‘ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ’
ಬೆಂಗಳೂರಿನಲ್ಲಿ ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.
ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.
ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.