ಬೆಂಗಳೂರು: ರಾಜ್ಯದಲ್ಲಿ ಡ್ರ್ಯಾಗ್ ಮಾಫಿಯಾ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಇನ್ನೊಂದೆಡೆ ಈ ವಿಚಾರದಲ್ಲಿ ರಾಜಕೀಯ ನಾಯಕರ ವಾಕ್ಸಮರ ಸಾಗಿದೆ.
ಡ್ರಗ್ ಮಾಫಿಯಾ ಹಣ ಬಿಜೆಪಿ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಆದರೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ‘ನಾನು ಯಾವ ಮುಂಬೈಗೂ ಹೋಗಿಲ್ಲ. ಮಾಜಿ ಮುಖ್ಯಮಂತ್ರಿಗಳಾಗಿ ಇಂತಹ ಗಂಭೀರ ಆರೋಪ ಮಾಡಬಾರದು. ಆರೋಪ ಮಾಡಿದರೆ ಅದಕ್ಕೆ ಪುರಾವೆಯನ್ನೂ ನೀಡಬೇಕು. ಬಿಜೆಪಿ ಅಂತಹ ಅನೈತಿಕ ಕೆಲಸವನ್ನೂ ಎಂದೂ ಮಾಡಿಲ್ಲ. ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ. ತಾವು ತಲೆ ಕೆಡಿಸಿಕೊಳ್ಳುವ ಅಗತ್ಯವೇನಿದೆ?’ ಎಂದು ಪ್ರಶ್ನಿಸಿದ್ದಾರೆ.
‘ನಾನು ಮಾಜಿ ಮುಖ್ಯಮಂತ್ರಿ, ಪ್ರಧಾನಮಂತ್ರಿಯ ಮಗನಲ್ಲ. ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ’ ಎಂದು ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೇನಿ ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ?(3/7)
— Dr Sudhakar K (Modi ka Parivar) (@DrSudhakar_) August 31, 2020
ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ?(2/7)
— Dr Sudhakar K (Modi ka Parivar) (@DrSudhakar_) August 31, 2020
ನಾನು ಕೇಳಿದ್ದು ಡ್ರಗ್ ಮಾಫಿಯಾ ಆರೋಪದ ಹಿನ್ನಲೆಗಳ ಬಗ್ಗೆ, ಮಾಜಿ ಮುಖ್ಯಮಂತ್ರಿಗಳಾಗಿ, ಡ್ರಗ್ ಮಾಫಿಯಾ ಹಣದಿಂದ ಸರ್ಕಾರ ಬಂದಿದೆ ಎಂದು ಚುನಾಯಿತ ಸರ್ಕಾರದ ಮೇಲಿನ ಬೇಜಾವಾಬ್ದಾರಿ ಹೇಳಿಕೆಯ ಹಿನ್ನಲೆ ಬಗ್ಗೆ! ಬಿಜೆಪಿ ಅನೈತಿಕ ಕೆಲಸವನ್ನು ಎಂದೂ ಮಾಡಿಲ್ಲ, ಮಾಡುವುದಿಲ್ಲ. ಅದಕ್ಕೆ 2ಸ್ಥಾನದಿಂದ 303 ಸ್ಥಾನಗಳನ್ನು ಜನ ಆಶೀರ್ವದಿಸಿದ್ದಾರೆ.(1/7)
— Dr Sudhakar K (Modi ka Parivar) (@DrSudhakar_) August 31, 2020