ಬೆಂಗಳೂರಿನ ಟೆಕ್‌ ಸಮಿಟ್‌ನಲ್ಲಿ ವರ್ಚುಯಲ್‌ ವಿಶ್ವರೂಪ!

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮುಂಚೂಣಿ ರಾಜ್ಯ ಕರ್ನಾಟಕವು, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಹಮ್ಮಿಕೊಂಡಿರುವ ಬೆಂಗಳೂರು ಟೆಕ್‌ ಸಮಿಟ್-‌2020 ಅನೇಕ ಕಾರಣಗಳಿಗೆ ಮಹತ್ವದ್ದೆನಿಸಿದ್ದು, ಜಗತ್ತೇ ಒಂದು ಗ್ರಾಮ ಎನ್ನುವ ಪರಿಕಲ್ಪನೆಯನ್ನು ಮತ್ತಷ್ಟು ವಿಸ್ತಾರಗೊಳಿಸಿದೆ.

ಕೋವಿಡ್‌ ಪೀಡೆಯು ಅಂಕೆಗೆ ಬಾರದ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಹಾಗೂ ಅನೇಕ ದೇಶಗಳು ಕೈಚೆಲ್ಲಿ ಕೂತಿರುವುದರ ನಡುವೆಯೇ ಕ್ರಿಯಾಶೀಲವಾಗಿ ಹೂಡಿಕೆಯ ಆಕರ್ಷಣೆ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ದಾಪುಗಾಲು ಇಟ್ಟಿರುವ ರಾಜ್ಯವು, 25ಕ್ಕೂ ಹೆಚ್ಚು ದೇಶಗಳನ್ನು ಒಂದೇ ಒಂದು ವರ್ಚುಯಲ್ ವೇದಿಕೆಯಲ್ಲಿ ಒಗ್ಗೂಡಿಸಿ ತಂತ್ರಜ್ಞಾನದ ವಿಶ್ವರೂಪವನ್ನು ಜಗತ್ತಿಗೆ ಪರಿಚಯಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಟೆಕ್‌ ಸಮಿಟ್-2020 ಚಾಲಕಶಕ್ತಿ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, “ಇದೊಂದು ಅಸಾಧಾರಣ ಹೆಜ್ಜೆ. ಕೋವಿಡ್‌ನಂಥ ಮಾರಕ ಪಿಡುಗಿನ ನಡುವೆಯೇ ಈ ಶೃಂಗವನ್ನು ಹಮ್ಮಿಕೊಳ್ಳಲಾಗಿದೆ. ವೈರಸ್‌ ಉಪಟಳದಿಂದ ಕಂಗೆಟ್ಟಿರುವ ಜಗತ್ತಿನ ಎಲ್ಲಡೆಯಂತೆ ರಾಜ್ಯದ ಮೇಲೂ ಒತ್ತಡ ಬಿದ್ದಿದೆ. ಹಾಗಂತ ಯಾವುದೂ ನಿಲ್ಲುವಂತಿಲ್ಲ. ಕೋವಿಡ್‌ ನಂತರ ರಾಜ್ಯವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕು ಎಂಬ ನಮ್ಮ ಸಂಕಲ್ಪಕ್ಕೆ ಸಾಕ್ಷಿಯಾಗಿ ಈ ಟೆಕ್‌ ಸಮಿಟ್‌ ಬಂದಿದೆ. ತಂತ್ರಜ್ಞಾನ ನಮ್ಮ ಇಚ್ಛಾಶಕ್ತಿಗೆ ಬಲ ತುಂಬಿದೆ” ಎನ್ನುತ್ತಾರೆ.

Related posts