ಬೆಂಗಳೂರು: ನಟರಾಗಲೀ, ನಟಿಯರಾಗಲೀ ಯಾರೂ ತಪ್ಪುಮಾಡಿದರೂ ಅದು ತಪ್ಪೇ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಡ್ರಗ್ಸ್ ದಂಧೆ ತನಿಖೆ ನಡೆಯುತ್ತಿದೆ.ಅಪರಾಧಿಗಳಾರು ಎಂಬುದು ತನಿಖೆಯಿಂದ ಪತ್ತೆಯಾಗಲಿದೆ ಎಂದರು.
ಈ ಹಿಂದೆ ತಮ್ಮ ಅವಧಿಯಲ್ಲಿನ ಚಿತ್ರರಂಗದಲ್ಲಿ ಪರಿಶುದ್ಧ ವಾತಾವರಣವಿತ್ತು. ಶೂಟಿಂಗ್ ವೇಳೆಯಲ್ಲಿ ಸಣ್ಣತಪ್ಪಾದರೂ ಪಶ್ಚಾತ್ತಾಪ ಪಡುವಂತಹ ವಾತಾವರಣವಿತ್ತು. ಈಗ ಚಿತ್ರರಂಗದಲ್ಲಿ ಡ್ರಗ್ ವಿಚಾರ ಕೇಳಿಬಂದಿರುವುದು ಬೇಸರದ ಸಂಗತಿ ಎಂದವರು ಹೇಳಿದ್ದಾರೆ.
ಈ ಹಾವಳಿ ಎಲ್ಲಾ ಎಂಗದಲ್ಲಿಯೂ ಇದೆ. ಚಿತ್ರರಂಗದಲ್ಲಾಗಿರುವುದು ಬಹಳ ಬೇಗ ಎದ್ದು ಕಾಣುತ್ತದೆ ಎಂದು ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.