ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ಇತ್ತೀಚಿನ ನಿರ್ಧಾರಗಳನ್ನು ಗಮನಿಸಿದರೆ ಅದರ ಆದ್ಯತೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಒಂದು ಕಡೆ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮತ್ತೊಂದೆಡೆ ಉದ್ಯಾನವನದ ಜಮೀನನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ ಎಂದರು. ಮುಖ್ಯಮಂತ್ರಿಗಳ ಆದ್ಯತೆ ಬಿಡದಿ ಟೌನ್‌ಶಿಪ್, ಕನಕಪುರ ವಿಮಾನ ನಿಲ್ದಾಣ ಅಥವಾ ನೈಸ್ ಯೋಜನೆ ಸ್ವಾಧೀನವೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರೈತರ ಸಂಕಷ್ಟ, ಬಡವರ ಸಮಸ್ಯೆ, ಯುವಕರ ಉದ್ಯೋಗ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿಗೆ ಸರ್ಕಾರ ವೇಗ ನೀಡುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡು ಯುವಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. ಒಬಿಸಿ…

H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

ನವದೆಹಲಿ: ದೇಶದಲ್ಲಿ ಕಾಲೋಚಿತ ಉಸಿರಾಟದ ಕಾಯಿಲೆಗಳ ಪರಿಸ್ಥಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಆರೋಗ್ಯ ಸಂಶೋಧನಾ ಇಲಾಖೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ಸಹಯೋಗದಲ್ಲಿ ರಾಷ್ಟ್ರವ್ಯಾಪಿ ಕಣ್ಗಾವಲು ಜಾಲದ ಮೂಲಕ ನಿಗಾ ವಹಿಸಲಾಗುತ್ತಿದೆ. ಭಾರತದಲ್ಲಿ ಪ್ರಸ್ತುತ ಹರಡುತ್ತಿರುವ ಇನ್ಫ್ಲುಯೆನ್ಸ ವೈರಸ್‌ಗಳು ಇತ್ತೀಚಿನ ವರ್ಷಗಳ ಕಾಲೋಚಿತ ಮಾದರಿಗೆ ಅನುಗುಣವಾಗಿವೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ICMR ಮಹಾನಿರ್ದೇಶಕ ಡಾ. ರಾಜೀವ್ ಬಹ್ಲ್ ತಿಳಿಸಿದ್ದಾರೆ. 73 ICMR-DHR ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳ ಜೀನೋಮಿಕ್ ಕಣ್ಗಾವಲಿನಲ್ಲಿ 2025ರಿಂದ ಭಾರತದಲ್ಲಿ ಹರಡುತ್ತಿರುವ ವಂಶಾವಳಿಗೆ ಸೇರಿದ ಇನ್ಫ್ಲುಯೆನ್ಸ A (H1N1) ವೈರಸ್‌ಗಳು ಪತ್ತೆಯಾಗಿವೆ. ವೈರಸ್‌ನಲ್ಲಿ ಕಂಡುಬಂದ ಆನುವಂಶಿಕ ಬದಲಾವಣೆಗಳು ಸಾಮಾನ್ಯ ಕಾಲೋಚಿತ ‘ಆ್ಯಂಟಿಜೆನಿಕ್ ಡ್ರಿಫ್ಟ್’ಗೆ ಅನುಗುಣವಾಗಿದ್ದು, ಹೊಸ ಅಥವಾ ಹೆಚ್ಚು ಅಪಾಯಕಾರಿ ತಳಿಯ ಉದ್ಭವವನ್ನು ಸೂಚಿಸುವುದಿಲ್ಲ ಎಂದು…

2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

ಅಮರಾವತಿ: 2027ರಲ್ಲಿ ಆಂಧ್ರಪ್ರದೇಶದಲ್ಲಿ ನಡೆಯಲಿರುವ ಗೋದಾವರಿ ಪುಷ್ಕರಕ್ಕೆ ಸುಮಾರು 8ರಿಂದ 10 ಕೋಟಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜೂನ್ 26ರಂದು ಪುಷ್ಕರಂ ಆರಂಭವಾಗಲಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಪುಷ್ಕರದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗೆ ಮಾಹಿತಿ ನೀಡಲಾಗಿದ್ದು, ಒಟ್ಟು ₹4,026 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 2015ರ ಮಹಾ ಪುಷ್ಕರದಲ್ಲಿ ಸುಮಾರು 4.86 ಕೋಟಿ ಭಕ್ತರು ಪವಿತ್ರ ಸ್ನಾನ ಮಾಡಿದ್ದರು. 2027ರಲ್ಲಿ ಪ್ರತಿದಿನ ಸುಮಾರು ಒಂದು ಕೋಟಿ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ವ್ಯವಸ್ಥೆಗಳನ್ನು ಬಲಪಡಿಸಲಾಗುತ್ತಿದೆ. ಜನಸಂದಣಿ ನಿಯಂತ್ರಣಕ್ಕಾಗಿ AI ಆಧಾರಿತ ಜನಸಂದಣಿ ವಿಶ್ಲೇಷಣೆ, ಸಿಸಿಟಿವಿ, ಡ್ರೋನ್ ಕಣ್ಗಾವಲು, QR ಆಧಾರಿತ ವಾಹನ ಗುರುತಿಸುವಿಕೆ ಸೇರಿದಂತೆ ಸುಧಾರಿತ ತಂತ್ರಜ್ಞಾನ ಬಳಸಲಾಗುತ್ತದೆ. ಒಟ್ಟು 440 ಘಾಟ್‌ಗಳನ್ನು…

ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಒಂದು ದಿನ ಬಾಕಿ ಇರುವಂತೆ ನಟ ಯಶ್ ಕರಾವಳಿಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಗಸ್ಟ್ 25ರಂದು ನಿರ್ಮಾಪಕ ವೆಂಕಟ್ ಅವರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿದ ಯಶ್, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಯಶ್ ಹಾಗೂ ವೆಂಕಟ್ ಉಜಿರೆಯ ಸುರಿಯದಲ್ಲಿರುವ ಸದಾಶಿವರುದ್ರ ದೇವಾಲಯಕ್ಕೂ ಭೇಟಿ ನೀಡಿದರು. ‘ಕೆಜಿಎಫ್ 2’ ಬಿಡುಗಡೆ ಸಂದರ್ಭದಲ್ಲೂ ಯಶ್ ಈ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. 2024ರಲ್ಲೂ ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ಹರಕೆ ಸಲ್ಲಿಸಿದ್ದರು. ಸಿನಿಮಾ ಬಿಡುಗಡೆಗೂ ಮುನ್ನ ದೇವಾಲಯಗಳಿಗೆ ಭೇಟಿ ನೀಡುವುದು ಯಶ್ ಪಾಲಿಸಿಕೊಂಡು ಬಂದಿರುವ ಸಂಪ್ರದಾಯವಾಗಿದೆ. ಇದೀಗ ‘ಟಾಕ್ಸಿಕ್’ ಬಿಡುಗಡೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಟೆಂಪಲ್ ರನ್ ಮಾಡಿರುವುದು ಅಭಿಮಾನಿಗಳ…

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ತೀವ್ರ ನೀರಿನ ಅಭಾವದ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸುಮಾರು ₹27 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ಅಗತ್ಯವಿರುವ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿವೆ. ಮೂರು ವಿಶೇಷ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಆರಂಭಿಕ ತಾಂತ್ರಿಕ ಪರೀಕ್ಷೆ ನಡೆಸಲಾಗುವುದು ಎಂದರು. ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಮಾನಿಟರಿಂಗ್ ಹಾಗೂ ತಾಂತ್ರಿಕ ಸಮಿತಿಗಳನ್ನು ರಚಿಸಿ, ಅವುಗಳ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಎರಡು ಉನ್ನತ ಮಟ್ಟದ ಸಭೆಗಳು ನಡೆದಿದ್ದು, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. “ಶೇ.30ರಷ್ಟು ಯಶಸ್ಸು ಸಿಕ್ಕರೂ ಅನುಕೂಲವಾಗಲಿದೆ.…

