ಉದ್ಯಾನವನ ಜಾಗ ಬಳಕೆ ಸಂಬಂಧ ಕಾನೂನು ಬದಲಾವಣೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ಬೆಂಗಳೂರು: ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ವಿರೋಧಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಅವರು, “ಹಸಿರು ಉದ್ಯಾನವನಗಳು ಮಾರಾಟಕ್ಕಿಲ್ಲ; ಅವು ನಮ್ಮ ಹಕ್ಕು” ಎಂದು ಹೇಳಿದ್ದಾರೆ. ಉದ್ಯಾನವನಗಳ ಜಾಗವನ್ನು ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಬಲಿಯಾಗಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಸಾರ್ವಜನಿಕ ಉದ್ಯಾನವನಗಳ ಒಟ್ಟು ಪ್ರದೇಶದ ಶೇ.5ರಷ್ಟು ಜಾಗವನ್ನು ಮಾರಾಟ, ಗುತ್ತಿಗೆ, ಉಡುಗೊರೆ, ವಿನಿಮಯ ಅಥವಾ ಅಡಮಾನ ಸೇರಿದಂತೆ ವಿವಿಧ ರೀತಿಯಲ್ಲಿ ಬಳಸಲು ಅವಕಾಶ ನೀಡುವ ಪ್ರಸ್ತಾವನೆ ಆತಂಕಕಾರಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. “ಇಂದು ಶೇ.5 ಎನ್ನುತ್ತಾರೆ, ನಾಳೆ ಶೇ.10? ನಂತರ ಸಂಪೂರ್ಣ ಉದ್ಯಾನವನವೇ?” ಎಂದು ಪ್ರಶ್ನಿಸಿರುವ ಅವರು, ಒಮ್ಮೆ ಉದ್ಯಾನವನದ ಜಾಗ ಕಾಂಕ್ರೀಟ್ ಪ್ರದೇಶವಾಗಿ ಪರಿವರ್ತನೆಯಾದರೆ ಅದನ್ನು ಮತ್ತೆ ಹಸಿರು…

ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಬಹುದು. ತುಮಕೂರು ಹಾಗೂ ಮಂಡ್ಯದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲೂ ಮಳೆಯ ಸಾಧ್ಯತೆಯಿದೆ. ಧಾರವಾಡ,…

KEA ಸಿಇಟಿ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ; ಆ.24ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ UGCET-2026 ಕೋರ್ಸ್‌ಗಳ ಎರಡನೇ ಸುತ್ತಿನ ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿ-ಫಾರ್ಮಾ, ಡಿ-ಫಾರ್ಮಾ, ಬಿಪಿಟಿ, ಬಿಪಿಒ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಸೇರಿದಂತೆ ವಿವಿಧ ಕೋರ್ಸ್‌ಗಳ ಸೀಟು ಹಂಚಿಕೆ ವಿವರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಇದರ ಜೊತೆಗೆ UGNEET-2026 ಅಡಿಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆ.24ರ ಸಂಜೆ 4ರವರೆಗೆ ಅವಕಾಶ ಸೀಟು ಹಂಚಿಕೆಯಲ್ಲಿ…

ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

ನವದೆಹಲಿ: ದೆಹಲಿಯ ಐಟಿಒ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಾಗೂ ದೆಹಲಿಯ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ಪಿಡಬ್ಲ್ಯುಡಿ ಕಚೇರಿ ಬಳಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಲಕ್ಷ್ಮೀನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ಇನ್ನೋವಾ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ. ಎಸ್‌ಯುವಿಯಲ್ಲಿ ಅಭಯ್ ಪಾಟೀಲ್ ಮತ್ತು ಅನಿಲ್ ಝಾ ಪ್ರಯಾಣಿಸುತ್ತಿದ್ದರು. ಸ್ವಿಫ್ಟ್ ಕಾರನ್ನು 32 ವರ್ಷದ ಆಶುತೋಷ್ ಪಾಂಡೆ ಚಲಾಯಿಸುತ್ತಿದ್ದು, ಅವರೊಂದಿಗೆ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳು ಇದ್ದರು. ಅಪಘಾತದಲ್ಲಿ ಎರಡೂ ವಾಹನಗಳಲ್ಲಿದ್ದವರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ತಕ್ಷಣ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ…

