ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ದಲಿತರು, ಮಹಿಳೆಯರು, ಒಕ್ಕಲಿಗರ ಬಗ್ಗೆ ಕೀಳು ಮಟ್ಟದ ಅವಹೇಳನಕಾರಿಯಾಗಿ ಮಾತನಾಡಿರುವ, ಲಂಚಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟನ ನಡೆಯಿತು.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಉಪಾಧ್ಯಕ್ಷ ಎಂ ನಾರಾಯಣ ಸ್ವಾಮಿ, ಆರ್.ವಿ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಸೇರಿದಂತೆ ಕಾರ್ಯಾಕರ್ತರು ಭಾಗವಹಿಸಿದರು.

Related posts