ಜೆಡಿಎಸ್-ಬಿಜೆಪಿ ವಿಲೀನದ ಮಾತುಗಳು ಸತ್ಯಕ್ಕೆ ದೂರ; ಬಿಎಸ್ವೈ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ವಿಲೀನದ ಮಾತುಗಳು ಸತ್ಯಕ್ಕೆ ದೂರವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಯಾವುದೇ ಜೆ.ಡಿ.ಎಸ್. ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಬೆಳವಣಿಗೆ ಇಲ್ಲ ಎಂದಿದ್ದಾರೆ. ಈ ಕುರಿತ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts