ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ನಿಂತಿಲ್ಲ; ಸರ್ಕಾರದ ವಿರುದ್ದ ಬಿಜೆಪಿ ಟೀಕಾಸ್ತ್ರ

ಬೆಂಗಳೂರು: ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಸರ್ಕಾರ ನಿಲ್ಲಿಸಿಲ್ಲ. ಇದೊಂದು ಎಟಿಎಂ ಸರಕಾರ; ಇದೊಂದು ಲೂಟಿ ಸರಕಾರ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, .ವರ್ಗಾವಣೆ ದಂಧೆ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನಡೆಸಿದ ಎಫ್‍ಡಿಎ ಪರೀಕ್ಷೆಯಲ್ಲಿ 20 ಜನರಿಗೆ ನಿಗದಿತ ಅವಧಿಗೆ ಬದಲಿಗೆ ಒಂದು ಗಂಟೆ ಹೆಚ್ಚುವರಿ ಅವಧಿಯನ್ನು ನೀಡಿದ್ದು ಯಾಕೆ? ಎಂದು ಕೇಳಿದ ಅವರು, ಈ ಸಂಬಂಧ 9 ಜನರನ್ನು ಮಾತ್ರ ಬಂಧಿಸಲಾಗಿದೆ. ಯಾಕೆ ಆರ್.ಡಿ.ಪಾಟೀಲ್ ಬಂಧಿಸಿಲ್ಲ? ನಿಮ್ಮ ಕಾರ್ಯಕರ್ತನೆಂದು ಬಂಧಿಸಿಲ್ಲವೇ ಎಂದು ಕೇಳಿದರು.

ಈ ವಿಷಯವನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಳ್ಳಲಿದೆ. ಕೂಡಲೇ ಆರೋಪಿಗಳೆಲ್ಲರನ್ನು ಬಂಧಿಸಿ ಎಂದು ಅವರು ಆಗ್ರಹಿಸಿದರು. ಕಲಬುರ್ಗಿ, ಯಾದಗಿರಿಯಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದ ಅವರು, ಅಧಿಕಾರಿಗಳು, ಸಚಿವರ ಸಹಕಾರ ಇಲ್ಲದೆ ಹೀಗಾಗಲು ಸಾಧ್ಯವಿಲ್ಲ ಎಂದು ರವಿಕುಮಾರ್ ಆರೋಪಿಸಿದರು. ಇದರ ಬಗ್ಗೆ ಸಮಗ್ರ ತನಿಖೆ ಮಾಡಿಸಲು ಒತ್ತಾಯಿಸಿದರು. ಈ ಕುರಿತು ಅಧ್ಯಯನಕ್ಕೆ ತಂಡವೊಂದು ಕಲಬುರ್ಗಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.

Related posts