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ. ಮಾಫಿ ಸಾಕ್ಷಿಯಾಗಲು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು, ಆಗಸ್ಟ್ 25ರಂದು ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಆದೇಶ ಹೊರಡಿಸಿದ್ದಾರೆ. ಪ್ರದೋಷ್‌ಗೆ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲೇ ಇರಬೇಕು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಸತ್ಯಾಂಶಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸಬೇಕು ಎಂದು ಸೂಚಿಸಲಾಗಿದೆ. ಯಾವುದೇ ವಿಚಾರವನ್ನು ಮುಚ್ಚಿಟ್ಟರೆ ಅಥವಾ ಸುಳ್ಳು ಸಾಕ್ಷ್ಯ ನೀಡಿದರೆ ಮಾಫಿ ಸಾಕ್ಷಿ ಸ್ಥಾನವನ್ನು ರದ್ದುಗೊಳಿಸಿ ಮತ್ತೆ ಆರೋಪಿಯನ್ನಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ. ಮಾಫಿ ಸಾಕ್ಷಿಯಾಗಲು ತಮ್ಮ ಮೇಲೆ ಯಾರಿಂದಲೂ ಪ್ರಭಾವ, ಒತ್ತಡ ಅಥವಾ ಬಲವಂತ ಇರಲಿಲ್ಲ…

ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

ಬೆಂಗಳೂರು: ತೆರಿಗೆದಾರರ ಹಣದಲ್ಲಿ ರೈತರಿಂದ ಭತ್ತ ಖರೀದಿಸಿ, ಸಂಗ್ರಹಣೆ ಹಾಗೂ ಸಾಗಣೆ ವೆಚ್ಚವನ್ನೂ ಸರ್ಕಾರವೇ ಭರಿಸಿದ ಬಳಿಕ, ಅದೇ ಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ಸ್ವಾಧೀನ ವೆಚ್ಚಕ್ಕಿಂತ ಸುಮಾರು ಶೇ.40ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಭಾರತದ ಎಥೆನಾಲ್‌ ಗಣಿತವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ. ಆಹಾರ ಭದ್ರತೆಗಾಗಿ ರೈತರಿಂದ ಭತ್ತ ಖರೀದಿಸಲು ತೆರಿಗೆದಾರರ ಹಣ ಬಳಸಲಾಗುತ್ತದೆ. ಬಳಿಕ ಭಾರತೀಯ ಆಹಾರ ನಿಗಮ (FCI) ಮೂಲಕ ಧಾನ್ಯವನ್ನು ಸಂಗ್ರಹಿಸಿ, ಸಾಗಣೆ ಮಾಡುವ ವೆಚ್ಚವನ್ನೂ ಸರ್ಕಾರವೇ ಭರಿಸುತ್ತದೆ. ಇಷ್ಟೆಲ್ಲ ಖರ್ಚು ಮಾಡಿದ ನಂತರ ಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದು ಯಾವ ರೀತಿಯ ಆರ್ಥಿಕ ನೀತಿ ಎಂದು ಖರ್ಗೆ ಪ್ರಶ್ನಿಸಿದ್ದಾರೆ. ತುರ್ತಾಗಿ ಸೃಷ್ಟಿಸಲಾದ ಎಥೆನಾಲ್‌ ಉತ್ಪಾದನಾ ಸಾಮರ್ಥ್ಯಕ್ಕೆ ಕಚ್ಚಾ ವಸ್ತು…

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

ಚಿತ್ರದುರ್ಗ: ದಾವಣಗೆರೆ ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು  ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್‌ ಬಳಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಶಾಸಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ, ಸಂಡೂರು ಮೂಲದ ಸಂದೀಪ್ (45) ಎಂಬುವವರು ಚಲಾಯಿಸುತ್ತಿದ್ದ ಇನೋವಾ ಕಾರು ಕೆ.ಆರ್. ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಶಾಸಕ ಸಮರ್ಥ್ ಅವರ ಕಾರು ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಂದೀಪ್ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಶಾಸಕ ಸಮರ್ಥ್ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಅವರು ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ.…

