5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026 ಉದ್ಘಾಟಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ಆಯೋಜಿಸಿದ್ದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026 ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಇಂತಹ ಕ್ರೀಡಾಕೂಟಗಳು ಯುವ ಪ್ರತಿಭೆಗಳ ಕೌಶಲ್ಯ ಮತ್ತು ಸಾಮರ್ಥ್ಯ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಲಿವೆ. ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಕರ್ನಾಟಕದ ಕೀರ್ತಿ ಹೆಚ್ಚಿಸಲಿ ಎಂದು ಮುಖ್ಯಮಂತ್ರಿ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯರು ಹಾಗೂ ಕೆಒಎ ಅಧ್ಯಕ್ಷ ಕೆ. ಗೋವಿಂದರಾಜ್ ಮತ್ತು ಚಲನಚಿತ್ರ ನಟ ಪ್ರೇಮ್ ಉಪಸ್ಥಿತರಿದ್ದರು.

Related posts