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ಹೈದರಾಬಾದ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಅದ್ಧೂರಿ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿ ಆವರಣದಲ್ಲಿ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಟ ಯಶ್, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು, ಸಚಿವ ಹಾಗೂ ಶಿಕ್ಷಣ ಸಂಸ್ಥೆಗಳ ಮಾಲೀಕ ಮಲ್ಲಾ ರೆಡ್ಡಿ, ನಿರ್ಮಾಪಕ ದಿಲ್ ರಾಜು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಆಗಮಿಸಿದ್ದರು. ಯಶ್ ವೇದಿಕೆ ಮೇಲೆ ಮಾತನಾಡುತ್ತಿದ್ದ ವೇಳೆ ಕೆಲವರು ಸೌಂಡ್ ಬಾಕ್ಸ್ ಅಳವಡಿಸಿದ್ದ ಕಬ್ಬಿಣದ ಪೈಪ್‌ಗಳ ರಚನೆಯ ಮೇಲೆ ಏರಿ ಕುಳಿತಿದ್ದರು ಎನ್ನಲಾಗಿದೆ. ಹೆಚ್ಚಿನ ಭಾರದಿಂದ ಸೌಂಡ್ ಬಾಕ್ಸ್ ಕೆಳಗೆ ಬಿದ್ದಿದ್ದು, ಅದರೊಂದಿಗೆ ಪೈಪ್‌ಗಳಿಂದ ನಿರ್ಮಿಸಿದ್ದ ರಚನೆಯೂ…

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಬೆಂಗಳೂರು: ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆಯಿಂದ ಲಾಭ ಪಡೆಯುತ್ತಿದ್ದು, ಕಬ್ಬು ಬೆಳೆಗಾರರಿಗೆ ಮಾತ್ರ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ಆರೋಪಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಮಾತನಾಡಿದ ಅವರು, ಮಳೆ ಕೊರತೆ ಹಾಗೂ ಬರಗಾಲದಿಂದ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಕಬ್ಬಿನ ಇಳುವರಿ ಕುಸಿದಿದ್ದು, ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ. ಹೀಗಾಗಿ ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ‘ಬ್ರೆಜಿಲ್ ಮಾದರಿಯಲ್ಲಿ ವೈಜ್ಞಾನಿಕ ಕಬ್ಬು ನೀತಿ ರೂಪಿಸಿ’ ದೊಡ್ಡ ಸಕ್ಕರೆ ಕಾರ್ಖಾನೆಗಳಿಗೆ ಮಾತ್ರ ಎಥನಾಲ್ ಉತ್ಪಾದನೆಯ ಲಾಭ ಸೀಮಿತವಾಗಬಾರದು. ರೈತರು ಸ್ಥಳೀಯ ಆಲೆಮನೆಗಳಲ್ಲಿಯೇ ಎಥನಾಲ್ ಉತ್ಪಾದಿಸಲು ಸರಳ ನಿಯಮಗಳನ್ನು ರೂಪಿಸಬೇಕು ಎಂದು ಶಾಂತಕುಮಾರ್ ಆಗ್ರಹಿಸಿದ್ದಾರೆ. ರೈತರು ಉತ್ಪಾದಿಸುವ ಎಥನಾಲ್ ಅನ್ನು ಅಡುಗೆ ಇಂಧನವಾಗಿ ಹಾಗೂ…

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ. ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಇವರು ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಎಂಟು ಮಂದಿ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಘಟನೆ ಕುರಿತು ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು ದೂರದಲ್ಲಿ ಪನಾಮಾ ಧ್ವಜದ ‘ಎಂವಿ ಓಷನ್ ವಿನ್ನರ್’ ಸರಕು ಹಡಗು ಬಂಗಾಳ ಕೊಲ್ಲಿಯಲ್ಲಿ ಮುಳುಗಿದೆ. ಹಡಗಿನಲ್ಲಿದ್ದ 24 ಸಿಬ್ಬಂದಿಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ. ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು 72,100 ಟನ್ ಕಬ್ಬಿಣದ ಅದಿರು ಸಾಗಿಸುತ್ತಿತ್ತು. ಆಗಸ್ಟ್ 20ರಂದು ರಾತ್ರಿ 10.42ಕ್ಕೆ ಪಾರದೀಪ್ ಬಂದರಿನಿಂದ ಹೊರಟಿತ್ತು. ಸಿಬ್ಬಂದಿಯಲ್ಲಿ 20 ಮಂದಿ ಚೀನಾ, ಮೂವರು ಮ್ಯಾನ್ಮಾರ್ ಹಾಗೂ ಒಬ್ಬರು ಬಾಂಗ್ಲಾದೇಶದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಡಗಿನೊಂದಿಗೆ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಕಂಪನಿಯು ಶನಿವಾರ ಬೆಳಗ್ಗೆ ಭಾರತೀಯ ಕರಾವಳಿ ಪಡೆಯ ಸಾಗರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ನೀಡಿತ್ತು. ತಕ್ಷಣ ಕಾರ್ಯಾಚರಣೆ ಆರಂಭಿಸಿದ MRCC, ಸಮೀಪದಲ್ಲಿದ್ದ MT ಐಸೋಪೋಸ್ ಹಡಗನ್ನು ಶೋಧ ಕಾರ್ಯಕ್ಕೆ ನಿಯೋಜಿಸಿತು. ರಾತ್ರಿ 8ರ ಸುಮಾರಿಗೆ ಎರಡು ರಕ್ಷಣಾ ತೆಪ್ಪಗಳಿಂದ ಇಬ್ಬರು ಸಿಬ್ಬಂದಿಯನ್ನು…

