ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ; ಹೊಸ  ರೀತಿಯಲ್ಲಿ ಅನುಷ್ಠಾನ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು  ಸುರಕ್ಷತಾ ಕ್ರಮಗಳೊಂದಿಗೆ ಹೊಸ  ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ  ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು ಎಂದು ಅವರು ತಿಳಿಸಿದ್ದಾರೆ.

Related posts