ಯಾರೋ ಮಾಡಿದ ತಪ್ಪಿಗೆ ರೈತರನ್ನು ದೂಷಿಸುವುದು ಸರಿಯಲ್ಲ: ಬಿ.ಸಿ.ಪಾಟೀಲ್

ಹಾವೇರಿ: ಯಾರೋ ಒಬ್ಬರು ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ. ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ‌.ಪಾಟೀಲ್‌ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಆ್ಯಪ್ ಬೆಳೆ ಸಮೀಕ್ಷೆ ಪ್ರಾಯೋಗಿಕ ಹಂತದಲ್ಲಿಯೇ ಯಶಸ್ವಿಯಾಗುತ್ತಿರುವುದು ಹೆಮ್ಮೆಯ ವಿಚಾರ.2017ರಲ್ಲಿ ಬೆಳೆ ಸಮೀಕ್ಷೆ ಮಾಡಿದಾಗ ಸುಮಾರು 3 ಸಾವಿರ ರೈತರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.ಆದರೀಗ ಆ್ಯಪ್ ಬೆಳೆ ಸಮೀಕ್ಷೆಯಲ್ಲಿ ಸೆ.11 ರ ಸಂಜೆವರೆಗೆ 76ಲಕ್ಷ ತಾಕುಗಳು ಸಮೀಕ್ಷೆಯಾಗಿರುವುದು ಹಮ್ಮೆಯ ವಿಚಾರ. ರೈತರು ಬಹಳ ಆಸಕ್ತಿಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆ್ಯಪ್ ಬೆಳೆ ಸಮೀಕ್ಷೆ ನಡೆಸುವುದು ಅತ್ಯವಶ್ಯಕ ಎಂದರು.

ಕೆಲವೆಡೆ ನೆಟ್ ಪ್ರಾಬ್ಲಂ‌ನಿಂದಾಗಿ ತಡವಾಗಿದೆ.ಈಗ ಖಾಸಗಿ ನಿವಾಸಿಗಳ ಮೂಲಕವೂ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

Related posts