ಅತ್ತಿಬೆಲೆ ಪಟಾಕಿ ದುರಂತ: ಸಮಗ್ರ ತನಿಖೆಗೆ ಸಿಎಂ ಸೂಚನೆ

ಮೈಸೂರು:  ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಬಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಪಟಾಕಿ ದುರಂತ ಬಗ್ಗೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯಸಂಭವಿಸಿದ ದುರಂತದಲ್ಲಿ 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಲೈಸೆನ್ಸ್ ಪಡೆದು ಪಟಾಕಿಗಳನ್ನು ತಯಾರಿಸಲಾಗಿದೆಯೇ, ನಿಯಮ ಮೀರಿ ಪಟಾಕಿ ಪೂರೈಸಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Related posts