4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ವಾರಣಾಸಿ: ಬನಾರಸ್ ರೈಲು ನಿಲ್ದಾಣ ಶನಿವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. 4 ಹೊಸ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಾಯಿತು.


ಪ್ರಧಾನಿ ನರೇಂದ್ರ ಮೋದಿ ಅವರು ಈ ಹೊಸ ರೈಲುಗಳಿಗೆ ಚಾಲನೆ ನೀಡಿದರು. ಬನಾರಸ್-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಈ ರೈಲುಗಳು ಕಾರ್ಯನಿರ್ವಹಿಸಲಿವೆ.

ಈ ನಗರಗಳ ನಡುವೆ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಸುದೀರ್ಘ ಆಗ್ರಹಗಳಿತ್ತು. ಇದೀಗ ಈ ಅರೆ-ಹೈ-ಸ್ಪೀಡ್ ರೈಲುಗಳು ಪ್ರಮುಖ ನಿಲ್ದಾಣಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಹಲವು ರಾಜ್ಯಗಳನ್ನು ಸಂಪರ್ಕಿಸುವುದರಿಂದ ಔದ್ಯೋಗಿಕ ಕ್ಷೇತ್ರಕ್ಕೂ ಅನುಕೂಲವಾಗಲಿದೆ ಎಂದು ನಂಬಲಾಗಿದೆ.

Related posts