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಯನ್ನು CID ಮತ್ತಷ್ಟು ಚುರುಕುಗೊಳಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ 329 ಅಭ್ಯರ್ಥಿಗಳಿಗೂ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ನೇಮಕಾತಿ ಅಕ್ರಮ ಹಾಗೂ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾರಿ ನಿರ್ದೇಶನಾಲಯ (ED) 21ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. KPSC ಕಚೇರಿಯಲ್ಲೂ ಶೋಧ ನಡೆಸಿ, ಹಲವು ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿತ್ತು. ತನಿಖೆ ವೇಳೆ ಕೆಲ ಅಭ್ಯರ್ಥಿಗಳು ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ED ಸಂಗ್ರಹಿಸಿದ ಮಾಹಿತಿಯ ಆಧಾರದಲ್ಲಿ CID ತನಿಖೆಯನ್ನು ವಿಸ್ತರಿಸಿದೆ. ಇದೀಗ ನೋಟಿಸ್ ಪಡೆದಿರುವ ಎಲ್ಲಾ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿ, ನೇಮಕಾತಿ ಪ್ರಕ್ರಿಯೆಯಲ್ಲಿ ಅವರ ಪಾತ್ರ ಹಾಗೂ ಅಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಲು CID ಮುಂದಾಗಿದೆ. ತನಿಖೆಯ ಭಾಗವಾಗಿ 329 ಅಭ್ಯರ್ಥಿಗಳಿಂದ ಸಂಗ್ರಹಿಸಲಾಗಿದ್ದ 658 OMR ಕಾರ್ಬನ್…

ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

ಕೊನಾಕ್ರಿ: ಪಶ್ಚಿಮ ಆಫ್ರಿಕಾದ ಗಿನಿ ರಾಜಧಾನಿ ಕೊನಾಕ್ರಿಯಲ್ಲಿ ಭಾರೀ ಮಳೆಯಿಂದ ತ್ಯಾಜ್ಯದ ಬೃಹತ್ ಗುಡ್ಡ ಕುಸಿದು ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೊನಾಕ್ರಿಯ ದಾರ್-ಎಸ್-ಸಲಾಮ್ ಪ್ರದೇಶದಲ್ಲಿರುವ ನಗರದ ಅತಿದೊಡ್ಡ ತೆರೆದ ಕಸ ವಿಲೇವಾರಿ ಸ್ಥಳದಲ್ಲಿ ಮುಂಜಾನೆ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಮಳೆಯಿಂದ ಕಸದ ರಾಶಿ ಕುಸಿದು, ಸಮೀಪದ ಹಲವು ಗುಡಿಸಲುಗಳು ಹಾಗೂ ವಸತಿ ಪ್ರದೇಶಗಳು ಅವಶೇಷಗಳಡಿ ಹೂತುಹೋಗಿವೆ. ರಕ್ಷಣಾ ಸಿಬ್ಬಂದಿ ಸಿಲುಕಿರುವವರಿಗಾಗಿ ಶೋಧ ನಡೆಸುತ್ತಿದ್ದಾರೆ. ಅಪಾಯಕಾರಿ ಸ್ಥಿತಿಯಲ್ಲಿದ್ದ ಈ ಕಸ ವಿಲೇವಾರಿ ಪ್ರದೇಶವನ್ನು ಭಾನುವಾರವೇ ಅಧಿಕೃತವಾಗಿ ಮುಚ್ಚಲು ಯೋಜಿಸಲಾಗಿತ್ತು ಎಂದು ಸೈನಿಕ ಎಂಜಿನಿಯರಿಂಗ್ ಬಟಾಲಿಯನ್‌ನ ಸ್ವಚ್ಛತಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಬಾಲ್ಡ ಮಾಮಾಡೋ ಬೈಲೋ ತಿಳಿಸಿದ್ದಾರೆ. ಪ್ರದೇಶದ ಸುತ್ತಮುತ್ತ ವಾಸಿಸುತ್ತಿದ್ದ ಕುಟುಂಬಗಳಿಗೆ ಈಗಾಗಲೇ ಸ್ಥಳಾಂತರಗೊಳ್ಳುವಂತೆ…