ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದೆ. ಅಲ್ಪಸಂಖ್ಯಾತ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹಲವಾರು ಭಾಗಗಳನ್ನು ಆವರಿಸಿರುವ ಹಿಂಸಾಚಾರ ಶನಿವಾರದಂಡು ಮತ್ತೆ ಮೂವರನ್ನು ಬಲಿತೆಗೆದುಕೊಂಡಿದೆ.
ಶುಕ್ರವಾರ ಸುಟಿಯ ಸಜುರ್ ಕ್ರಾಸಿಂಗ್‌ನಲ್ಲಿ ನಡೆದ ಹಿಂಸಾಚಾರದ ಇಬ್ಬರ ಸಾವಿಗೆ ಕಾರಣವಾಯಿತೆಂದು ಹೇಳಲಾಗಿದೆ. ಬಿಜೆಪಿಯ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಮತ್ತು ಪಶ್ಚಿಮ ಬಂಗಾಳದ ಪಕ್ಷದ ಕೇಂದ್ರ ವೀಕ್ಷಕ ಅಮಿತ್ ಮಾಳವಿಯಾ ಅವರು ಹತ್ಯೆಗೀಡಾದ ತಂದೆ ಮತ್ತು ಮಗನ ಶವಗಳನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಪ್ರತಿಭಟನೆಗಳ ಹೆಸರಿನಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಈ ನಡುವೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಾವೇದ್ ಶಮೀಮ್ ತಿಳಿಸಿದ್ದಾರೆ.