6 ಮಂದಿ ಅನರ್ಹ ಶಾಸಕರು ಬಿಜೆಪಿಗೆ ; ಬೇಗ್ ದೂರ ದೂರ 

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿರುವ, ಕರ್ನಾಟಕದಲ್ಲಿ ಕೇಸರಿ ಪಕ್ಷದ ಆಡಳಿತ ಮತ್ತೆ ಆರಂಭಿಸಲು ಕಾರಣಕರ್ತರಾದ ನಾಯಕರು ಇನ್ನು ಅಧಿಕೃತವಾಗಿ ಬಿಜೆಪಿ ಸೇನಾನಿಗಳು. ರಾಜಯಃ ಬಿಜೆಪಿ ಕಚೇರಿ ಬಳಿ ನಡೆದ ಸಮಾರಂಭದಲ್ಲಿ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ರೋಷನ್ ಬೇಗ್ ಹೊರತುಪಡಿಸಿ ಇನ್ನುಳಿದ 16 ಮಂದಿ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು.

ರಮೇಶ್ ಜಾರಕಿಹೊಳಿ (ಗೋಕಾಕ್), ಪ್ರತಾಪ್ ಗೌಡ ಪಾಟೀಲ್(ಮಸ್ಕಿ), ಮಹೇಶ್ ಕುಮಟಳ್ಳಿ (ಅಥಣಿ), ಬೈರತಿ ಬಸವರಾಜ (ಕೆ.ಆರ್.ಪುರ), ಶ್ರೀಮಂತ ಪಾಟೀಲ (ಕಾಗಾವಾಡ), ಡಾ.ಸುಧಾಕರ್ ಕೆ (ಚಿಕ್ಕಬಳ್ಳಾಪುರ), ಎಸ್ ಟಿ ಸೋಮಶೇಖರ್ (ಯಶವಂತಪುರ), ಮುನಿರತ್ನ (ರಾಜರಾಜೇಶ್ವರಿ), ಎಂ.ಟಿ.ಬಿ ನಾಗರಾಜ್ (ಹೊಸಕೋಟೆ), ಆರ್. ಶಂಕರ್ (ರಾಣೆಬೆನ್ನೂರು), ಬಿ.ಸಿ.ಪಾಟೀಲ್ (ಹಿರೇಕೆರೂರು), ಆನಂದ್ ಸಿಂಗ್ (ವಿಜಯನಗರ), ಶಿವರಾಂ ಹೆಬ್ಬಾರ್ (ಯಲ್ಲಾಪುರ), ಎಚ್. ವಿಶ್ವನಾಥ್ (ಹುಣಸೂರು), ಕೆ.ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್), ಕೆ.ಸಿ.ನಾರಾಯಣ ಗೌಡ (ಕೆ.ಆರ್.ಪೇಟೆ) ಅವರನ್ನು ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

Related posts