ಬೆಂಗಳೂರು: ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಒಪ್ಪಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೂರದೃಷ್ಟಿ ಇರುವ ರಾಷ್ಟç ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಈ ನಿರ್ಣಯದಿಂದ ಸಾಮಾಜಿಕ ಸಮಾನತೆಯ ಕನಸು ನನಸಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸನ್ಮಾನ್ಯ ಪ್ರಧಾನಿನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ಯೋಜನೆಯಡಿ 59,048 ಕೋಟಿ ರೂಪಾಯಿಗಳನ್ನು ಮುಂದಿನ 5 ಶೈಕ್ಷಣಿಕ ವರ್ಷಗಳಲ್ಲಿ ನೀಡಲಿದ್ದು, ಸಮುದಾಯದ ಭಾಗ್ಯದ ಬಾಗಿಲನ್ನು ತೆರೆದಂತಾಗಿದ್ದು, ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ಶ್ರೀ ಕಟೀಲ್ ಅವರು ತಿಳಿಸಿದ್ದಾರೆ. ಇದರಿಂದ ಕಡು ಬಡತನದಿಂದ ಉನ್ನತ ಶಿಕ್ಷಣಕ್ಕೆ ತೆರಳಲು ಸಾಧ್ಯವಾಗದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರವಾಗÀಲಿದೆ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದರಿಂದ ಅವ್ಯವಹಾರದ ಅವಕಾಶವೇ ಇರಲಾರದು ಎಂದೂ ಅವರು ತಿಳಿಸಿದ್ದಾರೆ.