವಿನ ನಿಖರ ಸಂಖ್ಯೆಯನ್ನು ಅಧಿಕಾರಿಗಳು ಇನ್ನಷ್ಟೇ ದೃಢಪಡಿಸಬೇಕಿದೆ.
ಬಳ್ಳಾರಿ ಗುಂಡಿನ ದಾಳಿ ‘ಪೂರ್ವಯೋಜಿತ’: ಜನಾರ್ದನ ರೆಡ್ಡಿ ಗುರಿಯಾಗಿಸಿ ದಾಳಿ ಆರೋಪ
ಬಳ್ಳಾರಿ: ನಗರದ ಬ್ಯಾನರ್ ಗಲಾಟೆ ಹಾಗೂ ಗುಂಡಿನ ದಾಳಿ ಪ್ರಕರಣ ರಾಜಕೀಯವಾಗಿ ತೀವ್ರ ತಿರುವು ಪಡೆದುಕೊಂಡಿದ್ದು, ಮಾಜಿ ಸಚಿವರಾದ ಬಿ. ಶ್ರೀರಾಮುಲು ಹಾಗೂ ಗಣಿಗಾರಿಕಾ ಉದ್ಯಮಿ ಜನಾರ್ದನ ರೆಡ್ಡಿ ಅವರು, ಈ ದಾಳಿ ಜನಾರ್ದನ ರೆಡ್ಡಿಯವರನ್ನೇ ಗುರಿಯಾಗಿಸಿಕೊಂಡು ನಡೆಸಿದ ‘ಪೂರ್ವಯೋಜಿತ ದಾಳಿ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಆಕಸ್ಮಿಕ ಘಟನೆ ಅಲ್ಲ. ಜನಾರ್ದನ ರೆಡ್ಡಿಯವರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಸಂಪೂರ್ಣವಾಗಿ ಸುಟ್ಟುಹಾಕುವ ಉದ್ದೇಶದೊಂದಿಗೆ ದಾಳಿ ನಡೆಸಲಾಗಿದೆ,” ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ವಿರುದ್ಧವೂ ಅವರು ಆರೋಪ ಹೊರಿಸಿದರು. “ಕಾಂಗ್ರೆಸ್ ಕಾರ್ಯಕರ್ತರು ಕೇವಲ ಬ್ಯಾನರ್ ಕಟ್ಟಲು ಬಂದಿರಲಿಲ್ಲ. ಜನಾರ್ದನ ರೆಡ್ಡಿಯವರ ಮೇಲೆ ಗುಂಡು ಹಾರಿಸುವ ಹಾಗೂ ಮನೆಗೆ ಬೆಂಕಿ ಹಚ್ಚುವ ಉದ್ದೇಶದಿಂದಲೇ ಬಂದಿದ್ದರು. ಗುಂಡು ಗಾಳಿಗೆ ಹಾರಿಸಲ್ಪಟ್ಟಿಲ್ಲ, ಅದು ನೇರವಾಗಿ ಜನಾರ್ದನ…