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

ಬೆಂಗಳೂರು: ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ಸರ್ಕಾರದ ಕ್ರಮಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಪೋಸ್ಟ್ ಮಾಡಿರುವ ಅವರು, “ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಐತಿಹಾಸಿಕ ಬೆಂಗಳೂರಿನ ಭವಿಷ್ಯವನ್ನೇ ಹಾಳು ಮಾಡಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ?” ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು ‘ಗಾರ್ಡನ್ ಸಿಟಿ’ ಎಂಬ ಹೆಗ್ಗಳಿಕೆ ಸರ್ಕಾರದ ಕೊಡುಗೆಯಲ್ಲ. ಹಲವು ತಲೆಮಾರುಗಳ ಜನರ ಪರಿಶ್ರಮದಿಂದ ಉಳಿದಿರುವ ಹಸಿರಿನಿಂದ ನಗರ ಈ ಸ್ಥಾನ ಪಡೆದಿದೆ ಎಂದು ಅವರು ಹೇಳಿದ್ದಾರೆ. ‘ಪಾರ್ಕ್‌ಗಳು ರಿಯಲ್ ಎಸ್ಟೇಟ್‌ಗಾಗಿ ಖಾಲಿ ಜಾಗವಲ್ಲ’ ಪಾರ್ಕ್‌ಗಳು ರಿಯಲ್ ಎಸ್ಟೇಟ್‌ಗಾಗಿ ಮೀಸಲಿಟ್ಟ ಖಾಲಿ ಜಾಗವಲ್ಲ, ಅವು ನಗರದ “ಶ್ವಾಸಕೋಶ” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಈಗಾಗಲೇ ಕಾಂಕ್ರೀಟೀಕರಣ, ವಾಯುಮಾಲಿನ್ಯ, ಹೆಚ್ಚುತ್ತಿರುವ…

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಹಬ್ಬದ ಸೀಸನ್‌ಗೂ ಮುನ್ನ ಸಕ್ಕರೆ ಬೆಲೆ ಏರಿಕೆ ಹಾಗೂ ದಾಸ್ತಾನು ಕುಸಿತದ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ಸರ್ಕಾರದ ನೀತಿಗಳ “ಕಹಿ” ಸಕ್ಕರೆಯ “ಸಿಹಿ”ಯಲ್ಲೂ ಸೇರಿದೆ ಎಂದು ಟೀಕಿಸಿ ಕೇಂದ್ರದ ಮುಂದೆ ಮೂರು ಪ್ರಶ್ನೆಗಳನ್ನು ಇಟ್ಟಿದ್ದಾರೆ. ಭಾರತದ ಸಕ್ಕರೆ ದಾಸ್ತಾನು 9 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿರುವುದೇಕೆ ಎಂದು ಪ್ರಶ್ನಿಸಿರುವ ಅವರು, ರಫ್ತು ನಿಲ್ಲಿಸಿ 10 ಲಕ್ಷ ಟನ್ ಸಕ್ಕರೆಯನ್ನು ಸುಂಕಮುಕ್ತವಾಗಿ ಆಮದು ಮಾಡಿಕೊಳ್ಳುವ ಅಗತ್ಯ ಏಕೆ ಬಂತು ಎಂದು ಕೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಸಕ್ಕರೆ ಬೆಲೆ ಸುಮಾರು 40% ಏರಿಕೆಯಾಗಿದೆ ಎಂದು ಖರ್ಗೆ ಆರೋಪಿಸಿದ್ದು, ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಹೊರೆ ಗ್ರಾಹಕರ ಮೇಲೆ ಬೀಳಲು ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಪೆಟ್ರೋಲ್‌ನಲ್ಲಿ…