ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಒಂದೆಡೆ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಅಖಾಡದಲ್ಲಿದ್ದರೆ ಇನ್ನೊಂದೆಡೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಸರಿ ಸೈನ್ಯ ಹೋರಾಟಕ್ಕಿಳಿದಿದೆ.
ದೆಹಲಿಯಲ್ಲಿ ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಬಾಕಿ ಇರುವ ಹಣ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರು ಭಾನುವಾರ ಭಾರೀ ಪ್ರತಿಭಟನೆ ನಡೆಸಿದರು.
ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಸಿಎಂ ನಿವಾಸ ಬಳಿ ಇದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಹೇಳಿಕೆ ನೀಡಿರುವ ಬಿಜೆಪಿ ನಾಯಕರು, ಮಹಿಳಾ ಕೌನ್ಸಿಲರ್‌ಗಳು ತಮ್ಮ ಖಾಸಗಿತನ ಕಾಪಾಡಿಕೊಳ್ಳಲು ಈ ಕ್ರಮಕ್ಕೆ ಮುಂದಾಗಿದ್ದಾರೆಂದು ಹೇಳಿಕೊಂಡಿದ್ದಾರೆ.